ಯಲಬುರ್ಗಾ: ಮಕ್ಕಳ ಭವಿಷ್ಯ ರೂಪಿಸಲು ಅಂಗನವಾಡಿ ಶಿಕ್ಷಣ ಭದ್ರ ಬುನಾದಿ ಒದಗಿಸುತ್ತದೆ ಎಂದು ಕುಕನೂರು ತಾಪಂ ಪ್ರಭಾರ ಇಒ ಬೆಡದೇಶ ಮಾಳೆಕೊಪ್ಪ ಹೇಳಿದರು.
ಅಂಗನವಾಡಿ ಶಿಕ್ಷಣವು ಮಕ್ಕಳ ಭವಿಷ್ಯ ರೂಪಿಸುವ ಮೊದಲ ಮೆಟ್ಟಿಲಾಗಿದ್ದು, ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಪೂರ್ವ ಪ್ರಾಥಮಿಕ ಶಿಕ್ಷಣ ದೊರೆಯಲು ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಕೇಂದ್ರಗಳು ಕೇವಲ ಮಕ್ಕಳ ಶಿಕ್ಷಣಕ್ಕೆ ಸೀಮಿತವಾಗಿಲ್ಲ. ಮಕ್ಕಳ ಆರೋಗ್ಯ, ಪೌಷ್ಟಿಕ ಆಹಾರ, ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ಗ್ರಾಮೀಣ ಭಾಗದ ಮಕ್ಕಳಿಗೆ ಉತ್ತಮ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ವಿವಿಧ ಯೋಜನೆ ಜಾರಿಗೊಳಿಸಿದ್ದು, ಅವುಗಳ ಸಮರ್ಪಕ ಅನುಷ್ಠಾನಕ್ಕೆ ಇಲಾಖೆ ಬದ್ಧವಾಗಿದೆ ಎಂದರು.
ಶಾಸಕ ಬಸವರಾಜ ರಾಯರಡ್ಡಿ ಕ್ಷೇತ್ರದ ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ವಿಶೇಷ ಆಸಕ್ತಿ ವಹಿಸಿದ್ದು, ಅಗತ್ಯ ಮೂಲಸೌಕರ್ಯ ಕಲ್ಪಿಸಲು ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ. ಅದರ ಫಲವಾಗಿ ಹಲವೆಡೆ ನೂತನ ಕಟ್ಟಡ ನಿರ್ಮಾಣವಾಗುತ್ತಿದ್ದು, ಮಕ್ಕಳಿಗೆ ಉತ್ತಮ ಕಲಿಕಾ ವಾತಾವರಣ ಸೃಷ್ಟಿಯಾಗುತ್ತಿದೆ ಎಂದರು.ಈ ಸಂದರ್ಭದಲ್ಲಿ ಲಕ್ಷ್ಮಣ್ಣರಾವ್ ಜೋಶಿ, ಹನುಮಂತಪ್ಪ, ಶಾಂತಯ್ಯ ಹಿರೇಮಠ, ಪ್ರಸಾದ, ಪಿಡಿಒ ಹನುಮಂತರಾಯ ಯಕಂಚಿ, ಅಂಗನವಾಡಿ ಮೇಲ್ವಿಚಾರಕಿ ಗಿರಿಜಾ ಕಡಿವಾಲ, ರಾಜೇಶ್ವರಿ ರಡ್ಡೇರ, ಪದ್ಮಾವತಿ ದೊಡ್ಡಮನಿ, ಲಲಿತಾ ಅರಳಿ, ಸುಧಾ ಕುಲಕರ್ಣಿ, ಬಸವಣ್ಣೆಮ್ಮ ಬಂಡಿ, ವಿಜಯಲಕ್ಷ್ಮಿ ಇಂಗಳದಾಳ, ಗೌರಮ್ಮ ಹಿರೇಮಠ ಸೇರಿದಂತೆ ಗ್ರಾಮಸ್ಥರು ಇದ್ದರು.