ವಿವಿಧ ಬೇಡಿಕೆಗಳ ಈಡೇರಿಕೆಗೆ ಅಂಗನವಾಡಿ ಕಾರ್ಯಕರ್ತೆಯರಿಂದ ಡಿಸಿಎಂ ಭೇಟಿ

KannadaprabhaNewsNetwork |  
Published : Feb 01, 2025, 12:02 AM IST
31ಕೆಕೆಡಿಯು1. | Kannada Prabha

ಸಾರಾಂಶ

ಕಡೂರು, ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳನ್ನು ಬಜೆಟ್‍ನಲ್ಲಿ ಮಂಡಿಸಿ ಈಡೇರಿಸಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಲಾಯಿತು ಎಂದು ಭಾರತೀಯ ಮಜ್ದೂರ್ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಸಿ. ಶಿವಮ್ಮ ತಿಳಿಸಿದರು.

ಕನ್ನಡಪ್ರಭ ವಾರ್ತೆ, ಕಡೂರು

ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳನ್ನು ಬಜೆಟ್‍ನಲ್ಲಿ ಮಂಡಿಸಿ ಈಡೇರಿಸಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಲಾಯಿತು ಎಂದು ಭಾರತೀಯ ಮಜ್ದೂರ್ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಸಿ. ಶಿವಮ್ಮ ತಿಳಿಸಿದರು.

ಶುಕ್ರವಾರ ಪಟ್ಟಣದಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ ತಿಂಗಳಲ್ಲಿ ಮಂಡಿಸಲಿರುವ ರಾಜ್ಯ ಬಜೆಟ್‍ನಲ್ಲಿ ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಮೂಲಭೂತ ಸೌಕರ್ಯಗಳನ್ನು ನೀಡಲು ಉಪ ಮುಖ್ಯಮಂತ್ರಿ ಗಳಲ್ಲಿ ಮನವಿ ಮಾಡಿ ನಮ್ಮ ಬೇಡಿಕೆ ಪತ್ರ ನೀಡಿದ್ದು, ಅದಕ್ಕೆ ಸಕಾರಾತ್ಮವಾಗಿ ಸ್ಪಂದಿಸಿದ ಡಿ.ಕೆ.ಶಿವಕುಮಾರ್ ಬೇಡಿಕೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ ಎಂದರು.

ನಮ್ಮ ಕಾರ್ಯಕರ್ತೆಯರಿಗೆ ₹25 ಸಾವಿರ ಹಾಗೂ ಸಹಾಯಕಿಯರಿಗೆ ₹12 ಸಾವಿರ ಕನಿಷ್ಠ ವೇತನ ನಿಗದಿಪಡಿಸಬೇಕು. ಕಾರ್ಯಕರ್ತೆ ಯರನ್ನು ಸಿ.ದರ್ಜೆ, ಸಹಾಯಕಿಯರನ್ನು ಡಿ.ದರ್ಜೆ ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ಈಗಾಗಲೇ ಗುಜರಾಜ್ ಹೈ ಕೋರ್ಟ್ ನೀಡಿರುವ ಆದೇಶದ ಪ್ರಕಾರ ನಮ್ಮ ರಾಜ್ಯದಲ್ಲಿಯೂ ನೀಡಲಿ ಎಂದು ಅಗ್ರಹಿಸಿಲಾಯಿತು. ಉತ್ತಮ ಗುಣಮಟ್ಟದ ಯೂನಿಫಾರಂ ನೀಡಬೇಕು, ಇತರೆ ಇಲಾಖೆಗಳ ಕೆಲಸ ಕಡಿತಗೊಳಿಸಬೇಕು, ಮೊಟ್ಟೆ, ತರಕಾರಿ ಹಣವನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಲಾಯಿತು ಎಂದರು.ಮುಂಬರಲಿರುವ ರಾಜ್ಯ ಬಜೆಟ್‍ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಬೇಡಿಕೆ ಈಡೇರಿಸದಿದ್ದರೆ ರಾಜ್ಯಾದ್ಯಂತ ಹೋರಾಟದ ಕಹಳೆ ಮೊಳಗಲಿದೆ ಎಂದು ಎಚ್ಚರಿಸಿದರು.ಕಡೂರು ತಾಲೂಕು ಪ್ರಧಾನ ಕಾರ್ಯದರ್ಶಿ ಕವಿತಾ ಕೆ.ಎಂ, ತಾಲೂಕು ಉಪಾಧ್ಯಕ್ಷೆ ಪ್ರಮೀಳಾ, ರಾಜ್ಯ ಪದಾಧಿಕಾರಿ ಪದ್ಮ.ಕೆ, ಹೇಮಾವತಿ ಬಿ.ಟಿ, ಇಂದ್ರಮ್ಮ ಮತ್ತಿತರರು ಇದ್ದರು.31ಕೆಕೆಡಿಯು1

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ತಮ್ಮ ಬೇಡಿಕೆಗಳನ್ನು ಬಜೆಟ್‍ನಲ್ಲಿ ಸೇರಿಸಿ ನ್ಯಾಯ ನೀಡಬೇಕೆಂದು ಒತ್ತಾಯಿಸಿ ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

PREV

Recommended Stories

ಇಂದಿನಿಂದ ಪ್ರೊ ಕಬಡ್ಡಿ ಲೀಗ್‌ ಶುರು : 12ನೇ ಆವೃತ್ತಿ । 12 ತಂಡ, ಒಟ್ಟು 117 ಪಂದ್ಯ
‘ಧರ್ಮಸ್ಥಳ ಬಗ್ಗೆ ಅಪಪ್ರಚಾರ ಮಾಡುವವರು ಕಷ್ಟಕ್ಕೆ ಸಿಲುಕ್ತಾರೆ’