ಬೇಡಿಕೆ ಈಡೇರಿಕೆಗೆ ಅಂಗನವಾಡಿ ಕಾರ್ಯಕರ್ತೆಯರ ಮನವಿ

KannadaprabhaNewsNetwork |  
Published : Jul 31, 2025, 12:47 AM IST
ರಾಣಿಬೆನ್ನೂರಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಸಾರ್ವಜನಿಕರು ತಹಸೀಲ್ದಾರ್ ಆರ್.ಎಚ್. ಭಾಗವಾನ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಸರ್ಕಾರ ತತಕ್ಷಣದಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಬಿಎಲ್‌ಒ ಕೆಲಸದಿಂದ ಬಿಡುಗಡೆ ಮಾಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ರಾಣಿಬೆನ್ನೂರು: ಅಂಗನವಾಡಿ ಕಾರ್ಯಕರ್ತೆಯರನ್ನು ಬಿಎಲ್‌ಒ ಕಾರ್ಯದಿಂದ ವಿಮುಕ್ತಿಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಸಾರ್ವಜನಿಕರು ತಹಸೀಲ್ದಾರ್ ಆರ್.ಎಚ್. ಭಾಗವಾನ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳಿಗೆ ಭವಿಷ್ಯದ ಬುನಾದಿಯಾಗಿದ್ದು, ಅವರನ್ನು ಸರ್ಕಾರ ಜೀತ ಪದ್ಧತಿಯ ರೀತಿ ಕೆಲಸ ಮಾಡಿಸಿಕೊಳ್ಳುತ್ತಿದೆ. ಅವರಿಗೆ ಸರಿಯಾಗಿ ವೇತನ ಮತ್ತು ಸರಿಯಾದ ರಕ್ಷಣೆ ಇಲ್ಲವಾಗಿದೆ. ಈಗಾಗಲೇ ಮತದಾರರ ಗುರುತಿನ ಚೀಟಿ ಮಾಡಿಸಲಿಕ್ಕೆ ಅವರನ್ನು ಬಳಕೆ ಮಾಡಿಕೊಳ್ಳಲಾಗಿದೆ. ಇದರಿಂದ ಅಂಗನವಾಡಿಯಲ್ಲಿ ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ನೀಡಲು ತೊಂದರೆಯಾಗಿದೆ. ಜಿಪಿಎಸ್ ಫೋಟೊ ತೆಗೆಯುವುದು ಮತ್ತಿತರ ಕೆಲಸದ ಒತ್ತಡದಿಂದ ಸರಿಯಾಗಿ ಮಕ್ಕಳಿಗೆ ಶಿಕ್ಷಣ ದೊರೆಯುತ್ತಿಲ್ಲ. ಆದ್ದರಿಂದ ಸರ್ಕಾರ ತತಕ್ಷಣದಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಬಿಎಲ್‌ಒ ಕೆಲಸದಿಂದ ಬಿಡುಗಡೆ ಮಾಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ತಾಲೂಕು ರೈತ ಸಂಘದ ಅಧ್ಯಕ್ಷ ಹನುಮಂತಪ್ಪ ಕಬ್ಬಾರ, ಯಲ್ಲಪ್ಪ ಚಿಕ್ಕಣ್ಣನವರ, ರಾಜೇಶ ಅಂಗಡಿ, ಮಂಜುನಾಥ ಸಂಬೋಜಿ, ಲಲಿತಾ ಲಮಾಣಿ, ಶೈಲಮ್ಮ ಹರನಗಿರಿ, ದೇವರಾಜ ಗುತ್ತಲ, ವಿರುಪಾಕ್ಷಪ್ಪ ಮೆಡ್ಲೇರಿ, ರವಿ ಬೂದನೂರ, ಶಿವಾನಂದಪ್ಪ ಬೂದನೂರ, ದೀಪು ಲಮಾಣಿ, ಗಣೇಶಪ್ಪ ಲಮಾಣಿ, ಶಂಕ್ರಪ್ಪ ಲಮಾಣಿ ಮತ್ತಿತರರಿದ್ದರು.ಅಪೌಷ್ಟಿಕತೆ ನಿವಾರಣೆಗೆ ಹಲವು ಕ್ರಮ

