ಹೊಸಪೇಟೆ: ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ಅಕ್ಕಿ, ರಾಗಿ ನೀಡುತ್ತಿದ್ದು ಇದನ್ನು ಕೆಲವೊಂದು ಮಾಫಿಯಾಗಳು ಅಕ್ರಮವಾಗಿ ಕೊಂಡುಕೊಂಡು ಸ್ಲಂ ಜನರ ಅನ್ನಕ್ಕೆ ಕನ್ನ ಹಾಕುತ್ತಿವೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಸ್ಲಂ ಜನರ ಸಂಘಟನೆ ಕರ್ನಾಟಕ ವಿಜಯನಗರ ಜಿಲ್ಲಾ ಸಮಿತಿಯಿಂದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ರಿಯಾಜ್ ಅವರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.ರಾಜ್ಯದ ಯಾವುದೇ ಒಬ್ಬ ವ್ಯಕ್ತಿಯು ಹಸಿವಿನಿಂದ ಸಾಯಬಾರದು ಎನ್ನುವ ಸದುದ್ದೇಶದಿಂದ ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ಅಕ್ಕಿ, ರಾಗಿ ನೀಡುತ್ತಿದೆ. ಇದನ್ನು ಕೆಲವೊಂದು ಮಾಫಿಯಾಗಳು ಅಕ್ರಮವಾಗಿ ಕೊಂಡುಕೊಂಡು ಸ್ಲಂ ಜನರ ಅನ್ನಕ್ಕೆ ಕನ್ನ ಹಾಕುತ್ತಿದ್ದಾರೆ. ಅನ್ನಭಾಗ್ಯ ಅಕ್ಕಿ ಮಾಫಿಯಾ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಅನ್ನಭಾಗ್ಯ ಅಕ್ಕಿ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಹೊಸಪೇಟೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ರಿಯಾಜ್ ಅವರಿಗೆ ಮನವಿ ಸಲ್ಲಿಸಲಾಯಿತು.