ಅನಂತ ಶ್ರೀ ವಿಭೂಷಿತ ಶಿವಸುಜ್ಞಾನ ತೀರ್ಥ ಸ್ವಾಮಿ ಆಶೀರ್ವಚನ

KannadaprabhaNewsNetwork |  
Published : May 15, 2026, 01:30 AM IST
14ಎಚ್ಎಸ್ಎನ್3  :ಅರೆಮಾದನಹಳ್ಳಿ ಮಠದಲ್ಲಿ ನಡೆದ ಸಾಮೂಹಿಕ ಉಪನಯನದಲ್ಲಿ ಪರಮಪೂಜ್ಯ  ಜಗದ್ಗುರುಗಳು ಅಶಿರ್ವಚನ ನೀಡಿದರು.   | Kannada Prabha

ಸಾರಾಂಶ

ಅರೆಮಾದನಹಳ್ಳಿ ವಿಶ್ವಕರ್ಮ ಜಗದ್ಗುರು ಮಹಾಸಂಸ್ಥಾನ ಮಠದಲ್ಲಿ ನಡೆದ ಸಾಮೂಹಿಕ ಉಪನಯನ ಉಭಯ ಗುರುದ್ವಯರ ದಿವ್ಯಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಅವರು ಮನುಷ್ಯ ತನ್ನ ಬುದ್ಧಿಶಕ್ತಿಯನ್ನು ಸತ್ಕಾರ್ಯಗಳಿಗೆ ಸದ್ಭಳಕೆ ಮಾಡಿಕೊಳ್ಳಬೇಕು, ಪ್ರಾಣಿಪಕ್ಷಿಗಳಿಗೆ ಸಾಮಾನ್ಯ ಜ್ಞಾನ ನೀಡಿರುವ ಭಗವಂತ ಮನುಷ್ಯನಿಗೆ ಮಾತ್ರ ಉನ್ನತ ಜ್ಞಾನಾರ್ಜನೆ ಕರುಣಿಸಿದ್ದಾನೆ. ಮನುಷ್ಯ ಉನ್ನತ ಅಲೋಚನೆ ಬೆಳೆಸಿಕೊಳ್ಳಬೇಕು. ಸತ್ಕಾರ್ಯಗಳು ಸದಾ ಕಾಲ ಶಾಶ್ವತವಾಗಿರುತ್ತವೆ. ದುಶ್ಚಟ ದುರಭ್ಯಾಸಗಳಿಂದ ದೂರವುಳಿದು ಬದುಕಿನಲ್ಲಿ ಶಾಂತಿ, ನೆಮ್ಮದಿ ಕಂಡುಕೊಳ್ಳಬೇಕು ಎಂದು ಶ್ರೀಗಳು ಹೇಳಿದರು.

