ಗಂಗಾವತಿ:
ತಾಲೂಕಿನ ಮರಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಗತಿನಗರ ಗ್ರಾಮದ 4ನೇ ವಾರ್ಡಿನಲ್ಲಿ ಶುಕ್ರವಾರ ಅಂಗನವಾಡಿ ಕಟ್ಟಡ ಉದ್ಘಾಟಿಸಿ ಮಾತನಾಡಿದರು.
ಮಕ್ಕಳ ದೈಹಿಕ ಹಾಗೂ ಬೌದ್ಧಿಕ ಬೆಳವಣಿಗೆಯು ಸಹ ಅಂಗನವಾಡಿ ಕೇಂದ್ರಗಳಿಂದಲೇ ಪ್ರಾರಂಭವಾಗುತ್ತವೆ. ಆದ್ದರಿಂದ ಮುತುವರ್ಜಿ ವಹಿಸಿ ಮಕ್ಕಳನ್ನು ನೋಡಿಕೊಳ್ಳುವ ಜವಾಬ್ದಾರಿಯು ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರದ್ದಾಗಿರುತ್ತದೆ ಎಂದರು.ಅಂಗನವಾಡಿ ಕೇಂದ್ರಗಳು ಮಕ್ಕಳ ಭವಿಷ್ಯ ನಿರ್ಧರಿಸುವ ಕೇಂದ್ರಗಳಾಗಿದ್ದು, ಮಕ್ಕಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಸೇರಿಸಿ ಎಂದು ಸಾರ್ವಜನಿಕರಿಗೆ ಮನವಿ ಮಾಡಿದರು.
ಈ ವೇಳೆ ತಾಪಂ ಮಾಜಿ ಅಧ್ಯಕ್ಷ ಮಹಮ್ಮದ್ ರಫೀ, ಗ್ರಾಪಂ ಸದಸ್ಯೆ ಕೆ. ರೋಹಿಣಿ ಕೊಟ್ರೇಶ್, ನಜೀಯಾಮನ್ಸೂರ್ ಬೇಗ್, ವಿರೂಪಾಕ್ಷಪ್ಪ ಹೇಮಗುಡ್ಡ, ಶಿವಲಿಂಗಪ್ಪ, ಹೆಬ್ಬಾಳ ನಾಗರಾಜ್, ಹನುಮಂತರಾಯ, ಗುಂಡಯ್ಯಸ್ವಾಮಿ ಹಿರೇಮಠ, ಮಹಾದೇವಪ್ಪ, ಅಯ್ಯಪ್ಪ ದಳಪತಿ, ನಾಗಭೂಷಣ ಸ್ವಾಮಿ, ಜ್ಞಾನೇಶ್ವರಸ್ವಾಮಿ, ರಾಜಾಸಾಬ ಮೇಸ್ತ್ರಿ ಸೇರಿದಂತೆ ಅಂಗನವಾಡಿ ಕೇಂದ್ರಗಳ ಮೇಲ್ವಿಚಾರಕಿ ಚಂದ್ರಕಲಾ, ಕಾರ್ಯಕರ್ತೆ ಜಯಮ್ಮ, ನಾಗರತ್ನ, ದುರಗಮ್ಮ, ನಾಗಮ್ಮ ಮತ್ತು ಅಂಗನವಾಡಿ ಕೇಂದ್ರಗಳ ಸಹಾಯಕಿಯರು ಇದ್ದರು.