ಕನ್ನಡಪ್ರಭ ವಾರ್ತೆ ಔರಾದ್
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಂತಪೂರ ವತಿಯಿಂದ ಔರಾದ್ (ಬಿ) ಪಟ್ಟಣದ ಡಾ.ಗುರುಪಾದಪ್ಪಾ ನಾಗಮಾರಪಳ್ಳಿ ಕಲ್ಯಾಣ ಮಂಟಪದಲ್ಲಿ ಸೋಮವಾರ ಜರುಗಿದ ಪೋಷಣ್ ಅಭಿಯಾನ ಮಾಸಾಚರಣೆಯ ಮುಕ್ತಾಯ ಸಮಾರಂಭದಲ್ಲಿ ಅವರು ಮಾತನಾಡಿದರು.
ಅಂಗನವಾಡಿ ಕೇಂದ್ರಗಳು ಶಿಕ್ಷಣಕ್ಕೆ ಅಡಿಪಾಯವಿದ್ದಂತೆ. ಸಂಸ್ಕಾರದ ಕಲಿಕೆ ಇಲ್ಲಿಂದಲೇ ಆರಂಭವಾಗುವುದರಿಂದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವೆ ಅತ್ಯಂತ ಜವಾಬ್ದಾರಿಯುತವಾದದ್ದು. ಸರ್ಕಾರವು ಮಹಿಳೆಯರು ಮತ್ತು ಮಕ್ಕಳಿಗಾಗಿ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳ ಮುಖಾಂತರ ವಿತರಿಸುವುದರಿಂದ ಈ ಸೌಲಭ್ಯಗಳು ಎಲ್ಲ ಫಲಾನುಭವಿಗಳಿಗೆ ಪ್ರಾಮಾಣಿಕವಾಗಿ ತಲುಪಿಸಬೇಕು ಎಂದರು.ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಸಮರ್ಪಕ ಕುಡಿವ ನೀರು, ಶೌಚಾಲಯ, ಕಾಂಪೌಂಡ್ ಕಡ್ಡಾಯವಾಗಿ ಇರಬೇಕು. ಈ ದಿಶೆಯಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕ್ಷೇತ್ರದ ಎಲ್ಲ ಅಂಗನವಾಡಿ ಕೇಂದ್ರಗಳಿಗೆ ಹೈಟೆಕ್ ಮಾಡುವ ಪ್ರಯತ್ನಗಳು ನಡೆದಿವೆ. ಇದಕ್ಕೆ ಅಧಿಕಾರಿಗಳು ಸಹಕಾರ ಬೇಕು ಎಂದು ಹೇಳಿದರು.
ಸನ್ಮಾನ:
ಈ ಸಂದರ್ಭದಲ್ಲಿ ಔರಾದ(ಬಿ) ಪಟ್ಟಣ ಪಂಚಾಯತ ಅಧ್ಯಕ್ಷರಾದ ಸರುಬಾಯಿ ಘೂಳೆ, ಎಪಿಎಂಸಿ ಅಧ್ಯಕ್ಷ ಧೊಂಡಿಬಾ ನರೋಟೆ, ತಹಸೀಲ್ದಾರ್ ಮಲಶೆಟ್ಟಿ ಚಿದ್ರೆ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸ್ವಾಮಿದಾಸ, ತಾಲೂಕು ಆರೋಗ್ಯಾಧಿಕಾರಿ ಡಾ.ಗಾಯತ್ರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಡಿ.ಕೆ.ಇಮಲಪಾ, ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ ಅಬ್ದುಲ್ ಖದೀರ್, ಅಂಗನವಾಡಿ ಕಾರ್ಯಕರ್ತೆಯರ ಸಂಘದ ಪದ್ಮಾವತಿ ಸ್ವಾಮಿ, ಶಾರದಾ, ಭಾಗ್ಯವತಿ ಸೇರಿದಂತೆ ಔರಾದ್(ಬಿ) ಹಾಗೂ ಕಮಲಗರ ತಾಲೂಕಿನ ವಿವಿಧ ಗ್ರಾಮಗಳ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಉಪಸ್ಥಿತರಿದ್ದರು.