ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿ ಮತ್ತು ಕೇಂದ್ರ ಸರ್ಕಾರದ ನಡೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಘಟಕದಿಂದ ನಗರದಲ್ಲಿ ಶನಿವಾರ ಖಾಲಿ ಚೊಂಬು ಪ್ರದರ್ಶನ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.
ಬಾಗಲಕೋಟೆ : ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿ ಮತ್ತು ಕೇಂದ್ರ ಸರ್ಕಾರದ ನಡೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಘಟಕದಿಂದ ನಗರದಲ್ಲಿ ಶನಿವಾರ ಖಾಲಿ ಚೊಂಬು ಪ್ರದರ್ಶನ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.
ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು, ಖಾಲಿ ಚೊಂಬು ಪ್ರದರ್ಶಿಸಿ ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾ ಸಭೆಯಲ್ಲಿ ಶಾಸಕ ಎಚ್.ವೈ.ಮೇಟಿ ಮಾತನಾಡಿ, ರಾಜ್ಯಕ್ಕೆ ಉಪಯೋಗವಾಗುವಂತಹ ಒಂದೇ ಒಂದು ಯೋಜನೆಯನ್ನು ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ನೀಡದೆ ರಾಜ್ಯಕ್ಕೆ ದ್ರೋಹ ಎಸಗಿದ್ದಾರೆ. ಜನವಿರೋಧಿ ಕಾನೂನುಗಳನ್ನು ಹಿಂಪಡೆಯದಿದ್ದ ರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.
ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಮಾತನಾಡಿ, ಬಿಹಾರ್ ಮತ್ತು ಆಂಧ್ರಪ್ರದೇಶಕ್ಕೆ ಬಜೆಟ್‌ನಲ್ಲಿ ಹೆಚ್ಚಿನ ಅನುದಾನವನ್ನು ನೀಡಿ ಇತರೆ ರಾಜ್ಯಗಳಿಗೆ ಏನು ನೀಡದೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸಿದೆ. ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿಯ 17 ಜನ ಸಂಸದರು, ಸಚಿವರಾದವರು ತಮ್ಮ ಸ್ಥಾನವನ್ನು ರಾಜ್ಯದ ಅಭಿವೃದ್ಧಿಗೆ ಬಳಸದೆ ಕೇವಲ ರಾಜಕಾರಣ ಮಾಡುವುದಕ್ಕಾಗಿ ಬಳಸುತ್ತಿದ್ದಾರೆ. ಕರ್ನಾಟಕ ರಾಜ್ಯದಿಂದ ಆಯ್ಕೆಯಾಗಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಋಣವನ್ನು ತೀರಿಸುವ ಕೆಲಸ ಮಾಡದೆ ಜನತೆಗೆ ವಂಚನೆ ಮಾಡಿದ್ದಾರೆ ಎಂದು ದೂರಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ, ಮಹಿಳಾ ಘಟಕದ ಜಿಲ್ಲಾಧ್ಯಕ್ಷ ರಕ್ಷಿತಾ ಈಟಿ, ಜಿಪಂ ಮಾಜಿ ಅಧ್ಯಕ್ಷೆ ಬಾಯಕ್ಕ ಮೇಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಬಳ್ಳಾರಿ, ಹನುಮಂತ ರಾಕುಂಪಿ, ರಜಾಕ ಬೇನೂರ, ರಾಜು ಮನ್ನಿಕೇರಿ, ಮಹಾಂತೇಶ ಹಟ್ಟಿ, ಜಾಫರ್ ಬೇಪಾರಿ, ಅಯ್ಯುಬ ಪುಣೇಕಾರ ಸೇರಿದಂತೆ ಕಾರ್ಯಕರ್ತರು ಮತ್ತು ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿಯ 17 ಜನ ಸಂಸದರು, ಸಚಿವರಾದವರು ತಮ್ಮ ಸ್ಥಾನವನ್ನು ರಾಜ್ಯದ ಅಭಿವೃದ್ಧಿಗೆ ಬಳಸದೆ ಕೇವಲ ರಾಜಕಾರಣ ಮಾಡುವುದಕ್ಕಾಗಿ ಬಳಸುತ್ತಿದ್ದಾರೆ. ಕರ್ನಾಟಕ ರಾಜ್ಯದಿಂದ ಆಯ್ಕೆಯಾಗಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಋಣವನ್ನು ತೀರಿಸುವ ಕೆಲಸ ಮಾಡದೆ ಜನತೆಗೆ ವಂಚನೆ ಮಾಡಿದ್ದಾರೆ.
ಉಮಾಶ್ರೀ, ವಿಧಾನ ಪರಿಷತ್ ಸದಸ್ಯೆ