ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿಕೊಳ್ಳಲು ಶಾಲಾ ವಾರ್ಷಿಕೋತ್ಸವ ಸೂಕ್ತ ವೇದಿಕೆಯಾಗಿದೆ ಎಂದು ಮಾಜಿ ಶಾಸಕ ಬಿ.ಪ್ರಕಾಶ್ ಅಭಿಪ್ರಾಯಪಟ್ಟರು.ತಾಲೂಕಿನ ಲಕ್ಷ್ಮಿಪುರ ಗೇಟ್ ಬೊಮ್ಮೇನಹಳ್ಳಿಯ ವಿವೇಕಾನಂದ ಪೂರ್ವ ಕಿರಿಯ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ ಶಾಲಾ ವಾರ್ಷಿಕೋತ್ಸವದಲ್ಲಿ ಮಾತನಾಡಿ, ಇತ್ತೀಚಿನ ದಿನದಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳು ಯಾವುದೇ ಕ್ಷೇತ್ರದಲ್ಲಿ ಕಡಿಮೆ ಇಲ್ಲ ಎಂಬುದನ್ನು ಮಕ್ಕಳು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿ ಸಾಬೀತುಪಡಿಸಿದ್ದಾರೆ ಎಂದರು.
ಮುಂದಿನ ದಿನಗಳಲ್ಲೂ ಗ್ರಾಮೀಣ ಭಾಗದ ಮಕ್ಕಳು ಒಳ್ಳೆಯ ವಿದ್ಯಾಭ್ಯಾಸ ಮಾಡಿ ಉನ್ನತ ಅಧಿಕಾರಿಗಳು, ಉದ್ಯಮಿಗಳಾಗಿ ಶಾಲೆಗೆ, ಶಿಕ್ಷಕರಿಗೆ, ಪೋಷಕರಿಗೆ ಕೀರ್ತಿ ತರಬೇಕೆಂದು ತಿಳಿಸಿದರು.ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಲ್.ದೇವರಾಜು ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ನಡೆಸುವುದು ಕಷ್ಟ. ಈ ಭಾಗದಲ್ಲಿ ವಿವೇಕಾನಂದ ಸಂಸ್ಥೆ ಉತ್ತಮವಾಗಿ ಮುನ್ನಡೆುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಜೊತೆಯಲ್ಲಿ ಪೋಷಕರು ಸಹ ಹೆಚ್ಚು ವಿದ್ಯಾಭ್ಯಾಸಕ್ಕೆ ಒತ್ತು ಕೊಡಬೇಕು ಎಂದರು.ಈ ವೇಳೆ ಸಂಸ್ಥೆ ಮುಖ್ಯಸ್ಥ ಎಂ.ಎಲ್.ದೇವರಾಜ್, ಬಿಇಒ ಆರ್.ಎಸ್.ಸೀತಾರಾಮ್, ಪಿರಿಯಾಪಟ್ಟಣ ಬಿಇಒ ಬಸವರಾಜ್, ಚಾಮರಾಜನಗರ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಲೋಕೇಶ್, ದೈಹಿಕ ಶಿಕ್ಷಕರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ರವಿ, ಹರಿಹರೇಶ್ವರ ವಿದ್ಯಾಸಂಸ್ಥೆ ಕಾರ್ಯದರ್ಶಿ ಲಕ್ಷ್ಮಮ್ಮ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪದ್ಮಶ್, ಸಮೂಹ ಸಂಪನ್ಮೂಲ ವ್ಯಕ್ತಿ ದೇವರಾಜ್, ತಾಲೂಕು ಕಸಾಪ ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ, ಹಿರಿಯ ಪತ್ರಕರ್ತರಾದ ಎಂ.ಕೆ.ಹರಿಚರಣ ತಿಲಕ್, ಆರ್. ಶ್ರೀನಿವಾಸ್, ವಿವಿಧ ಗ್ರಾಪಂ ಅಧ್ಯಕ್ಷರಾದ ಹರಿಹರಪುರ ಸುಂದರಮ್ಮ, ಮಡುವಿನಕೋಡಿ ಪ್ರೀತಿ ಬೈರನಾಯಕ, ಭೆರ್ಯ ತನ್ವೀರ್, ಆಲಂಬಾಡಿಕಾವಲು ಬಿರೇಶ್ ಬಾಬು, ಸೋಮನಹಳ್ಳಿ ಜಯಲಕ್ಷ್ಮಮ್ಮ ಚಂದ್ರೇಗೌಡ, ಸದಸ್ಯರಾದ ಲತಾ, ಗಣೇಶ್, ಹೇಮಂತ್, ಜಯಮ್ಮ, ಮುಖಂಡರಾದ ಬೋರೇಗೌಡ, ಕೃಷ್ಣೇಗೌಡ, ಮೋಹನ್, ರೇವಣ್ಣ ಹಾಗೂ ಹಳೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.