ಹಕ್ಕುಗಳಿಗಾಗಿ ಅಂಗನವಾಡಿ ಸಿಬ್ಬಂದಿ ಒಗ್ಗಟ್ಟಾಗಿ ಹೋರಾಡಿ

KannadaprabhaNewsNetwork |  
Published : Oct 27, 2025, 12:15 AM IST
ಹೊನ್ನಾಳಿ ಫೋಟೋ 25ಎಚ್.ಎಲ್.ಐ2.  ಶನಿವಾರ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ಸಮುದಾಯ ಭವನದಲ್ಲಿ ಜರುಗಿದ ಹೊನ್ನಾಳಿ ಮತ್ತು ನ್ಯಾಮತಿ ಅ‍ವಳಿ ತಾಲೂಕುಗಳ  ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘಟನಾ ಸಭೆಯನ್ನುದ್ದೇಶಿಸಿ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ (ಎ.ಐ.ಟಿ.ಯು.ಸಿ ಸಂಯೋಜಿತ) ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಜಯಮ್ಮ ಮಾತನಾಡಿದರು.   | Kannada Prabha

ಸಾರಾಂಶ

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಒಗ್ಗಟ್ಟಾಗಿ ಹೋರಾಟ ನಡೆಸಿದರೆ ಮಾತ್ರ ತಮ್ಮ ಹಕ್ಕುಗಳನ್ನು ಪಡೆಯಲು ಸಾಧ್ಯ ಎಂದು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ (ಎಐಟಿಯುಸಿ ಸಂಯೋಜಿತ) ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಜಯಮ್ಮ ಹೇಳಿದ್ದಾರೆ.

- ಹೊನ್ನಾಳಿಯಲ್ಲಿ ಸಂಘಟನಾ ಸಭೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಜಯಮ್ಮ

- - -

ಕನ್ನಡಪ್ರಭ ವಾರ್ತೆ ಹೊನ್ನಾಳಿ

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಒಗ್ಗಟ್ಟಾಗಿ ಹೋರಾಟ ನಡೆಸಿದರೆ ಮಾತ್ರ ತಮ್ಮ ಹಕ್ಕುಗಳನ್ನು ಪಡೆಯಲು ಸಾಧ್ಯ ಎಂದು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ (ಎಐಟಿಯುಸಿ ಸಂಯೋಜಿತ) ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಜಯಮ್ಮ ಹೇಳಿದರು.

ಶನಿವಾರ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ಸಮುದಾಯ ಭವನದಲ್ಲಿ ಜರುಗಿದ ಹೊನ್ನಾಳಿ ಮತ್ತು ನ್ಯಾಮತಿ ಅ‍ವಳಿ ತಾಲೂಕುಗಳ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘಟನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಎಐಟಿಯುಸಿ ಸಂಘಟನೆ ಆಲದ ಮರವಿದ್ದಂತೆ. ಇದರಡಿಯಲ್ಲಿ ಅನೇಕ ಶ್ರಮಿಕ ಜನರು ಸಂಘಟಿತರಾಗಿ ಸವಲತ್ತುಗಳನ್ನು ಪಡೆದುಕೊಂಡಿದ್ದಾರೆ. 106 ವರ್ಷಗಳ ಇತಿಹಾಸವಿರುವ ಎ.ಐ.ಟಿ.ಯು.ಸಿ. ಸಂಘಟನೆ ನೇತೃತ್ವದಲ್ಲಿ ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಹೋರಾಟ ನಡೆಸಿ, ಹಲವಾರು ಸವಲತ್ತುಗಳನ್ನು ಪಡೆದುಕೊಂಡಿದ್ದೇವೆ. ಇದೂವರೆಗೂ ಅಂಗನವಾಡಿ ಕಾರ್ಯಕರ್ತೆಯರು ಏನೆಲ್ಲಾ ಸವಲತ್ತುಗಳನ್ನು ಪಡೆದುಕೊಂಡಿದ್ದಾರೆಯೋ ಅದೆಲ್ಲಾ ಎಐಟಿಯುಸಿ ಹೋರಾಟದ ಫಲ ಎಂಬುದನ್ನು ಯಾರೂ ಮರೆಯುವಂತಿಲ್ಲ ಎಂದರು.

