ಮಕ್ಕಳ ಸಮಗ್ರ ಬೆಳವಣಿಗೆಗೆ ಪೌಷ್ಟಿಕ ಆಹಾರ, ಉತ್ತಮ ಆರೋಗ್ಯ ಹಾಗೂ ಗುಣಮಟ್ಟದ ಪೂರ್ವ ಪ್ರಾಥಮಿಕ ಶಿಕ್ಷಣ ಅತ್ಯಂತ ಅಗತ್ಯ. ಈ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳು ಮಕ್ಕಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ಕನ್ನಡಪ್ರಭ ವಾರ್ತೆ ಇಂಡಿ

ಇಂಡಿ ನಗರದಲ್ಲಿ ಮಾದರಿ ಅಂಗನವಾಡಿ ಕೇಂದ್ರದ ಲೋಕಾರ್ಪಣೆ ಹಾಗೂ ತಾಲೂಕು ಮಟ್ಟದ ಪೋಷಣ ಮಾಸಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಮಕ್ಕಳನ್ನು ಅಂಗನವಾಡಿ ಕೇಂದ್ರಗಳಿಗೆ ಸೇರಿಸುವುದರಿಂದ ಅವರ ಸಮಗ್ರ ಬೆಳವಣಿಗೆ ಕಾಣಬಹುದು. ಮಕ್ಕಳ ಸಮಗ್ರ ಬೆಳವಣಿಗೆ ಜತೆಗೆ ವ್ಯಕ್ತಿತ್ವ ವಿಕಸನ, ಪೌಷ್ಟಿಕ ಆಹಾರ, ಪ್ರಾಥಮಿಕ ಶಿಕ್ಷಣ, ಆರೋಗ್ಯ ಹಾಗೂ ಸುರಕ್ಷಿತ ಆರೈಕೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳು ಇಂದಿನ ದಿನಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ ಎಂದರು.
ಪೋಷಣ ಮಾಸಾಚರಣೆ ಮೂಲಕ ಮಕ್ಕಳ ಹಾಗೂ ತಾಯಂದಿರಲ್ಲಿ ಪೌಷ್ಟಿಕ ಆಹಾರ, ಆರೋಗ್ಯ ಮತ್ತು ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸುವ ಕಾರ್ಯ ಇನ್ನಷ್ಟು ಪರಿಣಾಮಕಾರಿಯಾಗಿ ನಡೆಯಬೇಕು ಎಂದು ಹೇಳಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.