ಆಂಜನೇಯಸ್ವಾಮಿ ಶಕ್ತಿ-ಭಕ್ತಿಯ ಪ್ರತೀಕ: ನಿಖಿಲ್ ಕುಮಾರಸ್ವಾಮಿ

KannadaprabhaNewsNetwork |  
Published : Nov 25, 2026, 02:00 AM IST
ಪೋಟೋ 8 : ತ್ಯಾಮಗೊಂಡ್ಲು ಹೋಬಳಿಯ ಲಕ್ಕಸಂದ್ರ ಗ್ರಾಮದ ಐತಿಹಾಸಿಕ ಶ್ರೀಮದಾಂಜನೇಯಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದ ಅಂಗವಾಗಿ ಆಯೋಜಿಸಿದ್ದ ಕುಂಭಾಭಿಷೇಕ, ನೂತನ ಉತ್ಸವಮೂರ್ತಿ ವಿಗ್ರಹ ಪ್ರತಿಷ್ಟಾಪನೆ ಹಾಗೂ ವಿಶೇಷ ಧಾರ್ಮಿಕ ಕಾರ್ಯಕ್ರಮದಲ್ಲಿ ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭಾಗವಹಿಸಿರುವುದು | Kannada Prabha

ಸಾರಾಂಶ

ದಾಬಸ್‍ಪೇಟೆ: ಗ್ರಾಮೀಣ ಭಾಗದಲ್ಲಿ ಇಂತಹ ಪುರಾತನ ದೇವಾಲಯಗಳನ್ನು ಜೀರ್ಣೋದ್ಧಾರಗೊಳಿಸಿ ನಮ್ಮ ಸಂಸ್ಕೃತಿ ಮತ್ತು ಧಾರ್ಮಿಕ ಪರಂಪರೆಯನ್ನು ಉಳಿಸಿ ಬೆಳೆಸುತ್ತಿರುವ ಗ್ರಾಮಸ್ಥರ ಕಾರ್ಯ ಶ್ಲಾಘನೀಯ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು

ದಾಬಸ್‍ಪೇಟೆ: ಗ್ರಾಮೀಣ ಭಾಗದಲ್ಲಿ ಇಂತಹ ಪುರಾತನ ದೇವಾಲಯಗಳನ್ನು ಜೀರ್ಣೋದ್ಧಾರಗೊಳಿಸಿ ನಮ್ಮ ಸಂಸ್ಕೃತಿ ಮತ್ತು ಧಾರ್ಮಿಕ ಪರಂಪರೆಯನ್ನು ಉಳಿಸಿ ಬೆಳೆಸುತ್ತಿರುವ ಗ್ರಾಮಸ್ಥರ ಕಾರ್ಯ ಶ್ಲಾಘನೀಯ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ತ್ಯಾಮಗೊಂಡ್ಲು ಹೋಬಳಿ ಲಕ್ಕಸಂದ್ರದಲ್ಲಿ ಮದಾಂಜನೇಯಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದ ಪ್ರಯುಕ್ತ ಆಯೋಜಿಸಿದ್ದ ಕುಂಭಾಭಿಷೇಕ, ನೂತನ ಉತ್ಸವಮೂರ್ತಿ ವಿಗ್ರಹ ಪ್ರತಿಷ್ಠಾಪನೆ ಹಾಗೂ ವಿಶೇಷ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಶ್ರೀ ಮದಾಂಜನೇಯಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು.

