ನವೆಂಬರ್‌ 4, 5ಕ್ಕೆ ಆದಿಚುಂಚನಗಿರಿ ಮಠದ ವಾರ್ಷಿಕೋತ್ಸವ: ಮಂಜುನಾಥ್‌

KannadaprabhaNewsNetwork |  
Published : Nov 01, 2025, 01:30 AM IST
ಪೊಟೊ: 31ಎಸ್‌ಎಂಎಜಿಕೆಪಿ07 ಶಿವಮೊಗ್ಗದ ಪತ್ರಿಕಾಭನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಕ.ಸಾ.ಪ. ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಮಾತನಾಡಿದರು. | Kannada Prabha

ಸಾರಾಂಶ

ಶಿವಮೊಗ್ಗ ಶ್ರೀ ಆದಿಚುಂಚನಗಿರಿ ಶಾಖಾ ಮಠದ 35ನೇ ವಾರ್ಷಿಕೋತ್ಸವ ಸಮಾರಂಭವನ್ನು ಅತ್ಯಂತ ವಿಭಿನ್ನ, ವಿಶೇಷವಾಗಿ ಆಚರಿಸಲು ಶ್ರೀ ಆದಿಚುಂಚನಗಿರಿ ಮಠ ತೀರ್ಮಾನಿಸಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್ ಹೇಳಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಶಿವಮೊಗ್ಗ ಶ್ರೀ ಆದಿಚುಂಚನಗಿರಿ ಶಾಖಾ ಮಠದ 35ನೇ ವಾರ್ಷಿಕೋತ್ಸವ ಸಮಾರಂಭವನ್ನು ಅತ್ಯಂತ ವಿಭಿನ್ನ, ವಿಶೇಷವಾಗಿ ಆಚರಿಸಲು ಶ್ರೀ ಆದಿಚುಂಚನಗಿರಿ ಮಠ ತೀರ್ಮಾನಿಸಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್ ಹೇಳಿದರು.

ನಗರದಲ್ಲಿ ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಇದೇ ಮೊದಲ ಬಾರಿಗೆ ದಾಸವರೇಣ್ಯ ಪುರಂದದಾಸರ ಕೀರ್ತನೋತ್ಸವ ಸಮಾರಂಭವನ್ನು ಅವರ ಹುಟ್ಟೂರಾದ ಆರಗದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ನವೆಂಬರ್ 4 ಮತ್ತು 5 ರಂದು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.

ನವೆಂಬರ್ 4ರಂದು ಬೆಳಿಗ್ಗೆ 10 ರಿಂದ ತೀರ್ಥಹಳ್ಳಿ ತಾಲೂಕಿನ ಆರಗದಲ್ಲಿರುವ ಸಹಕಾರ ಸಂಘ ಸಭಾ ಭವನದಲ್ಲಿ ದಾಸವರೇಣ್ಯ ಪುರಂದರದಾಸರ ಕೀರ್ತನೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದರು.

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ 72ನೇ ಪೀಠಾಧ್ಯಕ್ಷ ಜಗದ್ಗುರು ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಸಾನ್ನಿಧ್ಯದಲ್ಲಿ , ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಉಪಸ್ಥಿತಿಯಲ್ಲಿ ಜರುಗಲಿದ್ದು, ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.

ಆದಿಚುಂಚನಗಿರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಗುರುರಾಜ್ ಮಾತನಾಡಿ, ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ನ.5ರಂದು ಬೆಳಿಗ್ಗೆ 10 ಗಂಟೆಗೆ ಶ್ರೀ ಮಠದ 35ನೇ ವಾರ್ಷಿಕೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಹಾಗೂ ಕೃಷಿ ವಿಜ್ಞಾನ ಕ್ಷೇತ್ರದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದ ನಮ್ಮ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳಿಗೆ ಸ್ವಾಮೀಜಿಗಳಿಂದ ಸನ್ಮಾನಿಸುವ ಕಾರ್ಯಕ್ರಮ ನಡೆಯುವುದು ಎಂದರು.

