ಕನ್ನಡಪ್ರಭ ವಾರ್ತೆ ಬಂಗಾರಪೇಟೆ
ಪಾರದರ್ಶಕ ಆಯ್ಕೆಗೆ ಅವಕಾಶ
ಈ ಹಿಂದೆ ಲಂಚವನ್ನು ಪಡೆದುಕೊಂಡು ಅನರ್ಹರಿಗೆ ಉದ್ಯೋಗವನ್ನು ನೀಡುತ್ತಿದ್ದರು. ಈಗ ಆ ಪ್ರಕ್ರಿಯೆ ಇಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಲ್ಲಿ ಅರ್ಹ ವಿದ್ಯಾವಂತರಿಗೆ ಮೆರಿಟ್ ಆಧಾರದ ಮೇಲೆ ನೇಮಕಾತಿ ಪ್ರಕ್ರಿಯೆಯನ್ನು ಮಾಡಿ ಯಾವುದೇ ಅಕ್ರಮಗಳಿಗೆ ಅವಕಾಶ ನೀಡದೆ ಪಾರದರ್ಶಕವಾಗಿ ಆಯ್ಕೆ ಮಾಡಲಾಗುತ್ತಿದೆ. ಆಯ್ಕೆಯಾಗಿರುವ ಎಲ್ಲಾ ಅಭ್ಯರ್ಥಿಗಳು ಪ್ರಾಮಾಣಿಕತೆಯಿಂದ ಕೆಲಸ ನಿರ್ವಹಿಸಬೇಕು. ಒಂದು ವೇಳೆ ಕೆಲಸದಲ್ಲಿ ಲೋಪ ದೋಷ ಕಂಡುಬಂದರೆ ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಂಡು ಕೆಲಸದಿಂದ ವಜಾ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಕಾತಿಯನ್ನು ಮಾಡದೆ ಒಂದೇ ಅಂಗನವಾಡಿ ಕಾರ್ಯಕರ್ತೆಯರಿಗೆ ಎರಡು ಅಂಗನವಾಡಿಗಳ ಜವಾಬ್ದಾರಿಯನ್ನು ನೀಡಿದ್ದು ಅವರು ಒತ್ತಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು, ಇದನ್ನು ಮನಗಂಡ ನಮ್ಮ ಸರ್ಕಾರ ಹೊಸ ನೇಮಕಾತಿಯನ್ನು ಮಾಡಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ವೇತನವನ್ನು ಹೆಚ್ಚಿಸಲು ಹಾಗೂ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಸರ್ಕಾರವನ್ನು ಒತ್ತಾಯಿಸುವುದಾಗಿ ತಿಳಿಸಿದರು.
ಎಲ್‌ಕೆಜಿ ಅರಂಭಿಸಲು ನಿರ್ಧಾರಈ ವರ್ಷದಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆ ಜಿ ಮತ್ತು ಯುಕೆಜಿ ಯನ್ನು ಪ್ರಾರಂಭಿಸಲು ತಿರ್ಮಾನಿಸಿದ್ದು ,ಇದೇ ಕಾರಣಕ್ಕೆ ದ್ವಿತೀಯ ಪಿಯುಸಿಯಲ್ಲಿ ಹೆಚ್ಚಿನ ಅಂಕಗಳನ್ನು ಗಳಿಸಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ತಹಸೀಲ್ದಾರ್ ವೆಂಕಟೇಶಪ್ಪ, ಸಿಡಿಪಿಓ ಮುನಿರಾಜು, ಜನವಾದಿ ಮಹಿಳಾ ಸಂಘದ ಅಧ್ಯಕ್ಷರಾದ ಗೀತಾ, ಫೋಕಸ್ ಸಂಸ್ಥೆಯ ಅ.ನಾ ಹರೀಶ್ ಇದ್ದರು.