ಅಣತಿ ಆನಂದ್ ಹಾಗೂ ಬೆಂಬಲಿಗರು ಕಾಂಗ್ರೆಸ್‌ ಸೇರ್ಪಡೆ

KannadaprabhaNewsNetwork |  
Published : May 31, 2025, 12:28 AM IST
ಬಿಜೆಪಿ ಪ್ರಭಾವಿ ನಾಯಕ ಅಣತಿ ಆನಂದ್ ಜೊತೆಗೆ ನೂರಕ್ಕೂ ಹೆಚ್ಚು ಜನ ಬಿಜೆಪಿ ಹಾಗೂ ಜೆಡಿಎಸ್ ಪಕ್ಷವನ್ನು ತೊರೆದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. | Kannada Prabha

ಸಾರಾಂಶ

ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಪ್ರಭಾವಿ ನಾಯಕ ಅಣತಿ ಆನಂದ್ ಜೊತೆಗೆ ನೂರಕ್ಕೂ ಹೆಚ್ಚು ಜನ ಬಿಜೆಪಿ ಹಾಗೂ ಜೆಡಿಎಸ್ ಪಕ್ಷವನ್ನು ತೊರೆದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಮರಳಿ ಗೂಡಿಗೆ ಎಂಬಂತೆ ಸಿದ್ದರಾಮಯ್ಯನವರು ಹಾಗೂ ಡಿ. ಕೆ. ಶಿವಕುಮಾರ್‌ರವರ ಮಾತುಕತೆ ನಂತರ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇವೆ, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ತಾಲೂಕಿನಲ್ಲಿ ಅಧಿಕಾರಕ್ಕೆ ತರುವುದು ನಮ್ಮ ಉದ್ದೇಶವಾಗಿದೆ ಎಂದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಪ್ರಭಾವಿ ನಾಯಕ ಅಣತಿ ಆನಂದ್ ಜೊತೆಗೆ ನೂರಕ್ಕೂ ಹೆಚ್ಚು ಜನ ಬಿಜೆಪಿ ಹಾಗೂ ಜೆಡಿಎಸ್ ಪಕ್ಷವನ್ನು ತೊರೆದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.

ಬೆಂಗಳೂರಿನ ಕೆಪಿಸಿಸಿ ಕಚೇರಿಗೆ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಹಾಗೂ ಬಿಜೆಪಿಯ ಮುಖಂಡರು ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಪಕ್ಷದ ಸೇರ್ಪಡೆಯಾಗಿದ್ದು ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಸಿದ್ಧರಾಗಿ ಕಾಂಗ್ರೆಸ್ ಪಕ್ಷವನ್ನು ಕ್ಷೇತ್ರದಲ್ಲಿ ಸದೃಢವಾಗಿ ಕಟ್ಟಿ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಮಾತನಾಡಿದರು.

ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಅಣತಿ ಆನಂದ್ ಮಾತನಾಡಿ, ನಾವು ಮೊದಲಿನಿಂದಲೂ ಕಾಂಗ್ರೆಸ್ ಪಕ್ಷದಲ್ಲೇ ಇದ್ದೆವು. ಆದರೆ ಬದಲಾದ ಕಾಲಘಟ್ಟದಲ್ಲಿ ಪಕ್ಷವನ್ನು ತೊರೆಯಬೇಕಾಯಿತು. ಆದರೆ ಮರಳಿ ಗೂಡಿಗೆ ಎಂಬಂತೆ ಸಿದ್ದರಾಮಯ್ಯನವರು ಹಾಗೂ ಡಿ. ಕೆ. ಶಿವಕುಮಾರ್‌ರವರ ಮಾತುಕತೆ ನಂತರ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇವೆ, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ತಾಲೂಕಿನಲ್ಲಿ ಅಧಿಕಾರಕ್ಕೆ ತರುವುದು ನಮ್ಮ ಉದ್ದೇಶವಾಗಿದೆ ಎಂದರು.

ಬಿಜೆಪಿ ಮುಖಂಡ ಸಿ. ವಿ. ರಾಜಪ್ಪ, ಜೆಡಿಎಸ್‌ನ ಲವಣ್ಣ ಹಡೇನಹಳ್ಳಿ, ರಮೇಶ್‌ಗೌಡಗೆರೆ, ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷೆ ಫರಹ ಅನ್ನು, ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಜಬೀಉಲ್ಲಾಬೇಗ್, ಬಾಬು, ಅಕ್ರಂಪಾಷ, ಸಾದಿಕ್, ಸಫೀರ್, ಆಜಂ ಮತ್ತಿತರರು ಕಾಂಗ್ರೆಸ್ ಸೇರ್ಪಡೆಯಾದರು.

ಇದೇ ಸಂದರ್ಭದಲ್ಲಿ ವಿಧಾನಪರಿಷತ್ ಮಾಜಿ ಸದಸ್ಯ ಎಂ. ಎ. ಗೋಪಾಲಸ್ವಾಮಿ, ಮಾಜಿ ಶಾಸಕ ಸಿ. ಎಸ್. ಪುಟ್ಟೇಗೌಡ, ಅಣತಿ ಶೇಖರ್‌, ಎಂ.ಶಂಕರ್‌, ಪಿ. ಎ. ಮಂಜಣ್ಣ, ಶಂಕರಲಿಂಗೇಗೌಡ ಮತ್ತಿತರಿದ್ದರು.

PREV

Recommended Stories

ಮಾಲೇಗಾಂವ ಸ್ಫೋಟ ತೀರ್ಪು; ಸಂಭ್ರಮಾಚರಣೆ
ಧರ್ಮಸ್ಥಳ ಕ್ಷೇತ್ರದ ಹೆಸರು ಕೆಡಿಸಲು ಷಡ್ಯಂತ್ರ: ಪ್ರಮೋದ ಮುತಾಲಿಕ