ಹಾನಗಲ್ಲ: ತಾಲೂಕಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಹಾಗೂ ಸುಸಜ್ಜಿತ ಕಟ್ಟಡ ನಿರ್ಮಿಸಿ, ಮಕ್ಕಳ ಸಂತಸದ ಕಲಿಕೆಗೆ ಪೂರಕ ವಾತಾವರಣ ಸೃಷ್ಟಿಸಲು ಗಮನ ಹರಿಸಲಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.

ತಾಲೂಕಿನ ಕರಗುದರಿ ಗ್ರಾಮದಲ್ಲಿ ₹20 ಲಕ್ಷ ವೆಚ್ಚದಲ್ಲಿ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ ಅವರು, ಬಾಲ್ಯದಿಂದಲೇ ಮಕ್ಕಳಿಗೆ ಶಿಕ್ಷಣದ ಮೂಲಕ ಭದ್ರಬುನಾದಿ ಒದಗಿಸುವಲ್ಲಿ ಪೋಷಕರು ಹಾಗೂ ಸಮುದಾಯದ ಪಾತ್ರ ಮಹತ್ವದ್ದಾಗಿದೆ. ಮಕ್ಕಳನ್ನು ಮೊಬೈಲ್‌ನಿಂದ ದೂರ ಇರಿಸಿ, ಅವರಿಗೆ ಉತ್ತಮ ಸಂಸ್ಕಾರ ನೀಡಬೇಕಿದೆ. ಮಕ್ಕಳಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ಸರ್ಕಾರ ಅನೇಕ ಕಾರ್ಯಕ್ರಮ ರೂಪಿಸಿದೆ ಎಂದು ಹೇಳಿದ ಅವರು, ಅಂಗನವಾಡಿ ಕೇಂದ್ರಗಳಿಗೆ ಅಗತ್ಯ ಸೌಲಭ್ಯ ಒದಗಿಸಿದಲ್ಲಿ ಮಕ್ಕಳ ಕಲಿಕೆ ಮತ್ತು ಸರ್ವಾಂಗೀಣ ಬೆಳವಣಿಗೆಗೆ ಸಹಕಾರಿಯಾಗಲಿದ್ದು, ಈ ನಿಟ್ಟಿನಲ್ಲಿ ಆಸಕ್ತಿ ವಹಿಸಿದ್ದಾಗಿ ತಿಳಿಸಿದರು.ಗ್ರಾಪಂ ಸದಸ್ಯರಾದ ಅಬ್ದುಲ್‌ರಜಾಕ್ ಮುಲ್ಲಾ, ಲಕ್ಷ್ಮವ್ವ ಲಮಾಣಿ, ಕುಮಾರ ಲಮಾಣಿ, ಇಕ್ಬಾಲ್ ಆಡೂರ, ಮಕ್ಬೂಲ್ ಆಡೂರ, ತ್ಯಾಗರಾಜ್ ಓಲೇಕಾರ, ಜಾಫರ್ ಸುತಾರ, ಅಬ್ದುಲ್‌ರಹೀಮ್ ಹಳ್ಳೂರ ಸೇರಿದಂತೆ ಗ್ರಾಪಂ ಸದಸ್ಯರು, ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಲವು ಜಿಲ್ಲೆಗಳಲ್ಲಿ ಶೀತಗಾಳಿ ತಾಪಮಾನ 5-7 ಡಿಗ್ರಿ ಇಳಿಕೆ
‘ಬಾಡಿಗೆ ತಾಯ್ತನ’ದಿಂದ ಮಗು : ವೃದ್ಧ ದಂಪತಿಯಿಂದ ಕೋರ್ಟ್‌ ಮೊರೆ