ಬಂಟ್ವಾಳದ 11 ಕಡೆ ಆಯುಷ್ಮಾನ್ ಭಾರತ್ ಆರೋಗ್ಯ- ಸ್ವಾಸ್ಥ್ಯ ಕೇಂದ್ರ ಗುದ್ದಲಿಪೂಜೆ

KannadaprabhaNewsNetwork |  
Published : Mar 11, 2026, 02:30 AM IST
ಗುದ್ದಲಿ ಪೂಜೆ ನೆರವೇರಿಸುತ್ತಿರುವ ಸಂಸದ ಕ್ಯಾ.ಬ್ರಿಜೇಶ್‌ ಚೌಟ. | Kannada Prabha

ಸಾರಾಂಶ

ಮಂಗಳೂರು: ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಮೂಲ ಸೌಕರ್ಯ ಮಿಷನ್‌ ಹಾಗೂ 15ನೇ ಹಣಕಾಸು ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 124 ಆಯುಷ್ಮಾನ್ ಭಾರತ್- ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ ಸ್ಥಾಪನೆಗೆ ಅನುದಾನ ಮಂಜೂರಾಗಿದೆ. ಆ ಪೈಕಿ ಬಂಟ್ವಾಳದಲ್ಲಿ ಒಟ್ಟು 11 ಕೇಂದ್ರಗಳ ಸ್ಥಾಪನೆಗೆ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಶಾಸಕ ರಾಜೇಶ್ ನಾಯ್ಕ್ ಜತೆಗೂಡಿ ಮೂಡುಪಡುಕೋಡಿಯಲ್ಲಿ ಗುದ್ದಲಿ ಪೂಜೆ ನೆರವೇರಿಸಿದರು.

ಮಂಗಳೂರು: ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಮೂಲ ಸೌಕರ್ಯ ಮಿಷನ್‌ ಹಾಗೂ 15ನೇ ಹಣಕಾಸು ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 124 ಆಯುಷ್ಮಾನ್ ಭಾರತ್- ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ ಸ್ಥಾಪನೆಗೆ ಅನುದಾನ ಮಂಜೂರಾಗಿದೆ. ಆ ಪೈಕಿ ಬಂಟ್ವಾಳದಲ್ಲಿ ಒಟ್ಟು 11 ಕೇಂದ್ರಗಳ ಸ್ಥಾಪನೆಗೆ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಶಾಸಕ ರಾಜೇಶ್ ನಾಯ್ಕ್ ಜತೆಗೂಡಿ ಮೂಡುಪಡುಕೋಡಿಯಲ್ಲಿ ಗುದ್ದಲಿ ಪೂಜೆ ನೆರವೇರಿಸಿದರು.

ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಸಂಸದ ಕ್ಯಾ. ಚೌಟ, ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 11 ಕಡೆ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಉಳಿದ 11 ಕಡೆ ಟೆಂಡರ್‌ ಪ್ರಕ್ರಿಯೆ ಪ್ರಗತಿಯಲ್ಲಿದೆ. ಆ ಮೂಲಕ, ಅನುದಾನ ಮಂಜೂರಾಗಿರುವ ಎಲ್ಲ ಕಡೆ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳ ಸ್ಥಾಪನೆಗೆ ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ತಿಳಿಸಿದರು.

