ಹೊಸದುರ್ಗ: ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಿಳ ಮಾಡುವಂತಹ ಒತ್ತಾಯಿಸಿ ಪಟ್ಟಣದ ಶಾಸಕರ ಕಚೇರಿ ಮುಂಭಾಗ ಎಐಟಿಯುಸಿ ನೇತೃತ್ವದಲ್ಲಿ ಕಾರ್ಯಕರ್ತೆಯರು ಬುಧವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಆದರೆ, ಚುನಾವಣೆಯಲ್ಲಿ ಗೆದ್ದು ಮುಖ್ಯಮಂತ್ರಿಯಾದ ಸಿದ್ದರಾಮಯ್ಯನವರು ಇತ್ತೀಚಿಗೆ ಮಂಡಿಸಿದ 2024 -25ನೇ ಬಜೆಟ್‌ನಲ್ಲಿ ಈ ವಿಚಾರ ಪ್ರಸ್ತಾಪಿಸದೆ ಇರುವುದು ಬೇಸರದ ಸಂಗತಿ ಎಂದರು.
ರಾಜ್ಯ ಘಟಕದ ಸೂಚನೆಯ ಮೇರೆಗೆ ರಾಜ್ಯದಾದ್ಯಂತ ಎಲ್ಲಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶಾಸಕರ ಕಚೇರಿ ಮುಂದೆ ಇಂದು ಸಾಂಕೇತಿಕ ಧರಣಿ ನಡೆಸುತ್ತಿದ್ದು ಶಾಸಕರುಗಳು ಮುಖ್ಯಮಂತ್ರಿಗಳನ್ನು ಒತ್ತಾಯಿಸುವ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕರಿಗೆ ಗೌರವಧನ ಹೆಚ್ಚಳ ಮಾಡುವಂತೆ ಮನವಿ ಮಾಡಿದರು.ಈ ವೇಳೆ ಅಂಗನವಾಡಿ ಕಾರ್ಯಕರ್ತೆಯರ ಫೆಡರೇಶನ ಅಧ್ಯಕ್ಷೆ ಸುಮಿತ್ರಾ ಬಾಯಿ, ಕಾರ್ಯದರ್ಶಿ ಗೀತಾಂಜಲಿ, ಉಪಾಧ್ಯಕ್ಷೆ ಸೌಭಾಗ್ಯ, ರೂಪ ಸೇರಿದಂತೆ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಭಾಗವಹಿಸಿದ್ದರು.