)
ಸುಂಟಿಕೊಪ್ಪ: ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ಪಾಲಕ ಸಂತ ಅಂತೋಣಿಯವರ ವಾರ್ಷಿಕೋತ್ಸವ ಭಾನುವಾರ ಮೈಸೂರು ಧರ್ಮಾಧ್ಯಕ್ಷರ ವಿಶೇಷ ಅಡಂಬರ ಗಾಯನ ಬಲಿಪೂಜೆಯೊಂದಿಗೆ ನಡೆಯಿತು. ಸಂತ ಅಂತೋಣಿಯವರ ತೇರಿನ ಮೆರವಣಿಗೆಯಲ್ಲಿ ನೂರಾರು ಮಂದಿ ಪಾಲ್ಗೊಂಡಿದ್ದರು. ೭ರಂದು ದೇವಾಲಯದ ಆವರಣದಲ್ಲಿ ಧ್ವಜಾರೋಹಣವನ್ನು ನೇರವೇರಿಸುವ ಮೂಲಕ ಹಬ್ಬದ ದೇವಾಲಯದಲ್ಲಿ ಅಡಂಬರ ದಿವ್ಯ ಬಲಿಪೂಜೆಯನ್ನು ಮೈಸೂರು ಧರ್ಮಕ್ಷೇತ್ರದ ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ಫಾ. ಎಡ್ವರ್ಡ್ ವಿಲಿಯಂ ಸಲ್ಡಾನಾ ಹಾಗೂ ಮಡಿಕೇರಿ ವಲಯ ಧರ್ಮಗುರು ಮತ್ತು ಸಂತ ಮೈಕಲರ ದೇವಾಲಯದ ಧರ್ಮಗುರು ಜಾರ್ಜ್ ದೀಪಕ್, ಬೆಂಗಳೂರಿನ ಧರ್ಮಗುರು ಹಾಗೂ ಸಂತ ಅಂತೋಣಿ ದೇವಾಲಯದ ಧರ್ಮಗುರು ಫಾ.ವಿಜಯಕುಮಾರ್ ಸಲ್ಲಿಸಿದರು. ೮ ರಂದು ಸಂಜೆ ಬಲಿಪೂಜೆ ಹಾಗೂ ಆರಾಧನೆಯನ್ನು ಕೆ.ಆರ್.ಪೇಟೆಯ ಬಾಲ ಯೇಸುವಿನ ದೇವಾಲಯದ ಧರ್ಮಗುರು ಟಿ.ಪೌಲೂಸ್ ನೆರವೇರಿಸಿದರು.೯ ರಂದು ಮಕ್ಕಳಿಗೆ ನೂತನ ಪರಮ ಪ್ರಸಾದ ಸಂಸ್ಕಾರ ಮತ್ತು ಆಡಂಬರ ದಿವ್ಯ ಬಲಿಪೂಜೆಯನ್ನು ಏಕಾರ್ಡ್ ಎಸ್ಟೇಟ್ ಸಹಾಯಕ ಧರ್ಮಗುರು ಚಾರ್ಲ್ಸ್ ಪೆರಿಯನಾಗಮ್ ಸಂತ ಅಂತೋಣಿ ದೇವಾಲಯದ ಧರ್ಮಗುರು ಫಾ.ವಿಜಯಕುಮಾರ್ ಆಡಂಬರ ದಿವ್ಯ ಬಲಿಪೂಜೆ ಪ್ರಭೋದನೆ ಮತ್ತು ಮಕ್ಕಳಿಗೆ ಪ್ರಥಮ ಪರಮ ಪ್ರಸಾದ ಸಂಸ್ಕಾರ ವಿತರಿಸಿದರು. ಭಾನುವಾರ ಮಧ್ಯಾಹ್ನದ ವೇಳೆಯಲ್ಲಿ ಅಂಬು ಕಾಣಿಕೆಯ ಹರಕೆಯನ್ನು ಭಕ್ತಾದಿಗಳು ಸಲ್ಲಿಸಿದರು. ಧರ್ಮಗುರುಗಳಿಗೆ ಸ್ವಾಗತ: ಸಂತ ಅಂತೋಣಿಯವರ ದೇವಾಲಯದ ಧರ್ಮಗುರು ಹಾಗೂ ಕ್ರೈಸ್ತ ಭಕ್ತಾಧಿಗಳು ಕನ್ನಡ ವೃತ್ತದಲ್ಲಿ ಮೈಸೂರು ಧರ್ಮಕ್ಷೇತ್ರದ ಮೈಸೂರು ಧರ್ಮಕ್ಷೇತ್ರ ಧರ್ಮಾಧ್ಯಕ್ಷ ಪರಮಪೂಜ್ಯ ಡಾ. ಎಸ್‌ಜೆ ಫ್ರಾನ್ಸಿಸ್ ಸೆರಾವೋ ಅವರನ್ನು ಕನ್ನಡ ವೃತ್ತದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿ ಮೆರವಣಿಗೆಯೊಂದಿಗೆ ದೇವಾಲಯಕ್ಕೆ ಕರೆದೋಯ್ಯಲಾಯಿತು. ಮೈಸೂರು ಧರ್ಮಕ್ಷೇತ್ರದ ಮೈಸೂರು ಧರ್ಮಕ್ಷೇತ್ರ ಧರ್ಮಾಧ್ಯಕ್ಷ ಪರಮಪೂಜ್ಯ ಡಾ. ಎಸ್‌ಜೆ ಫ್ರಾನ್ಸಿಸ್ ಸೆರಾವೋ ಹಬ್ಬದ ಅಡಂಬರ ಗಾಯನ ದಿವ್ಯ ಬಲಿಪೂಜೆಯನ್ನು ಮಡಿಕೇರಿ ವಲಯದ ಶೇಷ್ಠ ಗುರುಗಳಾದ ಫಾಧರ್ ಜಾರ್ಜ್ ದೀಪಕ್, ವಿರಾಜಪೇಟೆ ಸಂತ ಅನ್ನಮ್ಮ ದೇವಾಲಯದ ವಲಯದ ಶ್ರೇಷ್ಠ ಧರ್ಮ ಗುರು ಜೇಮ್ಸ್ ಡೋಮಿನಿಕ್ ಅವರೊಂದಿಗೆ ನೇರವೇರಿಸಿದರು. ಮೈಸೂರು ಧರ್ಮಕ್ಷೇತ್ರದ ವಿವಿಧ ಧರ್ಮ ಕೇಂದ್ರಗಳಿಂದ ಸುಮಾರು ೨೫ ಮಿಕ್ಕಿ ದೇವಾಲಯಗಳಿಂದ ಆಗಮಿಸಿದ್ದ ಧರ್ಮಗುರುಗಳು ಒಗ್ಗೂಡಿ ಆಡಂಬರ ಬಲಿಪೂಜೆಯನ್ನು ನೇರವೇರಿಸಿದರು.
ವೈಭವದ ಮೆರವಣಿಗೆ: ಸಂತ ಕ್ಲಾರ ಕನ್ಯಾಸ್ತ್ರಿ ಮಠದ ಕನ್ಯಾಸ್ತ್ರೀಯರು, ಕುಶಾಲನಗರ, ಹೊಸಕೋಟೆ, ಸೋಮವಾರಪೇಟೆ ಸೇರಿದಂತೆ ವಿವಿಧ ಭಾಗಗಳಿಂದ ಕನ್ಯಾಸ್ತ್ರೀಯರು ದೇವಾಲಯದ ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡಿದ್ದರು. ನಂತರ ಹೂವಿನಿಂದ ದೀಪಾಲಂಕೃತ ಭವ್ಯ ಮಂಟಪದಲ್ಲಿ ಪಾಲಕ ಸಂತ ಅಂತೋಣಿಯವರ ಪ್ರತಿಮೆಯನ್ನು ಇರಿಸಿ ಬ್ಯಾಂಡ್‌ಸೇಟ್ ಹಾಗೂ ಕೇರಳ ಚಂಡೆಯೊಮದಿಗೆ ಧರ್ಮಗುರುಗಳು, ಕ್ರೈಸ್ತ ಸನ್ಯಾಸಿನಿಯರು ಮತ್ತು ಸುಂಟಿಕೊಪ್ಪ ಸೇರಿದಂತೆ ವಿವಿಧ ಕಡೆಗಳಿಂದ ನೂರಾರು ಸಂಖ್ಯೆಯ ಕ್ರೈಸ್ತ ಬಾಂಧವರು ಪ್ರಾರ್ಥನೆ ಹಾಗೂ ಭಕ್ತಿ ಗಾಯನಗಳನ್ನು ಹಾಡುತ್ತ ಮೊಂಬತ್ತಿ ಹಿಡಿದು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯನ್ನು ನಡೆಸಿದರು. ನಂತರ ದೇವಾಲಯದಲ್ಲಿ ಪರಮ ಪ್ರಸಾದ ಆರಾಧನೆ ಹಾಗೂ ಆರ್ಶಿವಚನದೊಂದಿಗೆ ವಾರ್ಷಿಕೋತ್ಸವವು ಸಂಪನ್ನಗೊಂಡಿತು.