ಕನ್ನಡಪ್ರಭ ವಾರ್ತೆ ಬೆಳಗಾವಿ
ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದ ಲಕ್ಷಾಂತರ ಭಕ್ತರು, ಶ್ರೀ ಅಡವಿಸಿದ್ದೇಶ್ವರನ ದರ್ಶನ ಪಡೆದರು. ಲಕ್ಷಾಂತರ ಭಕ್ತರು ಸಡಗರ ಸಂಭ್ರಮದಿಂದ ರಥವನ್ನು ಎಳೆದು ಭಕ್ತಿಭಾವ ಮೆರೆದರು. ಭಕ್ತರು ಹರ ಹರ ಮಾಹಾದೇವ, ಅಡವಿಸಿದ್ದೇಶ್ವರ ಮಹಾರಾಜ ಕೀ ಜೈ ಎಂದು ಘೋಷಣೆ ಕೂಗುತ್ತಾ ರಥ ಎಳೆದರು. ಮಹಿಳೆಯರು ಮಕ್ಕಳು ರಥಕ್ಕೆ ಬಾಳೆಹಣ್ಣು, ಉತ್ತತ್ತಿ ಎಸೆದು ಹರಕೆ ತೀರಿಸಿದರು. ಶ್ರೀ ಮಠದ ಮಠಾಧೀಶ ಡಾ. ಅಮರಸಿದ್ದೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಶ್ರೀ ಅಡವಿಸಿದ್ದೇಶ್ವರ ಮಠದ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಭವ್ಯ ದನಗಳ ಜಾತ್ರೆಯೂ ಕೂಡ ವೈಭವದಿಂದ ನಡೆಯಿತು. ಜಾತ್ರೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.