ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕಿನ ಗೆಜ್ಜಲಗೆರೆಯ ಜಿಲ್ಲಾ ಹಾಲು ಒಕ್ಕೂಟದ ಸಭಾಂಗಣದಲ್ಲಿ ನಡೆದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಯು.ಸಿ.ಶಿವಕುಮಾರ್, ಉಪಾಧ್ಯಕ್ಷ ಸ್ಥಾನಕ್ಕೆ ಮಳವಳ್ಳಿಯ ಕೃಷ್ಣೇಗೌಡ ಹಾಗೂ ಎನ್‌ಡಿಎನಿಂದ ಎಂ.ಎಸ್.ರಘುನಂದನ್ ನಾಮಪತ್ರ ಸಲ್ಲಿಸಿದ್ದರು.
ನಂತರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಚುನಾವಣಾ ಅಧಿಕಾರಿಯಾಗಿದ್ದ ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಅವರು ಗೌಪ್ಯ ಮತದಾನದ ಮೂಲಕ ಚುನಾವಣೆ ನಡೆಸಿದರು. ಒಕ್ಕೂಟದ ನಿರ್ದೇಶಕರಾಗಿ ಆಯ್ಕೆಯಾಗಿರುವ 12 ಮಂದಿ ಹಾಗೂ ಸರ್ಕಾರದ ಐದು ಮಂದಿ ನಾಮ ನಿರ್ದೇಶಕರು ಗಳು ರಹಸ್ಯ ಮತದಾನದಲ್ಲಿ ಪಾಲ್ಗೊಂಡು ಮತ ಚಲಾಯಿಸಿದರು.ಒಕ್ಕೂಟದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣಾ ಫಲಿತಾಂಶ ಘೋಷಣೆಗೆ ಹೈಕೋರ್ಟ್ ದ್ವಿಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಎಚ್.ಪಿ.ಸಂದೇಶ್ ಹಾಗೂ ರಾಮಚಂದ್ರ ಡಿ.ಹುದ್ದೂರ ತಡೆಯಾಜ್ಞೆ ನೀಡಿರುವುದರಿಂದ ಫಲಿತಾಂಶ ಘೋಷಣೆ ಮಾಡಲಾಗುತ್ತಿಲ್ಲ ಎಂದು ಚುನಾವಣಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಸುದ್ದಿಗಾರರಿಗೆ ತಿಳಿಸಿದರು. ಚುನಾವಣಾ ಪ್ರಕ್ರಿಯೆ ಬಳಿಕ ಚಲಾವಣೆಯಾದ ಮತಗಳನ್ನು ಹಾಗೂ ಅಗತ್ಯ ದಾಖಲೆಗಳನ್ನು ಮತ ಪೆಟ್ಟಿಗೆಯಲ್ಲಿ ಭದ್ರಪಡಿಸಿದ ನಂತರ ಬಿಗಿ ಪೊಲೀಸ್ ಬಂದೋಬಸ್ತಿನಲ್ಲಿ ಮಂಡ್ಯ ಜಿಲ್ಲಾ ಖಜಾನೆಗೆ ಕೊಂಡೊಯ್ಯಲಾಯಿತು.ಮೇ 28 ರಂದು ಉಪಲೋಕಾಯುಕ್ತ ರಿಂದ ಅಹವಾಲು ಸ್ವೀಕಾರ
ಮೇ 29 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1.45 ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 6 ಗಂಟೆವರೆಗೆ ಸುಭಾಷ್‌ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲೆಗೆ ಸಂಬಂಧಪಟ್ಟಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ (ಗೌರವಾನ್ವಿತ ಉಪಲೋಕಾಯುಕ್ತರ ವ್ಯಾಪ್ತಿಗೆ ಒಳಪಡುವ ಪ್ರಕರಣಗಳಲ್ಲಿ) ತನಿಖೆ ಮತ್ತು ವಿಚಾರಣೆಗೆ ಬಾಕಿಯಿರುವ ಪ್ರಕರಣಗಳಲ್ಲಿ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತ್ಯಾ ವಿಚಾರಣೆ ನಡೆಸಲಿದ್ದಾರೆ.
ದೂರುದಾರರು ಮತ್ತು ಎದುರುದಾರರು ನಿಗದಿತ ಸಮಯದಲ್ಲಿ ಹಾಜರಿದ್ದು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ಕರ್ನಾಟಕ ಲೋಕಾಯುಕ್ತದ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.