ಶನಿವಾರಸಂತೆ: ವಾರ್ಷಿಕ ಅರಿವು ಕಾರ್ಯಕ್ರಮ

KannadaprabhaNewsNetwork |  
Published : May 04, 2025, 01:31 AM IST
ಪೋಟೋ:-  ಕೊಡ್ಲಿಪೇಟೆ ಡಿಗ್ರಿ ಕಾಲೇಜಿನಲ್ಲಿ ನಡೆದ ವಿಜ್ಞಾನ ಅರಿವು ಕಾರ್ಯಕ್ರಮವನ್ನು ವಿದ್ಯಾಸಂಸ್ಥೆ ಕಾರ್ಯದರ್ಶಿ ಪರಮೇಶ್ ಉದ್ಘಾಟಿಸಿ ಮಾತನಾಡುತ್ತಿರುವುದು ಚಿತ್ರದಲ್ಲಿ ಕೊಡಗು ವಿವಿ ಕುಲಪತಿ ಪ್ರೊ.ಅಶೋಕ್ ಸಂಗಪ್ಪ ಅಲೋರ, ಕುಲಸಚಿವ ಡಾ.ಸುರೇಶ್, ಪ್ರಮುಖರಾದ ಡಾ.ಸುರೇಶ್, ನಿರಂಜನ್, ಗುಣಶ್ರೀ, ಯತೀಶ್, ಯೋಗೇಂದ್ರ ಮುಂತಾದವರಿದ್ದಾರೆ | Kannada Prabha

ಸಾರಾಂಶ

ವಿಜ್ಞಾನ ಮತ್ತು ವೈಜ್ಞಾನಿಕ ಮನೋಧರ್ಮಕ್ಕಾಗಿ ಯುವ ಜನತೆ ಶೀರ್ಷಿಕೆಯಡಿಯಲ್ಲಿ ವಾರ್ಷಿಕ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕನ್ನಡಪ್ರಭ ವಾರ್ತೆ ಶನಿವಾರಸಂತೆ

ಸಮೀಪದ ಕೊಡ್ಲಿಪೇಟೆ ಹಲಸಿನಮರ ಗೌರಮ್ಮ ಶಾಂತಮಲ್ಲಪ್ಪ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ಕೊಡಗು ವಿಶ್ವ ವಿದ್ಯಾಲಯ ಸಂಯುಕ್ತ ಆಶ್ರಯದಲ್ಲಿ ಕಾಲೇಜು ಸಭಾಂಗಣದಲ್ಲಿ ವಿಜ್ಞಾನ ಮತ್ತು ವೈಜ್ಞಾನಿಕ ಮನೋಧರ್ಮಕ್ಕಾಗಿ ಯುವಜನತೆ ಶೀರ್ಷಿಕೆಯಡಿಯಲ್ಲಿ ವಾರ್ಷಿಕ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡಗು ವಿವಿ ಕುಲಪತಿ ಪ್ರೋ| ಅಶೋಕ ಸಂಗಪ್ಪ ಅಲೋರ, ವಿದ್ಯಾರ್ಥಿಗಳಲ್ಲಿ ವಿಜ್ಞಾನ ಮತ್ತು ವೈಜ್ಞಾನಿಕ ಸೇರಿದಂತೆ ಪ್ರತಿಯೊಂದರ ಸೃಜನ ಶೀಲತೆಯಲ್ಲಿ ಆಸಕ್ತಿಯ ಜೊತೆಯಲ್ಲಿ ಸಂಶೋಧನಾತ್ಮಕ ಗುಣಗಳನ್ನು ಬೆಳೆಸಿಕೊಳ್ಳಬೇಕು. ಕೌಶಲ್ಯ ಚತುರತೆ ಇದ್ದರೆ ಮಾತ್ರ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಕೊಡಗು ವಿವಿ ಕುಲ ಸಚಿವ ಡಾ. ಎಂ.ಸುರೇಶ್, ಚಾಮರಾಜನಗರ ವಿವಿ ಕುಲಪತಿ ಎಂ.ಆರ್.ಗಂಗಾಧರ್ ಮಾತನಾಡಿದರು. ಕಾರ್ಯಕ್ರಮವನ್ನು ಕೊಡ್ಲಿಪೇಟೆ ವಿದ್ಯಾಸಂಸ್ಥೆ ಕಾರ್ಯದರ್ಶಿ ಕೆ.ಎಸ್.ಪರಮೇಶ್ ಉದ್ಘಾಟಿಸಿ ಮಾತನಾಡಿದರು. ಕೊಡ್ಲಿಪೇಟೆ ವಿದ್ಯಾಸಂಸ್ಥೆ ನಿರ್ದೇಶಕರಾದ ಬಿ.ಕೆ.ಯತೀಶ್, ಯು.ವಿ.ಶಿವಪ್ರಸಾದ್, ಕೊಡಗು ವಿವಿ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ.ಗುಣಶ್ರೀ, ಕೊಡ್ಲಿಪೇಟೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಎಂ.ಆರ್.ನಿರಂಜನ್, ರಾಷ್ಟ್ರೀಯ ಸೇವಾ ಯೋಜನೆ ಘಟಕದ ಯೋಜನಾಧಿಕಾರಿ ಯೋಗೇಂದ್ರ, ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು