ಕಲೆಗೆ ಉತ್ತೇಜನ ನೀಡಿ ಬೆಳೆಸಿ: ಸಚಿವ

KannadaprabhaNewsNetwork |  
Published : Jan 26, 2026, 01:30 AM IST
ಪೋಟೋ: 25ಎಸ್‌ಎಂಜಿಕೆಪಿ02ಶಿವಮೊಗ್ಗ ನಗರದ ಅಲ್ಲಮ ಪ್ರಭು ಮೈದಾನ(ಫ್ರೀಡಂ ಪಾರ್ಕ್)ದಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ ಮತ್ತು ಜಿಲ್ಲಾ ಉದ್ಯಾನ ಕಲಾ ಸಂಘ ಶಿವಮೊಗ್ಗ ಇವರ ಸಹಯೋಗದಲ್ಲಿ ಏರ್ಪಡಿಸಿರುವ ಮಲೆನಾಡು ಕರಕುಶಲ ಉತ್ಸವ, ಸಿರಿಧಾನ್ಯ ಮೇಳ ಹಾಗೂ ಪುಷ್ಪಸಿರಿ-63ನೇ ಫಲ ಪುಷ್ಪ ಪ್ರದರ್ಶನವನ್ನು ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ  ಉದ್ಘಾಟಿಸಿದರು. | Kannada Prabha

ಸಾರಾಂಶ

ಸ್ವಸಹಾಯ ಗುಂಪುಗಳ ಮಹಿಳೆಯರು, ಕುಶಲಕರ್ಮಿಗಳು ತಯಾರಿಸಿದ ವಿವಿಧ ಉತ್ಪನ್ನಗಳನ್ನು ಖರೀದಿಸುವ ಮೂಲಕ ಕಲೆಗೆ ಉತ್ತೇಜನ ನೀಡಿ, ಬೆಳೆಸಬೇಕು ಹಾಗೂ ನಮ್ಮ ಈ ಕಲೆ-ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ವರ್ಗಾಯಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕರೆ ನೀಡಿದರು.

ಶಿವಮೊಗ್ಗ: ಸ್ವಸಹಾಯ ಗುಂಪುಗಳ ಮಹಿಳೆಯರು, ಕುಶಲಕರ್ಮಿಗಳು ತಯಾರಿಸಿದ ವಿವಿಧ ಉತ್ಪನ್ನಗಳನ್ನು ಖರೀದಿಸುವ ಮೂಲಕ ಕಲೆಗೆ ಉತ್ತೇಜನ ನೀಡಿ, ಬೆಳೆಸಬೇಕು ಹಾಗೂ ನಮ್ಮ ಈ ಕಲೆ-ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ವರ್ಗಾಯಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕರೆ ನೀಡಿದರು.ನಗರದ ಅಲ್ಲಮಪ್ರಭು ಮೈದಾನ(ಫ್ರೀಡಂ ಪಾರ್ಕ್)ದಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ ಮತ್ತು ಜಿಲ್ಲಾ ಉದ್ಯಾನ ಕಲಾ ಸಂಘದ ಸಹಯೋಗದಲ್ಲಿ ಏರ್ಪಡಿಸಿರುವ ಮಲೆನಾಡು ಕರಕುಶಲ ಉತ್ಸವ, ಸಿರಿಧಾನ್ಯ ಮೇಳ ಹಾಗೂ ಪುಷ್ಪಸಿರಿ-63ನೇ ಫಲಪುಷ್ಪ ಪ್ರದರ್ಶನವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು. ನಮ್ಮ ನಾಡಿನ ಕಲೆ, ಸಂಸ್ಕೃತಿಯನ್ನು ಬಿಂಬಿಸುವ ಹಲವಾರು ಉತ್ಪನ್ನಗಳನ್ನು, ಕಲಾತ್ಮಕ ವಸ್ತುಗಳನ್ನು ಈ ಪ್ರದರ್ಶನದಲ್ಲಿ ಅಚ್ಚುಕಟ್ಟಾಗಿ ಪ್ರದರ್ಶಿಸಲಾಗಿದ್ದು, ಇಂತಹ ನಮ್ಮ ಹಳೆಯ ಕಲೆಗಳು ಉಳಿಯಬೇಕಾದರೆ ಅವನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು. ಆದ್ದರಿಂದ ಶಾಲಾ ಹಂತದಲ್ಲೇ ಆಯಾ ಭಾಗದ ಕಲೆಯನ್ನು ಅಲ್ಲಿಯ ಶಾಲೆಗಳಲ್ಲಿ ಕಲಿಸುವ ಚಿಂತನೆ ಮಾಡಲಾಗುತ್ತಿದೆ ಎಂದರು.ಪ್ರದರ್ಶನದಲ್ಲಿ ನಮ್ಮ ಜಿಲ್ಲೆಯ, ನಾಡಿನ ವಿವಿಧ ರೀತಿಯ ಕಲಾತ್ಮಕ ಉತ್ಪನ್ನಗಳು, ಸಿರಿಧಾನ್ಯಗಳು-ಖಾದ್ಯಗಳು, ಸ್ವಸಹಾಯ ಗುಂಪಿನ ಮಹಿಳೆಯರು ತಯಾರಿಸಿರುವ ವಿವಿಧ ಉತ್ಪನ್ನಗಳು ಹಾಗೂ ಬೇರೆ ಬೇರೆ ಜಿಲ್ಲೆಗಳಿಂದ, ರಾಜ್ಯಗಳಿಂದ ಆಗಮಿಸಿರುವ ಹ್ಯಾಂಡ್ ಲೂಂ ಸೀರೆಗಳು, ಉತ್ಪನ್ನಗಳು ಮತ್ತು ರೈತರು ಬೆಳೆದ ಕೃಷಿ-ತೋಟಗಾರಿಕೆ ಉತ್ಪನ್ನಗಳು, ವಿವಿಧ ಜಾತಿಯ ಹಣ್ಣು, ತರಕಾರಿಗಳನ್ನು ಉತ್ತಮವಾಗಿ ಪ್ರದರ್ಶಿಸಲಾಗಿದೆ ಎಂದರು. "ಕ್ರಾಫ್ಟ್ಸ್ ಆಫ್ ಮಲ್ನಾಡ್ " ಎಂಬ ಹೆಸರಿನಡಿ ಸ್ವಸಹಾಯ ಸಂಘದ ಮಹಿಳೆಯರು ತಯಾರಿಸಿದ ಉತ್ಪನ್ನಗಳನ್ನು ಬ್ರಾಂಡಿಗ್ ಮಾಡಿದ್ದು, ಜಿಲ್ಲೆ ಹಾಗೂ ರಾಜ್ಯದ ವಿವಿಧ ಕರಕುಶಲ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಲು ವೆಬ್‌ಸೈಟ್ ರಚನೆ ಮಾಡಿರುವುದು ಅತ್ಯುತ್ತಮ ಕೆಲಸವಾಗಿದ್ದು, ಇದರ ಹಿಂದಿನ ಶ್ರಮ ಕಾಣುತ್ತಿದೆ ಎಂದು ಶ್ಲಾಘಿಸಿದ ಅವರು, ಈ ವೆಬ್‌ಸೈಟ್ ಕುರಿತು ಇನ್ನೂ ಹೆಚ್ಚಿನ ಪ್ರಚಾರ ಆಗಬೇಕು. ಈ ಕುರಿತು ಸಣ್ಣ ವಿಡಿಯೋ ತುಣುಕುಗಳು, ಕ್ಯುಆರ್ ಕೋಡನ್ನು ವಿವಿಧ ಕಾರ್ಯಕ್ರಮಗಳಲ್ಲಿ ಪ್ರದರ್ಶಿಸಬೇಕು ಎಂದರು.

ಮಲೆನಾಡು ಕರಕುಶಲ ಮತ್ತು ಫಲ ಪುಷ್ಪ ಪ್ರದರ್ಶನದಲ್ಲಿ ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕುಶಲಕರ್ಮಿಗಳು, ಮಹಿಳೆಯರು ಸಿದ್ಧಪಡಿಸಿದ ಉತ್ಪನ್ನಗಳನ್ನು ಖರೀದಿಸಿ, ಅವರಿಗೆ ಆರ್ಥಿಕವಾಗಿ ಸಹಕಾರ ಹಾಗೂ ಕಲೆಗೆ ಉತ್ತೇಜನ ನೀಡಬೇಕೆಂದು ಕೋರಿದರು.ಇದೇ ವೇಳೆ ಸ್ವಸಹಾಯ ಸಂಘದ ಮಹಿಳೆಯರು ತಯಾರಿಸಿದ ಉತ್ಪನ್ನಗಳ ಬ್ರ್ಯಾಂಡ್ ‘ಕ್ರಾಫ್ಟ್ಸ್‌ ಆಫ್ ಮಲ್ನಾಡ್'''''''' ವೆಬ್‌ಸೈಟ್ ಗೆ ಚಾಲನೆ ನೀಡಿದರು.ರಾಜ್ಯ ಜವಳಿ ಮೂಲಸೌಲಭ್ಯ(ವಿದ್ಯುತ್ ಮಗ್ಗಗಳ)ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್.ಕೆ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್, ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಅಧ್ಯಕ್ಷ ನಗರದ ಮಹಾದೇವಪ್ಪ, ಹಾಪ್‌ಕಾಮ್ಸ್ ಅಧ್ಯಕ್ಷ ವಿಜಯಕುಮಾರ್, ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿವಿ ಆಡಳಿತ ಮಂಡಳಿ ಸದಸ್ಯ ದೇವಿಕುಮಾರ್, ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ, ಜಿಪಂ ಸಿಇಒ ಹೇಮಂತ್ ಎನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಡಾ.ಎ.ಬಿ.ಸಂಜಯ್ ಮತ್ತಿತರರಿದ್ದರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸುರೇಶ್‌ ಕುಮಾರ್‌ ವಿವಾದಾತ್ಮಕ ಹೇಳಿಕೆ : ಮಹಿಳೆಯರಿಗೆ ಅವಮಾನ ಆರೋಪ- ದೂರು
ಸರ್ಕಾರದಿಂದ ಕುಡುಕರ ಸೃಷ್ಟಿ: ಬಿವೈವಿ