ತಾಯಿ ತೀರಿಕೊಂಡ ದುಃಖದಲ್ಲೇ ಪರೀಕ್ಷೆ ಬರೆದು 612 ಅಂಕ ಪಡೆದ ಅನ್ನಪೂರ್ಣ

KannadaprabhaNewsNetwork |  
Published : May 04, 2025, 01:32 AM ISTUpdated : May 04, 2025, 01:24 PM IST
Three students passed away before NEET exam

ಸಾರಾಂಶ

ಕೃಷಿ ಕುಟುಂಬದ ಅನ್ನಪೂರ್ಣ ಬಸವರಾಜ ಬಾಳಿಕಾಯಿ ಕನ್ನಡಕ್ಕೆ 125, ಹಿಂದಿ 100 ಹಾಗೂ ಸಮಾಜ ವಿಜ್ಞಾನಕ್ಕೆ 100 ಅಂಕಗಳನ್ನು ಪಡೆದ್ದಾಳೆ. 

ಹಾವೇರಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ಇನ್ನೇನು 15 ದಿನ ಬಾಕಿ ಇರುವಾಗ ಹೃದಯಾಘಾತದಿಂದ ತಾಯಿ ತೀರಿಕೊಂಡ ದುಃಖದಲ್ಲೇ ಓದಿ, ಪರೀಕ್ಷೆ ಎದುರಿಸಿದ ಹಾನಗಲ್ಲ ತಾಲೂಕಿನ ಕೂಡಲ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಅನ್ನಪೂರ್ಣ ಬಾಳಿಕಾಯಿ 612 ಅಂಕ ಪಡೆಯುವ ಮೂಲಕ ಪ್ರಶಂಸೆಗೆ ಪಾತ್ರಳಾಗಿದ್ದಾಳೆ.

ಕೃಷಿ ಕುಟುಂಬದ ಅನ್ನಪೂರ್ಣ ಬಸವರಾಜ ಬಾಳಿಕಾಯಿ ಕನ್ನಡಕ್ಕೆ 125, ಹಿಂದಿ 100 ಹಾಗೂ ಸಮಾಜ ವಿಜ್ಞಾನಕ್ಕೆ 100 ಅಂಕಗಳನ್ನು ಪಡೆದ್ದಾಳೆ. ಇಂಗ್ಲಿಷ್‌ 95, ಗಣಿತ 98 ಹಾಗೂ ವಿಜ್ಞಾನ ವಿಷಯದಲ್ಲಿ 94 ಅಂಕ ಪಡೆದಿದ್ದಾಳೆ. ಇವಳ ತಾಯಿ ರತ್ನವ್ವ ಮಾ. 1ರಂದು ಹೃದಯಾಘಾತದಿಂದ ನಿಧನರಾಗಿದ್ದರು. ಇದಾಗಿ ಕೇವಲ 15 ದಿನಗಳಲ್ಲಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ನಡೆದಿದ್ದು, ತಾಯಿ ತೀರಿಕೊಂಡ ದುಃಖದಲ್ಲೇ ಅಭ್ಯಾಸ ಮಾಡಿ ಉತ್ತಮ ಅಂಕ ಪಡೆದಿದ್ದಾಳೆ. ತನ್ನ ಈ ಸಾಧನೆಗೆ ಶಾಲೆಯ ಶಿಕ್ಷಕರು ಹಾಗೂ ಕುಟುಂಬದವರ ಸಹಕಾರವನ್ನು ಸ್ಮರಿಸುವ ಅನ್ನಪೂರ್ಣ, ಮುಂದೆ ಚೆನ್ನಾಗಿ ಓದಿ ತಾಯಿಯ ಕನಸು ನನಸಾಗಿಸಬೇಕು ಎಂಬ ಆಶಯ ವ್ಯಕ್ತಪಡಿಸಿದ್ದಾಳೆ.