ಆಂಜನೇಯಸ್ವಾಮಿಯು ಶಕ್ತಿ, ನಿಷ್ಠೆ ಮತ್ತು ಭಕ್ತಿಯ ಪ್ರತೀಕ. ಇಂದಿನ ಯುವಪೀಳಿಗೆಗೆ ಧಾರ್ಮಿಕ ಕಾರ್ಯಕ್ರಮಗಳು ಉತ್ತಮ ಸಂಸ್ಕಾರ ನೀಡುತ್ತವೆ. ದೇವಾಲಯಗಳ ನಿರ್ಮಾಣದಿಂದ ಗ್ರಾಮಗಳಲ್ಲಿ ಒಗ್ಗಟ್ಟು ಮತ್ತು ಶಾಂತಿ ನೆಲೆಸುತ್ತದೆ. ನೆಲಮಂಗಲ ಭಾಗದ ಜನರು ನನ್ನ ಮೇಲೆ ತೋರುತ್ತಿರುವ ಪ್ರೀತಿ, ವಿಶ್ವಾಸಕ್ಕೆ ನಾನು ಸದಾ ಚಿರಋಣಿ. ನಾಡಿನಲ್ಲಿ ಉತ್ತಮ ಮಳೆ-ಬೆಳೆಯಾಗಿ ಅನ್ನದಾತರು ನೆಮ್ಮದಿಯ ಜೀವನ ನಡೆಸಬೇಕು. ಸ್ವಾಮಿಯ ಕೃಪೆ ನಾಡಿನ ಸಮಸ್ತ ಜನರ ಮೇಲಿರಲಿ, ಎಲ್ಲರ ಬದುಕಿನಲ್ಲಿ ಆರೋಗ್ಯ, ಸುಖ, ಶಾಂತಿ, ನೆಮ್ಮದಿ ಹಾಗೂ ಸಮೃದ್ಧಿ ನೆಲೆಸಲಿ, ಲೋಕಕಲ್ಯಾಣವಾಗಲಿ ಎಂದು ದೇವರಲ್ಲಿ ವಿಶೇಷವಾಗಿ ಪ್ರಾರ್ಥಿಸಿದ್ದೇನೆ ಎಂದು ತಿಳಿಸಿದರು.

ಮಾಜಿ ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಮಾತನಾಡಿ, ಲಕ್ಕಸಂದ್ರ ಗ್ರಾಮಸ್ಥರೆಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿ ಸುಂದರ ದೇವಾಲಯ ನಿರ್ಮಿಸಿರುವುದು ಸಂತಸದ ವಿಷಯ. ಧಾರ್ಮಿಕ ಕಾರ್ಯಕ್ರಮಗಳು ಗ್ರಾಮದಲ್ಲಿ ಸಾಮರಸ್ಯ ಮತ್ತು ಶಾಂತಿ ನೆಲೆಸುವಂತೆ ಮಾಡುತ್ತವೆ. ಇಂತಹ ಪುಣ್ಯ ಕಾರ್ಯದಲ್ಲಿ ಯುವನಾಯಕ ನಿಖಿಲ್ ಕುಮಾರಸ್ವಾಮಿ ಅವರು ಭಾಗವಹಿಸಿರುವುದು ಗ್ರಾಮಸ್ಥರಿಗೆ ಮತ್ತಷ್ಟು ಉತ್ಸಾಹ ತಂದಿದೆ ಎಂದರು.

ಕಾರ್ಯಕ್ರಮದಲ್ಲಿ ಮುಖಂಡರಾದ ಜಗದೀಶ್ ಚೌಧರಿ, ಜಯಣ್ಣ, ನಾಗಭೂಷಣ್, ಸತೀಶ್, ಎಲ್.ಜಿ. ಕೃಷ್ಣಪ್ಪ, ಅಂಜನಮೂರ್ತಿ, ರಮೇಶ್, ರಘು, ಗ್ರಾಮದ ಹಿರಿಯರು, ಮಹಿಳೆಯರು, ಯುವಕರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತಾದಿಗಳು ಭಾಗವಹಿಸಿದ್ದರು.

ಪೋಟೋ 8 :

ತ್ಯಾಮಗೊಂಡ್ಲು ಹೋಬಳಿಯ ಲಕ್ಕಸಂದ್ರದ ಐತಿಹಾಸಿಕ ಶ್ರೀಮದಾಂಜನೇಯಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಆಯೋಜಿಸಿದ್ದ ಕುಂಭಾಭಿಷೇಕ, ನೂತನ ಉತ್ಸವಮೂರ್ತಿ ವಿಗ್ರಹ ಪ್ರತಿಷ್ಠಾಪನೆ ಹಾಗೂ ವಿಶೇಷ ಧಾರ್ಮಿಕ ಕಾರ್ಯಕ್ರಮದಲ್ಲಿ ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭಾಗವಹಿಸಿರುವುದು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಭಿವೃದ್ಧಿಗೆ ಮಾದರಿಯಾಗಿದೆ ಜೊಲ್ಲೆ ಸಮೂಹ
ಉ.ಕ ಸಮಸ್ಯೆ ಚರ್ಚೆಗೆ 5 ದಿನ ಮೀಸಲಿಡಿ