ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಅಂಗನವಾಡಿ ಪೂರಕ

KannadaprabhaNewsNetwork |  
Published : Jan 22, 2026, 01:30 AM IST
ದೊಡ್ಡಬಳ್ಳಾಪುರದ ದರ್ಗಾಜೋಗಿಹಳ್ಳಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅಂಗನವಾಡಿ ಕೇಂದ್ರ ಉದ್ಘಾಟನೆ ನೆರವೇರಿಸಿದರು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಮಕ್ಕಳ ಬೌದ್ಧಿಕ ಬೆಳವಣಿಗೆ ಪಡೆದುಕೊಳ್ಳಲು ಪೂರ್ವ ಪ್ರಾಥಮಿಕ ಶಿಕ್ಷಣದ ಪಾತ್ರ ಪ್ರಮುಖವಾಗಿದ್ದು, ಮಾಜಿ ಪ್ರಧಾನಿ ಇಂದಿರಾಗಾಂಧಿ ಕಾಲದಲ್ಲಿ ಅಂಗನವಾಡಿಗಳ ಸ್ಥಾಪನೆ ಆರಂಭಿಸಿ, ಪೌಷ್ಟಿಕ ಆಹಾರದ ಜತೆಗೆ ಉಚಿತವಾಗಿ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಲಾಯಿತು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಹೇಳಿದರು.

ದೊಡ್ಡಬಳ್ಳಾಪುರ: ಮಕ್ಕಳ ಬೌದ್ಧಿಕ ಬೆಳವಣಿಗೆ ಪಡೆದುಕೊಳ್ಳಲು ಪೂರ್ವ ಪ್ರಾಥಮಿಕ ಶಿಕ್ಷಣದ ಪಾತ್ರ ಪ್ರಮುಖವಾಗಿದ್ದು, ಮಾಜಿ ಪ್ರಧಾನಿ ಇಂದಿರಾಗಾಂಧಿ ಕಾಲದಲ್ಲಿ ಅಂಗನವಾಡಿಗಳ ಸ್ಥಾಪನೆ ಆರಂಭಿಸಿ, ಪೌಷ್ಟಿಕ ಆಹಾರದ ಜತೆಗೆ ಉಚಿತವಾಗಿ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಲಾಯಿತು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಹೇಳಿದರು.

ನಗರ ಹೊರವಲಯದ ದರ್ಗಾಜೋಗಿಹಳ್ಳಿಯಲ್ಲಿ ಬೆಂ.ಗ್ರಾ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 23 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಅಂಗನವಾಡಿ ಕೇಂದ್ರದ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಅಂಗನವಾಡಿ ಕೇಂದ್ರಗಳಿಗೆ ಅಗತ್ಯ ನಿವೇಶನ ಸೌಲಭ್ಯವನ್ನು ಸ್ಥಳೀಯ ಗ್ರಾಮ ಪಂಚಾಯಿತಿಗಳು ಒದಗಿಸಲು ಸಹಕರಿಸಬೇಕು. ಇದರಿಂದ 6 ವರ್ಷದೊಳಗಿನ ಪ್ರತಿಯೊಬ್ಬ ಮಕ್ಕಳಿಗೆ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ಅನುಕೂಲವಾಗುತ್ತದೆ ಎಂದರು.

ಜಿಲ್ಲೆಯಲ್ಲಿ 139 ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡವಿಲ್ಲದೇ ಬಾಡಿಗೆ ಕಟ್ಟಡಗಳಿದ್ದು, 40 ಕಡೆ ಖಾಲಿ ನಿವೇಶನಗಳನ್ನು ಗುರುತಿಸಲಾಗಿದೆ. ಸದ್ಯ 40 ಅಂಗನವಾಡಿ ಕಟ್ಟಡ ನಿರ್ಮಾಣ ಹಂತದಲ್ಲಿವೆ ಎಂದು ಹೇಳಿದರು.

ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಮಾತನಾಡಿ, ಅಂಗನವಾಡಿ ಬಾಡಿಗೆ ಕಟ್ಟಡದ ದರವನ್ನು 6,000 ದಿಂದ 10,000 ಕ್ಕೆ ಏರಿಸಿದರೆ ಉತ್ತಮ, ನಗರಸಭೆ ವಾರ್ಡ್ ಗಳಲ್ಲಿ 1000 ಜನಕ್ಕಿಂತ ಹೆಚ್ಚಿರುವ ಪ್ರದೇಶಗಳಲ್ಲಿ ಹೆಚ್ಚುವರಿ ನ್ಯಾಯಬೆಲೆ ಅಂಗಡಿ ಸ್ಥಾಪಿಸಲು, ಕಾವೇರಿ ನೀರು ಹಾಗೂ ಮೆಟ್ರೋ ಸಂಪರ್ಕ ದೊಡ್ಡಬಳ್ಳಾಪುರಕ್ಕೆ ಒದಗಿಸಲು ಉಸ್ತುವಾರಿ ಸಚಿವರಲ್ಲಿ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷರಾದ ವಿಶ್ವನಾಥ್ ರೆಡ್ಡಿ, ಗ್ರಾ.ಪಂ ಅಧ್ಯಕ್ಷೆ ಶಶಿಕಲಾ ನಾಗರಾಜು, ಉಪಾಧ್ಯಕ್ಷೆ ಶೋಭಾ ಭಾಯಿ, ಇಒ ಮಂಜುನಾಥ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

ಫೋಟೋ-

21ಕೆಡಿಬಿಪಿ4- ದೊಡ್ಡಬಳ್ಳಾಪುರದ ದರ್ಗಾಜೋಗಿಹಳ್ಳಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅಂಗನವಾಡಿ ಕೇಂದ್ರ ಉದ್ಘಾಟನೆ ನೆರವೇರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬ್ಯಾಲೆಟ್‌ನಲ್ಲಿ ಮತದಾನ ನಡೆಸಿದರೆ ತಪ್ಪೇನು? ರಾಜ್ಯ ಚುನಾವಣಾ ಆಯುಕ್ತ
ಜಾಗತಿಕ ಸವಾಲಿಗೆ ನವೋದ್ಯಮ ಉತ್ತರ : ರಾಧಾಕೃಷ್ಣನ್‌