ಕನ್ನಡಪ್ರಭ ವಾರ್ತೆ ಹೊಸಪೇಟೆ
ಗ್ರಾಮದ ಕಾರ್ಯಸಿದ್ಧಿ ಆಂಜನೇಯ ದೇಗುಲದ ಮೂರ್ತಿಯನ್ನು ಕಿಡಿಗೇಡಿಗಳು ವಿರೂಪಗೊಳಿಸಿದ್ದಾರೆ ಅಥವಾ ಯಾರೋ ಕುಡಿದ ಮತ್ತಿನಲ್ಲಿ ಈ ಕೃತ್ಯ ನಡೆಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಡಿವೈಎಸ್ಪಿ ಶರಣಬಸವೇಶ್ವರ, ಸಿಪಿಐ ಮಲ್ಲಿಕಾರ್ಜುನ ಯಾತನೂರು, ಪಿಎಸ್‌ಐಗಳಾದ ಶಿವಕುಮಾರ ನಾಯ್ಕ, ಹನುಮಂತಪ್ಪ ತಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.ಹಂಪಿಯಲ್ಲಿ ಈ ಕೃತ್ಯವನ್ನು ಗುರುವಾರ ತಡರಾತ್ರಿ ನಡೆಸಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರು, ಶ್ವಾನದಳದಿಂದಲೂ ಪರಿಶೀಲನೆ ನಡೆಸಲಾಗಿದೆ. ಹಂಪಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.