ನವೆಂಬರ್ 5 ರಂದು ಬೆಳಗ್ಗೆ 7 ಗಂಟೆಗೆ ಶರಾವತಿ ನಗರದ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯದಲ್ಲಿ ಶ್ರೀಗಳ ಸಾನ್ನಿಧ್ಯದಲ್ಲಿ ಹೋಮ-ಹವನ ಮತ್ತು ವಿಶೇಷ ಪೂಜಾ ಕೈಂಕರ್ಯಗಳನ್ನು ನಡೆಸಲಾಗುವುದು. ಶ್ರೀಮಠದ ಶಾಖೆಯ ಶ್ರೀಗಳು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದರು.

ನ.೪ರಂದು ನಡೆಯುವ ಇಡೀ ದಿನದ ಕೀರ್ತನೋತ್ಸವ ಕಾರ್ಯಕ್ರಮದಲ್ಲಿ ಸಂಗೀತ ವಿದ್ವಾಂಸರು, ಹಾಡುಗಾರರು, ವಾದ್ಯವೃಂದದವರು ಭಾಗವಹಿಸಿ, ಸಾಮೂಹಿಕ ಗಾಯನ ಹಾಗೂ ಸತ್ಸಂಗ, ಭಜನೆ, ಹಾರ್‍ಮೋನಿಯಂ ಕೀಬೋರ್ಡ್ ಜುಗಲ್‌ಬಂದಿ ಕಾರ್ಯಕ್ರಮಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.

ಈ ಎಲ್ಲಾ ಕಾರ್ಯಕ್ರಮಗಳಲ್ಲಿ ವಿದ್ವಾಂಸರಾದ ವಿ. ಫಣೀಂದ್ರ, ವಿ.ಹೊಸಳ್ಳಿ ಕೆ.ವೆಂಕಟರಾಂ, ವಿ.ಶೃಂಗೇರಿ ನಾಗರಾಜ್, ವಿ.ಹುಮಾಯೂನ್ ಹರ್ಲಾಪುರ್, ವಿ.ನವಶಾದ್ ಹರ್ಲಾಪುರ್, ವಿ.ನಿಶಾದ್ ಹರ್ಲಾಪುರ್ ಮತ್ತು ಸಂಗಡಿಗರು, ಹಲವು ವಿದ್ವಾಂಸರು ಹಾಡುಗಾರಿಕೆಯನ್ನು ನಡೆಸಿಕೊಡಲಿದ್ದಾರೆ ಎಂದರು.

ಕೀರ್ತನೋತ್ಸವದ ಅಂಗವಾಗಿ ಕೀರ್ತನೆಗಳ ಗಾಯನ, ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಇದರಲ್ಲಿ ವಿಜೇತರಾದವರಿಗೆ ನ.5ರಂದು ಬೆಳಿಗ್ಗೆ 10 ಗಂಟೆಗೆ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಸನ್ಮಾನಿಸಲಾಗುವುದು. ಇವರ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಮತ್ತು ಕೃಷಿ ವಿಜ್ಞಾನ ಕ್ಷೇತ್ರದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದ ಹಿರಿಯ ವಿದ್ಯಾರ್ಥಿಗಳಿಗೆ ಪೂಜ್ಯರಿಂದ ಸನ್ಮಾನಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಸಂಸ್ಥೆಯ ನಿರ್ದೇಶಕರಾದ ಕೊಳಿಗೆ ವಾಸಪ್ಪಗೌಡ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ರಮೇಶ್ ಹೆಗ್ಡೆ, ಎಸ್.ವಿ. ಬಿಜಿಎಸ್ ಶಾಲಾ-ಕಾಲೇಜಿನ ಪ್ರಾಂಶುಪಾಲ ಎಸ್.ಎಚ್. ಸುರೇಶ್, ಉಪನ್ಯಾಸಕ ಸಿ. ಮಂಜುನಾಥ್, ಸುಜಾತಾ ಮತ್ತಿತರರು ಇದ್ದರು.

PREV

Recommended Stories

ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
ಕುಡಚಿ ಶಾಸಕ ಪುತ್ರಗೆ ಡಿಕೆಶಿಯಿಂದ ‘ಶಿವಕುಮಾರ್‌’ ಎಂದು ನಾಮಕರಣ!