ಪ್ರತಿ ಆಯುಷ್ಮಾನ್ ಭಾರತ್- ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ ಸ್ಥಾಪನೆಗೆ 65 ಲಕ್ಷ ರು. ಮಂಜೂರಾಗಿದೆ. ಈ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡವು ಒಟ್ಟು ಸುಮಾರು 2000 ಚದರ ಅಡಿ ವಿಸ್ತೀರ್ಣ ಹೊಂದಿದ್ದು, ನೆಲ ಮಹಡಿಯಲ್ಲಿ ಕ್ಲಿನಿಕ್‌, ಕ್ಷೇಮ ಕೇಂದ್ರ, ಡೇ ಕೇರ್‌ ಹಾಗೂ ಶೌಚಾಲಯ ಸೌಲಭ್ಯ ಹೊಂದಿರುತ್ತದೆ. ಮೊದಲ ಮಹಡಿಯಲ್ಲಿ ಆರೋಗ್ಯಾಧಿಕಾರಿ ಅವರ ವಸತಿಗೃಹ ಇರುತ್ತದೆ. ಈ ಹೆಲ್ತ್‌ ಸೆಂಟರ್‌ಗಳ ನಿರ್ಮಾಣದಿಂದ ಗ್ರಾಮೀಣ ಭಾಗದ ಜನರಿಗೆ ಅತ್ಯುತ್ತಮ ಆರೋಗ್ಯ ಸೇವೆಗಳು ದೊರೆಯಲಿದೆ ಎಂದು ಕ್ಯಾ. ಚೌಟ ಹೇಳಿದರು.ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಎಲ್ಲ ತಾಲೂಕುಗಳಿಗೂ ಹೊಸ ಆಯುಷ್ಮಾನ್ ಭಾರತ್- ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ ಸ್ಥಾಪನೆಗೆ ಅನುದಾನ ಮಂಜೂರು ಮಾಡಲಾಗಿದೆ. ಇದರಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳೇ ಇಲ್ಲದ ಊರುಗಳಿಗೂ ಅಗತ್ಯ ಆರೋಗ್ಯ ಸೇವೆಗಳನ್ನು ಒದಗಿಸಲು ಈ ಕೇಂದ್ರಗಳು ನೆರವಾಗಲಿವೆ ಎಂದು ಸಂತಸ ವ್ಯಕ್ತಪಡಿಸಿದರು.ಎಲ್ಲೆಲ್ಲಿ ಎಷ್ಟು: ಜಿಲ್ಲೆಯಲ್ಲಿ ಈಗಾಗಲೇ ಒಟ್ಟು 124 ಕಡೆ ಈ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ನಿರ್ಮಾಣಕ್ಕೆ ಒಟ್ಟು 80 ಕೋಟಿ ರು. ಅನುದಾನ ಮಂಜೂರು ಮಾಡಲಾಗಿದೆ. ಪುತ್ತೂರು ತಾಲೂಕಿನಲ್ಲಿ 18, ಬೆಳ್ತಂಗಡಿಯಲ್ಲಿ 26, ಸುಳ್ಯದಲ್ಲಿ 27, ಬಂಟ್ವಾಳದಲ್ಲಿ 33, ಮೂಡುಬಿದಿರೆಯಲ್ಲಿ 12, ಮಂಗಳೂರಿನಲ್ಲಿ 8 ಎಚ್‌ಡಬ್ಲ್ಯುಸಿ ಕೇಂದ್ರ ಸ್ಥಾಪನೆಗೆ ಅನುದಾನ ಮಂಜೂರು ಆಗಿದೆ ಎಂದರು.ಬಂಟ್ವಾಳದಲ್ಲಿ ಎಲ್ಲಿ?: ಬಡಗ ಬೆಳ್ಳೂರು, ಅನಂತಾಡಿ, ಅಮ್ಟಾಡಿ, ಸರಪಾಡಿ, ದೇವಸ್ಯಪಡೂರು, ಮೂಡುಪಡುಕೋಡಿ, ವೀರಕಂಬ, ಮಂಗಿಲ ಪದವು, ಗಡಿಯಾರ, ಬಾಳ್ತಿಲ, ಅಮ್ಟೂರು, ಪಾಣೆ ಮಂಗಳೂರು, ಪೊಳಲಿ, ಉಳಿ, ಶಂಭೂರು, ಸೂರಿಬೈಲು, ಕೋಲ್ನಾಡು, ಕುಳಾಲು, ಕುರಿಯಾಳ, ಕಲಿಗೆ, ಕಾವಳಕಟ್ಟೆ, ಕರ್ಪೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಸಿಹಿತ್ಲು ಶ್ರೀ ಭಗವತಿ ಕ್ಷೇತ್ರ ಬ್ರಹ್ಮಕಲಶೋತ್ಸವ ಸಂಪನ್ನ
ಸ್ತ್ರೀಯರ ಸಾಧನೆಗೆ ಪ್ರೋತ್ಸಾಹಿಸಿ: ಅರುಣಾ ಗುಜ್ಜರಿ