ಮುಂಡರಗಿ: ಮುಂಡರಗಿ ಜಗದ್ಗುರು ಅನ್ನದಾನೀಶ್ವರ ವಿದ್ಯಾ ಸಮಿತಿ 100 ವರ್ಷಗಳನ್ನು ಪೂರೈಸಿದ ಹಿನ್ನೆಲೆ ಜ. 17 ಹಾಗೂ 18ರಂದು ಎರಡು ದಿನ ಶತಮಾನೋತ್ಸವ ಸಂಭ್ರಮಕ್ಕೆ ಆಡಳಿತ ಮಂಡಳಿ ಸಜ್ಜಾಗಿದೆ.
ಶ್ರೀಮಠದ ಉತ್ತರಾಧಿಕಾರಿ ಡಾ. ಮಲ್ಲಿಕಾರ್ಜುನ ಸ್ವಾಮೀಜಿ ಕಾರ್ಯಕ್ರಮದ ವಿವರ ನೀಡಿದರು. ಜ. 17ರಂದು ಬೆಳಗ್ಗೆ 10.30ಕ್ಕೆ ಅನ್ನದಾನೀಶ್ವರ ಪಪೂ ಕಾಲೇಜಿನ ನೂತನ ಕಟ್ಟಡದ ಲೋಕಾರ್ಪಣೆ ಕಾರ್ಯಕ್ರಮ ಜರುಗಲಿದೆ. ಡಾ. ಅನ್ನದಾನೀಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಡಾ. ಮಲ್ಲಿಕಾರ್ಜುನ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ.
ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮ ಉದ್ಘಾಟಿಸುವರು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನೂತನ ಪಪೂ ಕಾಲೇಜಿನ ಕಟ್ಟಡ ಲೋಕಾರ್ಪಣೆ ಮಾಡಲಿದ್ದಾರೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸುವರು. ಸಂಸದ ಬಸವರಾಜ ಬೊಮ್ಮಾಯಿ ಮೃಡಗಿರಿಯ ಹೊಸಬೆಳಕು ಸಂಸ್ಮರಣಾ ಗ್ರಂಥ ಬಿಡುಗಡೆ ಮಾಡುವರು. ಕೇಂದ್ರ ಸಚಿವ ವಿ. ಸೋಮಣ್ಣ ವಿಜ್ಞಾನ ಪ್ರಯೋಗಾಲಯ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಮೈಸೂರು ಸಂಸದ ಯದುವೀರ ಒಡೆಯರ್ ಕ.ರಾ. ಬೆಲ್ಲದ ಮಹಾವಿದ್ಯಾಲಯದ ನೂತನ ಕಟ್ಟಡಕ್ಕೆ ಅಡಿಗಲ್ಲು ಹಾಕುವರು. ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ ಜೇನುಗೂಡು ಗ್ರಂಥ ಬಿಡುಗಡೆಗೊಳಿಸುವರು.ಶಿಕ್ಷಣ ಸಚಿವ ಮಧು ಬಂಗಾರಪ್ಪ, ತೋಟಗಾರಿಕಾ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಶಾಸಕ ಜಿ.ಎಸ್. ಪಾಟೀಲ, ಡಾ. ಚಂದ್ರು ಲಮಾಣಿ, ಎಸ್.ವಿ. ಸಂಕನೂರ, ಸಲೀಂ ಅಹ್ಮದ್ ಆಗಮಿಸುವರು. ಸಮಿತಿ ಗೌರವ ಕಾರ್ಯದರ್ಶಿ ಆರ್.ಆರ್. ಹೆಗಡಾಳ, ಜ.ಅ.ಪ.ಪೂ. ಕಾಲೇಜಿನ ಕಾರ್ಯಾಧ್ಯಕ್ಷ ಕರಬಸಪ್ಪ ಹಂಚಿನಾಳ ಉಪಸ್ಥಿತರಿರುವರು.
