3ನೇ ವರ್ಷವೂ ಅಗ್ರ ವಿಜ್ಞಾನಿಗಳ ಪಟ್ಟಿಯಲ್ಲಿ ಅಂಗಡಿ

KannadaprabhaNewsNetwork |  
Published : Oct 27, 2026, 02:15 AM IST
ಡಾ. ಜಗದೀಶ ಅಂಗಡಿ | Kannada Prabha

ಸಾರಾಂಶ

2026ನೇ ಸಾಲಿನ ವಿಶ್ವದ ಅಗ್ರ ಶೇ.2ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ ಹುಬ್ಬಳ್ಳಿಯ ಕೆಎಲ್‌ಇ ಸಂಸ್ಥೆಯ ಪಿ.ಸಿ. ಜಾಬಿನ್ ವಿಜ್ಞಾನ ಮಹಾವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಜಗದೀಶ ಅಂಗಡಿ ಅವರು ಸತತ ಮೂರನೇ ವರ್ಷವೂ (2024, 2025 ಮತ್ತು 2026) ಸ್ಥಾನ ಪಡೆದುಕೊಂಡಿದ್ದಾರೆ.

ಹುಬ್ಬಳ್ಳಿ:ಅಮೆರಿಕದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯ ಹಾಗೂ ಎಲ್ಸೆವಿಯರ್ ಸಂಸ್ಥೆ ಪ್ರಕಟಿಸಿರುವ 2026ನೇ ಸಾಲಿನ ವಿಶ್ವದ ಅಗ್ರ ಶೇ.2ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ ಹುಬ್ಬಳ್ಳಿಯ ಕೆಎಲ್‌ಇ ಸಂಸ್ಥೆಯ ಪಿ.ಸಿ. ಜಾಬಿನ್ ವಿಜ್ಞಾನ ಮಹಾವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಜಗದೀಶ ಅಂಗಡಿ ಅವರು ಸತತ ಮೂರನೇ ವರ್ಷವೂ (2024, 2025 ಮತ್ತು 2026) ಸ್ಥಾನ ಪಡೆದುಕೊಂಡಿದ್ದಾರೆ.ಮೂಲತಃ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಎಂ.ಬಿ. ಅಯ್ಯನಹಳ್ಳಿ ಗ್ರಾಮದ ಎ. ವೀರಭದ್ರಪ್ಪ ಅವರ ಪುತ್ರರಾದ ಡಾ. ಜಗದೀಶ ಅಂಗಡಿ ಅವರು ಗ್ರಾಮೀಣ ಹಿನ್ನೆಲೆಯಿಂದ ಬೆಳೆದು ಅಂತಾರಾಷ್ಟ್ರೀಯ ಮಟ್ಟದಲ್ಲಿ ವೈಜ್ಞಾನಿಕ ಸಾಧನೆ ಮಾಡಿದ್ದಾರೆ.ಭೌತಶಾಸ್ತ್ರ, ವಸ್ತು ವಿಜ್ಞಾನ, ನ್ಯಾನೋ ತಂತ್ರಜ್ಞಾನ, ಸ್ಪಿನೆಲ್ ಫೆರೈಟ್‌ಗಳು, ಹೈಡ್ರೋಜನ್ ಉತ್ಪಾದನೆ, ಶಕ್ತಿ ಸಂಗ್ರಹಣೆ ಹಾಗೂ ಸಂವೇದಕ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸಂಶೋಧನೆ ನಡೆಸುತ್ತಿರುವ ಇವರು, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರತಿಷ್ಠಿತ ವೈಜ್ಞಾನಿಕ ನಿಯತಕಾಲಿಕೆಗಳಲ್ಲಿ 200ಕ್ಕೂ ಹೆಚ್ಚು ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ. ಅಲ್ಲದೆ, 19 ಪೇಟೆಂಟ್‌, 14 ಪುಸ್ತಕ ಹಾಗೂ 6 ಪುಸ್ತಕ ಅಧ್ಯಾಯಗಳನ್ನು ಪ್ರಕಟಿಸಿ ವೈಜ್ಞಾನಿಕ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ.ಡಾ. ಜಗದೀಶ ಅಂಗಡಿ ಅವರ ಈ ಸಾಧನೆಗೆ ಮಹಾವಿದ್ಯಾಲಯದ ಆಡಳಿತ ಮಂಡಳಿ, ಪ್ರಾಚಾರ್ಯರು, ಸಹೋದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಹುಟ್ಟೂರಿನ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಬ್ಬು ಬೆಳೆಗಾರರ ಸಭೆ ವಿಫಲ: ಪರಿಹಾರವಿಲ್ಲ
ಸವದತ್ತಿ ಯಲ್ಲಮ್ಮ ಕ್ಷೇತ್ರಕ್ಕೆ ₹215 ಕೋಟಿ ಅಭಿವೃದ್ಧಿ ಯೋಜನೆ!