ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆ ತುಂಬಬೇಕು. ಖಾಲಿ ಇರುವ ಮೇಲ್ವಿಚಾರಕಿ, ಸಿಡಿಪಿಓ ಹುದ್ದೆ ತುಂಬಬೇಕು.
ಹೊಸಪೇಟೆ: ಅಂಗನವಾಡಿ ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ ಸರ್ಕಾರ ಶೀಘ್ರ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ, ವಿಜಯನಗರ ಜಿಲ್ಲಾ ಸಮಿತಿ ವತಿಯಿಂದ ಶಾಸಕ ಎಚ್.ಆರ್. ಗವಿಯಪ್ಪ ಅವರ ನಿವಾಸದ ಎದುರು ಶನಿವಾರ ಪ್ರತಿಭಟನೆ ನಡೆಸಿ ಒತ್ತಾಯಿಸಲಾಯಿತು.
ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆ ತುಂಬಬೇಕು. ಖಾಲಿ ಇರುವ ಮೇಲ್ವಿಚಾರಕಿ, ಸಿಡಿಪಿಓ ಹುದ್ದೆ ತುಂಬಬೇಕು. ಚುನಾವಣೆ ಕೆಲಸಗಳಿಂದ ಅಂಗನವಾಡಿ ನೌಕರರನ್ನು ಬಿಡುಗಡೆ ಮಾಡಬೇಕು. ಈಗಾಗಲೇ ರಾಜ್ಯದಲ್ಲಿ ಬಿಎಲ್ ಒ ಕಾರಣಗಳಿಂದ ವಜಾಗೊಳಿಸಿರುವ ಕಾರ್ಯಕರ್ತೆಯರ ವಜಾ ಅಮಾನತ್ತು ತೆರವು ಗೊಳಿಸಬೇಕು. ನಗರ ಪ್ರದೇಶಗಳಲ್ಲಿ ಸಹಾಯಕಿ ಆಯ್ಕೆಗೆ ಇರುವ ಮಾನದಂಡ ಬದಲಾಯಿಸಬೇಕು ಮತ್ತು ನಗರ ಪ್ರದೇಶಗಳಲ್ಲಿ ಇರುವ ಖಾಲಿ ಹುದ್ದೆ ಶೀಘ್ರ ಭರ್ತಿಮಾಡಬೇಕು ಎಂದರು.
ಮುಂಗಡವಾಗಿ ಮೊಟ್ಟೆ, ಬಾಡಿಗೆ, ಗ್ಯಾಸ್, ಕರೆಸ್ಸಿ ಹಣ, ತರಕಾರಿ, ಆಡಳಿತ ವೆಚ್ಚ, ಸಾದಿಲ್ವಾರು ಹಾಕದೇ ಫಲಿತಾಂಶ ಕೇಳಬಾರದು. ನೌಕರರಿಗೆ ಸಾಮೂಹಿಕ ಆರೋಗ್ಯ ವಿಮೆ ಜಾರಿ ಮಾಡಬೇಕು. ಅಂಗನವಾಡಿ ನೌಕರರಿಗೆ ಬೆಲೆ ಏರಿಕೆಗೆ ಅನುಗುಣವಾಗಿ ಕನಿಷ್ಠ ವೇತನ ನೀಡಬೇಕು. ಎಫ್ ಆರ್ ಎಸ್ ಕೈಬಿಡಬೇಕು ಅಂಗನವಾಡಿ ಕೇಂದ್ರಕ್ಕೆ ಗುಣಮಟ್ಟದ ಮೊಬೈಲ್ ನೀಡಬೇಕು ಮತ್ತು ವೈಪೈ ವ್ಯವಸ್ಥೆ ಕಲ್ಪಿಸಬೇಕು ಎಂದರು.
ರಾಜ್ಯ ಸರ್ಕಾರ ಮತ್ತು ಖಾಸಗಿ ವಲಯಗಳಲ್ಲಿ ದುಡಿಯುವ ಮಹಿಳೆಯರಿಗೆ ನೀಡಿರುವ ಮುಟ್ಟಿನ ರಜೆ ಅಂಗನವಾಡಿ ಕಾರ್ಯಕರ್ತೆಸಹಾಯಕಿಗೂ ಜಾರಿ ಮಾಡಬೇಕು. ಅಂಗನವಾಡಿ ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆ ಅನ್ವಯ ಮಾಡಿ ಜಾರಿ ಮಾಡಬೇಕು.
ನಿವೃತ್ತರಾದವರಿಗೆ ಇಡಿಗಂಟು ಹೆಚ್ಚಳ ಮಾಡಬೇಕು ಹಾಗೂ ಮಾಸಿಕ 10 ಸಾವಿರ ಪಿಂಚಣಿ ನೀಡಬೇಕು. ಐಸಿಡಿಎಸ್ ಪ್ರತ್ಯೇಕ ನಿರ್ದೇಶನಾಲಯ ಸ್ಥಾಪನೆ ಮಾಡಬೇಕು ಎಂದರು.
ಮೊಟ್ಟೆ ನೀಡುವ ಬದಲಿಗೆ ನೇರ ನಗದು ಜಮಾವಣೆ ಡಿಬಿಟಿ ತರುತ್ತಿರುವುದನ್ನು ಕೈಬಿಡಬೇಕು. ಬಜೆಟ್‌ನಲ್ಲಿ ಅಂಗನವಾಡಿ ನೌಕರರಿಗೆ ಗೌರವಧನ ತಕ್ಷಣ ವೇತನ ಹೆಚ್ಚಳ ಮಾಡಬೇಕು ಎಂಬ ಬೇಡಿಕೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಮನವಿ ಪತ್ರ ಸಲ್ಲಿಸಿ ಒತ್ತಾಯಿಸಲಾಯಿತು.
ಮುಖಂಡರಾದ ಕೆ. ನಗರತ್ನಮ್ಮ, ಶಕುಂತಲಾ, ಸ್ವಪ್ನ, ಅಮೃತ, ಸುನೀತಾ ಸೇರಿದಂತೆ ಇತರರು ಉಪಸ್ಥಿತರಿದ್ದರು. ಶಾಸಕರ ಪರವಾಗಿ ಅವರ ಪುತ್ರ ಎಚ್.ಜಿ. ಗುರುದತ್ ಮನವಿ ಸ್ವೀಕರಿಸಿದರು.
ಹೊಸಪೇಟೆಯಲ್ಲಿ ಅಂಗನವಾಡಿ ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ ಸರ್ಕಾರ ಶೀಘ್ರ ಈಡೇರಿಸುವಂತೆ ಒತ್ತಾಯಿಸಿ ಶಾಸಕ ಎಚ್.ಆರ್. ಗವಿಯಪ್ಪ ಅವರ ನಿವಾಸದ ಎದುರು ಶನಿವಾರ ಪ್ರತಿಭಟನೆ ನಡೆಸಿ ಒತ್ತಾಯಿಸಲಾಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.