ಕನ್ನಡಪ್ರಭ ವಾರ್ತೆ ಬೆಂಗಳೂರು
ಬೆಳಗ್ಗೆ 10.30ಕ್ಕೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸಂಸದ ತೇಜಸ್ವಿ ಸೂರ್ಯ ಮತ್ತು ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಈ ಸಮುದಾಯ ಭವನ ಮತ್ತು ಸಭಾಂಗಣವನ್ನು ಲೋಕಾರ್ಪಣೆಗೊಳಿಸಲಿದ್ದಾರೆ.
ಬೆಂಗಳೂರು ಮಹಾನಗರದಲ್ಲಿ ಕಲ್ಯಾಣ ಮಂಟಪಗಳ ಬಾಡಿಗೆ ದರವ ದಿನವೊಂದಕ್ಕೆ ಕನಿಷ್ಠ ಐದಾರು ಲಕ್ಷ ರು.ಗೂ ಹೆಚ್ಚಾಗಿರುವ ಕಾರಣ ಮಧ್ಯಮ, ಕೆಳಮಧ್ಯಮ, ಬಡ ಕುಟುಂಬಗಳ ಸದಸ್ಯರ ವಿವಾಹ, ನಿಶ್ಚಿತಾರ್ಥ, ಆರತಕ್ಷತೆ ಮೊದಲಾದ ಶುಭಕಾರ್ಯಗಳನ್ನು ಮಾಡುವುದು ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಶುಭ ಸಮಾರಂಭಗಳಿಗೆ ಅತಿ ಕಡಿಮೆ ವೆಚ್ಚದಲ್ಲಿ ಕಲ್ಯಾಣ ಮಂಟಪ ದೊರಕಿಸಿಕೊಡುವ ಉದ್ದೇಶದಿಂದ ಬಿಬಿಎಂಪಿ ವತಿಯಿಂದ ಈ ಹವಾನಿಯಂತ್ರಿತ ಅ.ನ.ಕೃ ಸಮುದಾಯದ ಭವನ ನಿರ್ಮಿಸಲಾಗಿದೆ.ಅಂತೆಯೆ ಸಿನಿಮಾ ಬಿಡುಗಡೆ ಪೂರ್ವ ಕಾರ್ಯಕ್ರಮಗಳು, ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ, ಸಾಂಸ್ಕೃತಿಕ, ರಂಗಭೂಮಿ ಕಾರ್ಯಕ್ರಮಗಳು, ಶಾಲಾ-ಕಾಲೇಜು ವಾರ್ಷಿಕೋತ್ಸವ ಮೊದಲಾದ ಕಾರ್ಯಕ್ರಮಗಳನ್ನು ನಡೆಸಲು ಸುಸಜ್ಜಿತ ಡಾ.ಪುನೀತ್ ರಾಜ್ ಕುಮಾರ್ ಸಭಾಂಗಣ ನಿರ್ಮಿಸಲಾಗಿದೆ. ಇದೀಗ ಲೋಕಾರ್ಪಣೆ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್.ರಮೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.