ಜ.ಅ.ಪ.ಪೂ. ಕಾಲೇಜಿನ ಕಾರ್ಯಾಧ್ಯಕ್ಷ ಕರಬಸಪ್ಪ ಹಂಚಿನಾಳ ಮಾತನಾಡಿ, ಜ. 18ರಂದು ಬೆಳಗ್ಗೆ 10.30ಕ್ಕೆ ವಿಶೇಷ ಉಪನ್ಯಾಸ, ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳ ಸಮಾವೇಶ ಹಾಗೂ ಸನ್ಮಾನ ಸಮಾರಂಭ ಜರುಗಲಿದ್ದು, ಡಾ. ಅನ್ನದಾನೀಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಶ್ರೀಮಠದ ಉತ್ತರಾಧಿಕಾರಿ ಡಾ. ಮಲ್ಲಿಕಾರ್ಜುನ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ. ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ಉಪನ್ಯಾಸ ನೀಡುವರು ಎಂದರು.ಕೊಪ್ಪಳ ಸಂಸದ ರಾಜಶೇಖರ ಹಿಟ್ನಾಳ, ಶಾಸಕ ಜಿ.ಎಸ್. ಪಾಟೀಲ, ಡಾ. ಚಂದ್ರು ಲಮಾಣಿ ಆಗಮಿಸುವರು. ವಿ.ಆರ್. ಗುಮಾಸ್ತೆ ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣ ಕುರಿತು ಉಪನ್ಯಾಸ ನೀಡುವರು. ಸಂಜೆ 4 ಗಂಟೆಗೆ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳ ಸಮಾವೇಶ ಹಾಗೂ ಸಮಾರೋಪ ಸಮಾರಂಭ ಜರುಗಲಿದೆ. ಡಾ. ಮಲ್ಲಿಕಾರ್ಜುನ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ. ಮಹಾದೇವ ಸ್ವಾಮೀಜಿ, ಸುಜ್ಞಾನದೇವ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸಲಿದ್ದಾರೆ. ಏಷ್ಯಾನೆಟ್ ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನಮಕ್ಕನವರ ಕಾರ್ಯಕ್ರಮ ಉದ್ಘಾಟಿಸುವರು. ಮಾಜಿ ಸಚಿವ ಎಸ್.ಎಸ್. ಪಾಟೀಲ, ರಾಮಕೃಷ್ಣ ದೊಡ್ಡಮನಿ ಸೇರಿದಂತೆ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರು ಆಗಮಿಸಲಿದ್ದಾರೆ ಎಂದರು.
ವಿದ್ಯಾ ಸಮಿತಿ ಆಡಳಿತಾಧಿಕಾರಿ ಡಾ. ಬಿ.ಜಿ. ಜವಳಿ, ಪ್ರಚಾರ ಸಮಿತಿ ಅಧ್ಯಕ್ಷ ವೀರನಗೌಡ ಗುಡದಪ್ಪನವರ ಮಾತನಾಡಿ, ಸಂಜೆ 6 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ. ಡಾ. ಮಲ್ಲಿಕಾರ್ಜುನ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಶಾಸಕ ರಾಮಣ್ಣ ಲಮಾಣಿ ಕಾರ್ಯಕ್ರಮ ಉದ್ಘಾಟಿಸುವರು ಎಂದರು.ಸುದ್ದಿಗೋಷ್ಠಿಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಡಿ.ಡಿ. ಮೋರನಾಳ, ಡಾ. ವೀರೇಶ ಹಂಚಿನಾಳ, ಡಾ. ಪ್ರಕಾಶ ಹೊಸಮನಿ, ನಾಗೇಶ ಹುಬ್ಬಳ್ಳಿ, ಪ್ರತಿಭಾ ಹೊಸಮನಿ ಮಾತನಾದರು. ಬಿಇಒ ಗಂಗಾಧರ ಅಣ್ಣೀಗೇರಿ, ಎಂ.ಎಸ್. ಶಿವಶೆಟ್ಟರ, ಎಸ್.ಬಿ. ಹಿರೇಮಠ, ಟಿ.ಬಿ. ದಂಡಿನ, ಡಾ. ಅಮರೇಶ ಶಿವಶೆಟ್ಟಿ, ಗುಡದೀರಪ್ಪ ಲಿಂಬಿಕಾಯಿ, ಪ್ರಾ. ಕಲ್ಲನಗೌಡ್ರ, ಸಿ.ಎಸ್. ಚಕ್ಕಡಿಮಠ ಇದ್ದರು.