ಕನ್ನಡಪ್ರಭ ವಾರ್ತೆ ರಾಮನಾಥಪುರಧರ್ಮ, ಸಂಸ್ಕೃತಿ ಹಾಗೂ ಸಂಪ್ರದಾಯಗಳ ಉಳಿವು, ಬೆಳವಣಿಗೆಗೆ ನಮ್ಮ ಸಮಾಜ ಸದಾ ಬದ್ಧವಾಗಿದೆ. ಮಠಮಂದಿರಗಳು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ನೈತಿಕ ಮೌಲ್ಯಗಳನ್ನು ಬಲಪಡಿಸುವ ಕೇಂದ್ರಗಳಾಗಿವೆ. ಇಂತಹ ಆಧ್ಯಾತ್ಮಿಕ ಕಾರ್ಯಕ್ರಮಗಳು ಸಮಾಜವನ್ನು ಏಕೀಕರಿಸುವ ಶಕ್ತಿಯಾಗಿದೆ ಎಂದು ಅರೇಮಾದನಹಳ್ಳಿ ವಿಶ್ವಬ್ರಾಹ್ಮಣ ಮಹಾಸಂಸ್ಥಾನ ಮಠದ ಪೀಠಾಧೀಶ್ವರ ಜಗದ್ಗುರು ಅನಂತ ಶ್ರೀ ವಿಭೂಷಿತ ಶಿವಸುಜ್ಞಾನ ತೀರ್ಥ ಮಹಾಸ್ವಾಮಿಗಳು ಹೇಳಿದರು. ಅರೆಮಾದನಹಳ್ಳಿ ವಿಶ್ವಕರ್ಮ ಜಗದ್ಗುರು ಮಹಾಸಂಸ್ಥಾನ ಮಠದಲ್ಲಿ ನಡೆದ ಸಾಮೂಹಿಕ ಉಪನಯನ ಉಭಯ ಗುರುದ್ವಯರ ದಿವ್ಯಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಅವರು ಮನುಷ್ಯ ತನ್ನ ಬುದ್ಧಿಶಕ್ತಿಯನ್ನು ಸತ್ಕಾರ್ಯಗಳಿಗೆ ಸದ್ಭಳಕೆ ಮಾಡಿಕೊಳ್ಳಬೇಕು, ಪ್ರಾಣಿಪಕ್ಷಿಗಳಿಗೆ ಸಾಮಾನ್ಯ ಜ್ಞಾನ ನೀಡಿರುವ ಭಗವಂತ ಮನುಷ್ಯನಿಗೆ ಮಾತ್ರ ಉನ್ನತ ಜ್ಞಾನಾರ್ಜನೆ ಕರುಣಿಸಿದ್ದಾನೆ. ಮನುಷ್ಯ ಉನ್ನತ ಅಲೋಚನೆ ಬೆಳೆಸಿಕೊಳ್ಳಬೇಕು. ಸತ್ಕಾರ್ಯಗಳು ಸದಾ ಕಾಲ ಶಾಶ್ವತವಾಗಿರುತ್ತವೆ. ದುಶ್ಚಟ ದುರಭ್ಯಾಸಗಳಿಂದ ದೂರವುಳಿದು ಬದುಕಿನಲ್ಲಿ ಶಾಂತಿ, ನೆಮ್ಮದಿ ಕಂಡುಕೊಳ್ಳಬೇಕು ಎಂದು ಶ್ರೀಗಳು ಹೇಳಿದರು.

ಅರೇಮಾದನಹಳ್ಳಿ ಕಿರಿಯ ಶ್ರೀಗಳಾದ ಜಗದ್ಗುರು ಅನಂತ ಶ್ರೀ ವಿಭೂಷಿತ ಜ್ಲಾನಘನ ವಿದ್ಯಾತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡಿ ಯಾವುದೇ ಓರ್ವ ವ್ಯಕ್ತಿ ಯಶಸ್ಸನ್ನು ಸಾಧಿಸಬೇಕೆಂದರೆ ಅವನ ಮುಂದೆ ಗುರಿ ಇರಬೇಕು, ಹಿಂದೆ ಗುರುವಿರಬೇಕು ಎನ್ನುವ ನಂಬಿಕೆಯಿದೆ. ಗುರುವಿಲ್ಲದೆ ಜೀವನಕ್ಕೆ ಅಥವಾ ಜ್ಞಾನಕ್ಕೆ ಯಾವುದೇ ರೀತಿಯ ಅರ್ಥವಿರುವುದಿಲ್ಲ. ನಮ್ಮ ಮೊದಲ ಗುರು ತಾಯಿ ನಮಗೆ ಜೀವನದ ಅರ್ಥವನ್ನು ನೀಡುತ್ತಾಳೆ. ಅದೇ ರೀತಿ ಜೀವನಕ್ಕೆ ಅಗತ್ಯವಾದ ಜ್ಞಾನವನ್ನು ಗುರು ನೀಡುತ್ತಾನೆ. ಅಂದರೆ, ಗುರುವಿಲ್ಲದೆ ಏನೂ ಸಾಧ್ಯವಿಲ್ಲ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಈ ನಾಡಿನ ಭಕ್ತರು ಆಗಮಿಸಿ ಉಪನಯನ ಪಡೆದರು. ‌ ‌

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈತರ ಒಳಿತಿಗಾಗಿ ಪರ್ಜನ್ಯ ಹೋಮ: ವಿದ್ವಾನ್ ಪ್ರಸಾದ್
ನಾಳೆ ಜಾಗತಿಕ ಲಿಂಗಾಯುತ ಮಹಾಸಭಾ ಉದ್ಘಾಟನೆ