ಮನರೇಗಾ ಅಂಗನವಾಡಿ ಕೇಂದ್ರ ಶಾಸಕ ಪೊನ್ನಣ್ಣ ಉದ್ಘಾಟನೆ

KannadaprabhaNewsNetwork |  
Published : Jun 11, 2025, 11:37 AM IST
ಚಿತ್ರ : 9ಎಂಡಿಕೆ1 : ಅಂಗನವಾಡಿ ಕೇಂದ್ರ ಉದ್ಘಾಟಿಸಿದ ಶಾಸಕ ಪೊನ್ನಣ್ಣ. | Kannada Prabha

ಸಾರಾಂಶ

ವಿರಾಜಪೇಟೆ ತಾಲೂಕಿನ ಕಾರ್ಮಾಡು ಗ್ರಾ.ಪಂ. ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿ ಕಟ್ಟಡವನ್ನು ಶಾಸಕ ಎ.ಎಸ್‌. ಪೊನ್ನಣ್ಣ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ವಿರಾಜಪೇಟೆ

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ವಿರಾಜಪೇಟೆ ತಾಲೂಕಿನ ಕಾರ್ಮಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿ ಕಟ್ಟಡವನ್ನು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಅಂಗನವಾಡಿ ಕೇಂದ್ರಗಳು ಮಕ್ಕಳ ಪ್ರಾಥಮಿಕ ಹಂತದ ಶಿಕ್ಷಣ ಒದಗಿಸುವ ಒಂದು ಪ್ರಮುಖ ಕೇಂದ್ರಗಳಾಗಿದ್ದು, ಮಕ್ಕಳ ದೈಹಿಕ ಹಾಗೂ ಬೌದ್ದಿಕ ಬೆಳವಳಿಗೆಯು ಸಹ ಅಂಗನವಾಡಿ ಕೇಂದ್ರಗಳಿಂದಲೇ ಪ್ರಾರಂಭವಾಗುತ್ತವೆ. ಆದ್ದರಿಂದ ಬಹಳ ಮುತುವರ್ಜಿವಹಿಸಿ ಮಕ್ಕಳನ್ನು ಸಲಹುವ ಜವಾಬ್ದಾರಿಯು ಅಂಗನವಾಡಿ ಶಿಕ್ಷಕರು ಹಾಗೂ ಸಹಾಯಕಿಯರದ್ದಾಗಿರುತ್ತದೆ ಎಂದರು. ಅಂಗನವಾಡಿ ಕೇಂದ್ರಗಳು ಮಕ್ಕಳ ಭವಿಷ್ಯವನ್ನು ನಿರ್ಧರಿಸುವ ಕೇಂದ್ರಗಳಾಗಿದ್ದು ಮಕ್ಕಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಸೇರಿಸಿ ಎಂದು ಸಾರ್ವಜನಿಕರಿಗೆ ಸಂದೇಶ ನೀಡಿದರು.ಮಹಾತ್ಮಗಾಂಧಿ ನರೇಗಾ ಯೋಜನೆಯು ಗ್ರಾಮಗಳ ಹಲವು ಅಭಿವೃದ್ಧಿ ಕಾರ್ಯಗಳಿಗೆ ಸಹಕಾರವಾಗುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಾ ಬಂದಿದ್ದು ಅಂಗನವಾಡಿ ಕಟ್ಟಡಗಳ ನಿರ್ಮಾಣವನ್ನು ಶಿಶು ಅಭಿವೃದ್ಧಿ ಇಲಾಖೆಯ ಒಗ್ಗೂಡಿಸುವಿಕೆಯಿಂದ ವ್ಯವಸ್ಥಿತವಾದ ಅಂಗನವಾಡಿ ಕೇಂದ್ರಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ತಿಳಿಸಿದರು.ಇದೇ ಸಂದರ್ಭದಲ್ಲಿ ಕಾರ್ಮಾಡು ಗ್ರಾ.ಪಂ.ಅಧ್ಯಕ್ಷರಾದ ದಿವ್ಯಾ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷರಾದ ಧರ್ಮಜ ಉತ್ತಪ್ಪ, ತಾಲೂಕು ಅಧ್ಯಕ್ಷರಾದ ಜಾನ್ಸನ್, ವಿರಾಜಪೇಟೆ ತಾ.ಪಂ.ಇಒ. ಕೆ.ಸಿ.ಅಪ್ಪಣ್ಣ, ಗ್ರಾ.ಪಂ.ಉಪಾಧ್ಯಕ್ಷರು, ಎಲ್ಲಾ ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!