ಕಾವಲುಗಾರನ ಮಗ ಜಿಲ್ಲೆಗೆ ಎರಡನೇ ಸ್ಥಾನ

ರಾಣಿಬೆನ್ನೂರು: ನಗರದ ಬೈಕ್ ಶೋರೂಮ್‌ನ ಕಾವಲುಗಾರನಾಗಿ ಕೆಲಸ ಮಾಡುವ ವ್ಯಕ್ತಿಯ ಪುತ್ರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 99.52 ಅಂಕಗಳನ್ನು ಪಡೆದು ಜಿಲ್ಲೆಗೆ 2ನೇ ಸ್ಥಾನ ಪಡೆದುಕೊಂಡಿದ್ದಾರೆ.ತಾಲೂಕಿನ ಮಾಕನೂರ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಪ್ರೌಢಶಾಲೆಯ ವಿದ್ಯಾರ್ಥಿ ಪೃಥ್ವೀಶ ಗೋವಿಂದಪ್ಪ ಗೊಲ್ಲರಹಳ್ಳಿ ಪ್ರಸಕ್ತ ಸಾಲಿನ ಪರೀಕ್ಷೆಯಲ್ಲಿ 625ಕ್ಕೆ 622 ಅಂಕಗಳನ್ನು ಪಡೆದು(ಶೇ. 99.52) ಜಿಲ್ಲೆಗೆ 2ನೇ ಸ್ಥಾನ ಪಡೆದಿದ್ದಾನೆ.

ಈ ಕುರಿತು ಕನ್ನಡಪ್ರಭದೊಂದಿಗೆ ಮಾತನಾಡಿದ ಪೃಥ್ವೀಶ, ಪ್ರತಿದಿನ 12 ಗಂಟೆಗಳ ಕಾಲ ಅಭ್ಯಾಸ ಮಾಡಿದ ಫಲ ಮತ್ತು ನಮ್ಮ ಶಿಕ್ಷಕರು ನಮ್ಮ ಮೇಲೆ ಹೆಚ್ಚಿನ ಕಾಳಜಿ ತೋರುವುದರೊಂದಿಗೆ ಉತ್ತಮ ಶಿಕ್ಷಣ ನೀಡಿದ್ದರಿಂದ ನಾನು ಸಾಧನೆ ಮಾಡಲು ಸಾಧ್ಯವಾಯಿತು ಎಂದನು.

ಸಾಧನೆಗೆ ಕಾರಣ: ವಿದ್ಯಾರ್ಥಿ ಪೃಥ್ವೀಶ ಎಲ್ಲ ವಿದ್ಯಾರ್ಥಿಗಳೊಂದಿಗೆ ಸ್ನೇಹ ಭಾವನೆಯಿಂದ ನಡೆದುಕೊಳ್ಳುವ ಜತೆಗೆ ಶಿಕ್ಷಕರು ಹೇಳಿದ ಪಾಠಗಳನ್ನು ಅಂದೇ ಮನನ ಮಾಡಿಕೊಳ್ಳುವುದು ಅವನ ಸಾಧನೆಗೆ ಕಾರಣವಾಗಿದೆ ಎಂದು ಮೊರಾರ್ಜಿ ಶಾಲೆಯ ಪ್ರಾಚಾರ್ಯ ಮುಸ್ತಾಪ್ ಶೇತಸನದಿ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುದುರೆಗಳಲ್ಲಿ ಗ್ಲ್ಯಾಂಡರ್ಸ್ ರೋಗ ಪತ್ತೆ: ಟರ್ಫ್ ಕ್ಲಬ್‌ ಸುತ್ತ ಪ್ರಾಣಿ ಸಂಚಾರ ನಿರ್ಬಂಧ
ಮುಸ್ಲಿಮರು ಸೂರ್‍ಯನಮಸ್ಕಾರ ಮಾಡ್ಬೇಕು : ಹೊಸಬಾಳೆ ಕರೆ