ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಬಾಲ ಭವನದಲ್ಲಿ ಆರ್‌ಬಿಐ, ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಹಾಗೂ ಸಾರ್ತಿ ಆರ್ಥಿಕ ಸಾಕ್ಷರತಾ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂಗನವಾಡಿ ಕಾರ್ಯಕರ್ತರಿಗೆ ಆಯೋಜಿಸಿದ್ದ ಆರ್ಥಿಕ ಸಾಕ್ಷರತಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಅಂಗನವಾಡಿ ಕಾರ್ಯಕರ್ತರು ಮಾಸಿಕ ಉಳಿತಾಯದ ಕಡೆ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.
ಆರ್ಥಿಕ ಸಮಾಲೋಚಕರಾದ ಕೆ.ಪಿ.ಅರುಣಕುಮಾರಿ ಅವರು, ಮಾಸಿಕ ಉಳಿತಾಯ, ಕುಟುಂಬ ಬಜೆಟ್ ನಿರ್ವಹಣೆ, ವಿಮೆ ಅವಶ್ಯಕತೆ, ಆದಾಯ ಹೆಚ್ಚಿಸಲು ಕೈಗೊಳ್ಳಬಹುದಾದ ಅವಕಾಶಗಳು, ಸರ್ಕಾರದ ವಿವಿಧ ಯೋಜನೆಗಳು , ಸಾಲ ಸೌಲಭ್ಯ ಹಾಗೂ ಆದಾಯಕ್ಕಿಂತ ಖರ್ಚು ಕಡಿಮೆ ಮಾಡುವ ಮೂಲಕ ಆರ್ಥಿಕ ಶಿಸ್ತು ಬೆಳೆಸಿಕೊಳ್ಳಲು ಮಾಹಿತಿ ನೀಡಿದರು.ಬ್ಯಾಂಕ್ ಆಫ್ ಬರೋಡ ಸ್ವ ಉದ್ಯೋಗ ತರಬೇತಿ ಸಂಸ್ಥೆ ಪ್ರಸನ್ನ ಕುಮಾರ್ ಮಾತನಾಡಿ, ಸ್ವಉದ್ಯೋಗ ತರಬೇತಿ ಸಂಸ್ಥೆಯಲ್ಲಿ ದೊರೆಯುವ ಉಚಿತ ತರಬೇತಿಗಳನ್ನು ತಮ್ಮ ಕುಟುಂಬದ ಸದಸ್ಯರು ಸದುಪಯೋಗ ಪಡಿಸಿಕೊಂಡು ಕುಟುಂಬದ ಆರ್ಥಿಕ ಸಬಲೀಕರಣಕ್ಕೆ ಶ್ರಮಿಸಲು ಕೋರಿದರು.
ಸಂಪ್ರದಾಯಕ ಉಡುಗೆ ತೊಟ್ಟು ಸಂಭ್ರಮಿಸಿದ ವಿದ್ಯಾರ್ಥಿಗಳು
ತಾಲೂಕಿನ ಬನ್ನಂಗಾಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಂಪ್ರದಾಯ ದಿನದ ಅಂಗವಾಗಿ ವಿದ್ಯಾರ್ಥಿಗಳು ಸಂಪ್ರದಾಯಕ ಉಡುಗೆ ತೊಡುಗೆ ತೊಟ್ಟು ಸಂಭ್ರಮಿಸಿದರು.
ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಬಿ.ಕೆ.ಶ್ರೀನಿವಾಸ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಕ್ಕಳ ಸಂಪ್ರದಾಯ, ಸಂಸ್ಕೃತಿ ಕಣ್ಮರೆಯಾಗುತ್ತಿವೆ. ಹಾಗಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಹಿಂದೂ ಧರ್ಮದ ಸಂಪ್ರದಾಯ, ಸಂಸ್ಕೃತಿ, ಆಚಾರ-ವಿಚಾರಗಳ ಬಗ್ಗೆ ಜಾಗೃತಿ ಮೂಡಿಸುವುದು ಅತ್ಯಗತ್ಯ. ವಿದ್ಯಾರ್ಥಿಗಳು ನಮ್ಮ ಸಂಪ್ರದಾಯವನ್ನು ಎಂದಿಗೂ ಮರೆಯಬಾರದು ಎಂದರು.