ಐಸಿಡಿಎಸ್ ಯೋಜನೆ 50 ವರ್ಷ ಪುರೈಸುತ್ತಿರುವ ಈ ಸಂದರ್ಭಧಲ್ಲಿ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವೆಯನ್ನು ಕಾಯಂಗೊಳಿಸಬೇಕು. ಪೆನ್ಸನ್ ಜಾರಿ ಮಾಡಲು ಸರ್ಕಾರಕ್ಕೆ ಒತ್ತಾಯಿಸಿ ದಿಟ್ಟವಾದ ಹೋರಾಟ ನಡೆಸಬೇಕಾಗಿದೆ. ಸಂಘಟನೆ ಹೋರಾಟಕ್ಕೆ ಕರೆ ಕೊಟ್ಟಾಗ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಭಾಗವಹಿಸಬೇಕು ಎಂದು ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ರಾಜ್ಯ ಸಂಚಾಲಕ ಅ‍ವರಗೆರೆ ಚಂದ್ರು ಪ್ರಾಸ್ತವಿಕವಾಗಿ ಮಾತನಾಡಿದರು. ಎಐಟಿಯುಸಿ ದಾವಣಗೆರೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್, ಶೇಖರಪ್ಪ, ಪಂಪಾಪತಿ, ರೈತಕಾರ್ಮಿಕ ಕಲ್ಯಾಣ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಎಚ್.ಜಿ.ಉಮೇಶ್, ಅಂಗನವಾಡಿ ಸಂಘಟನೆ ಜಿಲ್ಲಾಧ್ಯಕ್ಷರಾದ ಎಸ್.ಎಸ್. ಮಲ್ಲಮ್ಮ, ಪ್ರಧಾನ ಕಾರ್ಯದರ್ಶಿ ಹೊಸಳ್ಳಿ ಮಂಜುಳಾ ಸೇರಿದಂತೆ ಅನೇಕರು ಮಾತನಾಡಿದರು.

ಜಿಲ್ಲಾ ಸಂಘಟನೆ ಮುಖಂಡರಾದ ಮಮತಾ, ಸುಶೀಲ, ವಸಂತ, ಕೆ.ಜಿ ಗೀತಾ, ರೇಣುಕಾ, ಇತರರು ಇದ್ದರು. ಅಂಗನವಾಡಿ ಸಂಘಟನೆ ಹೊನ್ನಾಳಿ ತಾಲೂಕು ಸಮಿತಿ ಅಧ್ಯಕ್ಷೆ ಚನ್ನಮ್ಮ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

- - -

(ಕೋಟ್‌) ಆಡಳಿತ ನಡೆಸುವ ಸರ್ಕಾರಗಳು ನಮ್ಮನ್ನು ಕಡೆಗಣಿಸುತ್ತಿವೆ. ಐಸಿಡಿಎಸ್ ಯೋಜನೆ ದೇಶದಲ್ಲಿ 50 ವರ್ಷ ಪೂರೈಸಿದ್ದು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಕಾಯಂಗೊಳಿಸದೇ ಸರ್ಕಾರಗಳು ವಂಚನೆ ಮಾಡುತ್ತಲೇ ಬರುತ್ತಿವೆ. ಸರ್ಕಾರ ಫಲಾನುಭವಿಗಳಿಗೆ ಉತ್ತಮ ಪೌಷ್ಠಿಕಾಂಶವುಳ್ಳ ಆಹಾರವನ್ನು ಕೊಡಲು ಒತ್ತಾಯಿಸಬೇಕು.

- ಎಂ.ಜಯಮ್ಮ, ರಾಜ್ಯ ಪ್ರಧಾನ ಕಾರ್ಯದರ್ಶಿ

- - -

-25ಎಚ್.ಎಲ್.ಐ2.ಜೆಪಿಜಿ:

ಸಂಘಟನಾ ಸಭೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಜಯಮ್ಮ ಮಾತನಾಡಿದರು.

PREV

Recommended Stories

ಪಾಳು ಬಿದ್ದ ರೈತ ಸಭಾ ಭವನ ಕಟ್ಟಡ
ಕೊಂಕಣಿ ನೆಲದಲ್ಲಿ ಕನ್ನಡದಲ್ಲಿ ಸಹಿ ಸಂಗ್ರಹ, ಕದಂಬ ವೃಕ್ಷ ಪೂಜಿಸಿ ರಾಜ್ಯೋತ್ಸವ ಆಚರಣೆ