20ರ ಮುಷ್ಕರಕ್ಕೆ ಅಂಗನವಾಡಿ ನೌಕರರ ಬೆಂಬಲ

KannadaprabhaNewsNetwork |  
Published : May 06, 2025, 12:17 AM IST
೫ಕೆಎಲ್‌ಆರ್-೪ಮೇ.೨೦ರ ಅಖಿಲ ಭಾರತ ಮುಷ್ಕರಕ್ಕೆ ಸಂಬಂಧಿಸಿದ್ದಂತೆ ಕೋಲಾರದ ಅಂಗನವಾಡಿ ನೌಕರರ ಸಂಘದ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ರಾಜ್ಯ  ಜಿಲ್ಲಾ ಅಧ್ಯಕ್ಷೆ ಆರ್.ಅಂಜಲಮ್ಮ ಮಾತನಾಡಿದರು. | Kannada Prabha

ಸಾರಾಂಶ

ವೇತನ ಹೆಚ್ಚಳ, ಮಿನಿ ಅಂಗನವಾಡಿ ಕೇಂದ್ರಗಳನ್ನು ಸಂಪೂರ್ಣ ಕೇಂದ್ರಗಳಾಗಿ ಪರಿವರ್ತಿಸುವುದು ಸೇರಿ ವಿವಿಧ ಬೇಡಿಕೆಗಳಿಗಾಗಿ ಒತ್ತಾಯಿಸಿ ಅನೇಕ ಬಾರಿ ಪ್ರತಿಭಟನೆ ಸಭೆಗಳು ನಡೆಸಲಾಗಿದೆ. ಆದರೂ ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸಿಲ್ಲ ಅಂಗನವಾಡಿಗಳಲ್ಲಿ ಮಾಂಟಿಸ್ಸರಿ ಎಲ್‌ಕೆಜಿ, ಯುಕೆಜಿಗಳ ಸ್ಥಾಪನೆಗೆ ಅನುದಾನ ಘೋಷಣೆ ಮಾಡಿ ಅಗತ್ಯ ಸೌಲಭ್ಯ ಕಲ್ಪಿಸಬೇಕು

ಕನ್ನಡಪ್ರಭ ವಾರ್ತೆ ಕೋಲಾರಅಂಗನವಾಡಿ ನೌಕರರ ವೇತನ ಹೆಚ್ಚಳ, ಗ್ರಾಚ್ಯುಟಿ, ಅಂಗನವಾಡಿ ಕೇಂದ್ರಗಳನ್ನು ಅಂಗನವಾಡಿ ಮಾಂಟೆಸ್ಸರಿ ಎಂದು ಘೋಷಿಸಿ ಮೇಲ್ದರ್ಜೆಗೇರಿಸಿರುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೇ ೨೦ರಂದು ನಡೆಯಲಿರುವ ಕಾರ್ಮಿಕ ಮುಷ್ಕರಕ್ಕೆ ಅಂಗನವಾಡಿ ನೌಕರರು ಬೆಂಬಲಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷೆ ಆರ್.ಅಂಜಲಮ್ಮ ತಿಳಿಸಿದರುನಗರದಲ್ಲಿ ತಮ್ಮ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ಕೇಂದ್ರ ಮತ್ತು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು ಬೇಡಿಕೆಗಳ ಈಡೇರಿಸದಿರುವುದನ್ನು ವಿರೋಧಿಸಿ ಅಂಗನವಾಡಿಯ ಕೆಲಸ ಸ್ಥಗಿತಗೊಳಿಸಿ ಮುಷ್ಕರ ನಡೆಸಲಾಗುತ್ತಿದೆ. ಇದಕ್ಕೆ ಪ್ರತಿಯೊಬ್ಬ ಅಂಗನವಾಡಿ ನೌಕರರು, ಕಾರ್ಯಕರ್ತರು ಬೆಂಬಲಿಸಿ ಮುಷ್ಕರದಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.ಬೇಡಿಕೆಗೆ ಸರ್ಕಾರದ ನಿರ್ಲಕ್ಷ್ಯ

ವೇತನ ಹೆಚ್ಚಳ, ಮಿನಿ ಅಂಗನವಾಡಿ ಕೇಂದ್ರಗಳನ್ನು ಸಂಪೂರ್ಣ ಕೇಂದ್ರಗಳಾಗಿ ಪರಿವರ್ತಿಸುವುದು ಸೇರಿ ವಿವಿಧ ಬೇಡಿಕೆಗಳಿಗಾಗಿ ಒತ್ತಾಯಿಸಿ ಅನೇಕ ಬಾರಿ ಪ್ರತಿಭಟನೆ ಸಭೆಗಳು ನಡೆಸಲಾಗಿದೆ. ಆದರೂ ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸಿಲ್ಲ ಅಂಗನವಾಡಿಗಳಲ್ಲಿ ಮಾಂಟಿಸ್ಸರಿ ಎಲ್‌ಕೆಜಿ, ಯುಕೆಜಿಗಳ ಸ್ಥಾಪನೆಗೆ ಅನುದಾನ ಘೋಷಣೆ ಮಾಡಿ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.ಕಾರ್ಮಿಕರ ಹಕ್ಕು ರಕ್ಷಿಸಿ

ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಕಲ್ಪನಾ ಮಾತನಾಡಿ, ಅಂಗನವಾಡಿ ಕೇಂದ್ರಗಳಿಗೆ ವಿತರಣೆ ಮಾಡುವ ಆಹಾರ ಪದಾರ್ಥಗಳನ್ನು ಬದಲಿಸಿ ಸ್ಥಳೀಯ ಮಟ್ಟದ ಆಹಾರ ಪದಾರ್ಥಗಳನ್ನು ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡಬೇಕು. ಕಾರ್ಮಿಕ, ನೌಕರರ ಹಕ್ಕುಗಳನ್ನು ಮೊಟಕುಗೊಳಿಸುವ ಕ್ರಮ ಕೈಬಿಡಬೇಕು ಎಂದು ಒತ್ತಾಯಿಸಿದರು.ಅಂಗನವಾಡಿ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷೆ ರಾಜಮ್ಮ, ಸಹ ಕಾರ್ಯದರ್ಶಿ ಲಕ್ಷ್ಮೀದೇವಮ್ಮ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಎಂ.ಭೀಮರಾಜ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