ನೇತ್ರ ಜ್ಯೋತಿ ಕಾಲೇಜಿನಲ್ಲಿ ಅರಿವಳಿಕೆ - ಆಪರೇಷನ್ ಥೀಯೇಟರ್ ತಂತ್ರಜ್ಞರ ದಿನಾಚರಣೆ

KannadaprabhaNewsNetwork |  
Published : Jul 21, 2025, 12:00 AM IST
19ನೇತ್ರ | Kannada Prabha

ಸಾರಾಂಶ

ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜಿನಲ್ಲಿ ರಾಷ್ಟ್ರೀಯ ಅರಿವಳಿಕೆ ಮತ್ತು ಆಪರೇಷನ್ ಥೀಯೇಟರ್ ತಂತ್ರಜ್ಞರ ದಿನಾಚರಣೆಯನ್ನು ಆಚರಿಸಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜಿನಲ್ಲಿ ರಾಷ್ಟ್ರೀಯ ಅರಿವಳಿಕೆ ಮತ್ತು ಆಪರೇಷನ್ ಥೀಯೇಟರ್ ತಂತ್ರಜ್ಞರ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಮಣಿಪಾಲ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಸಹಪ್ರಾಧ್ಯಾಪಕಿ ಡಾ. ಶ್ವೇತ ಸಿನ್ಹ ಅವರು ಮಾತನಾಡಿ ರೋಗಿಯ ರಕ್ಷಣೆಯಲ್ಲಿ ಅರಿವಳಿಕೆ ಮತ್ತು ಆಪರೇಷನ್ ಥೀಯೇಟರ್ ತಂತ್ರಜ್ಞರ ಪಾತ್ರ ಮಹತ್ತರವಾಗಿದೆ ಎಂದರು. ಇನ್ನೊರ್ವ ಅತಿಥಿ ಉಡುಪಿ ಜಿಲ್ಲಾ ಆಸ್ಪತ್ರೆಯ ಅರಿವಳಿಕೆ ತಜ್ಞರಾದ ಡಾ| ಗಣಪತಿ ಹೆಗಡೆ ಅವರು ಮಾತನಾಡಿ ಸಮಾಜದಲ್ಲಿ ಅರೆ ವೈದ್ಯಕೀಯ ಸಿಬ್ಬಂದಿಗಳಿಗೆ ಇರಬೇಕಾದ ಜವಾಬ್ದಾರಿಯ ಬಗ್ಗೆ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ನೇತ್ರ ಜ್ಯೋತಿ ಕಾಲೇಜಿನ ಅಧ್ಯಕ್ಷೆ ರಶ್ಮೀ ಕೃಷ್ಣ ಪ್ರಸಾದ್ ಅವರು ಅರಿವಳಿಕೆ ಮತ್ತು ಆಪರೇಷನ್ ಥಿಯೇಟರ್ ದಿನಾಚರಣೆ ಒಂದು ದಿನಕ್ಕೆ ಸೀಮಿತವಾಗದೆ ಪ್ರತಿ ನಿತ್ಯವು ಆಚರಿಸುವಂತಾಗಬೇಕು. ಸೋಲು ಗೆಲುವು ಒಂದು ನಾಣ್ಯದ ಎರಡು ಮುಖಗಳಿದ್ದಂತೆ, ಅದನ್ನು ಸಮಾಚಿತ್ತದಿಂದ ಸ್ವೀಕರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಕಾಲೇಜಿನ ಸಿಓಓ ಡಾ| ಗೌರಿ ಪ್ರಭು ಮಾತನಾಡಿ ಯಾವುದೇ ಆಸ್ಪತ್ರೆಗಳು ಯಶಸ್ವಿಯಾಗಿ ಕಾರ್ಯ ನಿರ್ವಹಿಸಬೇಕಾದರೆ ವೈದ್ಯರ ಜೊತೆಗೆ ಅರೆವೈದ್ಯಕೀಯ ಸಿಬ್ಬಂದಿಗಳ ಪಾತ್ರ ವಿಶೇಷವಾಗಿದೆ ಎಂದರು. ವೇದಿಕೆಯಲ್ಲಿ ಉಪನ್ಯಾಸಕಿ ಸ್ವಾತಿ ಉಪಸ್ಥಿತರಿದ್ದರು. ಕುಮಾರಿ ಭೂಮಿಕಾ ಎಲ್ಲರನ್ನು ಸ್ವಾಗತಿಸಿದರೆ, ರಾಧಿಕಾ ಧನ್ಯವಾದಗೈದರು. ಕುಮಾರಿ ನಿವೇದಿತಾ ಕಾರ್ಯಕ್ರಮವನ್ನು ಸುಂದರವಾಗಿ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಣಸೆ, ಹಲಸು, ನೇರಳೆಗೆ ಮಂಡಳಿ ರಚಿಸಿ: ದೇವೇಗೌಡ
ಗುಮ್ಮ ಬಂದ ಗುಮ್ಮ, ಮಕ್ಕಳಿಗೆ ಹೊಡೆಯೋ ಗುಮ್ಮ!