ಪೇರೂರು ಗ್ರಾಮದ ಇಗ್ಗುತ್ತಪ್ಪ ದೇವಾಲಯದಲ್ಲಿ ಭಾನುವಾರ ವಾರ್ಷಿಕ ಉತ್ಸವ ಹಾಗೂ ಶಿವರಾತ್ರಿಯ ವಿಶೇಷ ಪೂಜೆ ನಡೆಯಿತು.
ಕನ್ನಡಪ್ರಭವಾರ್ತೆ ನಾಪೋಕ್ಲು
ಇಲ್ಲಿಗೆ ಸಮೀಪದ ಪೇರೂರು ಗ್ರಾಮದ ಇಗ್ಗುತ್ತಪ್ಪ ದೇವಾಲಯದಲ್ಲಿ ಭಾನುವಾರ ವಾರ್ಷಿಕ ಉತ್ಸವ ಹಾಗೂ ಶಿವರಾತ್ರಿಯ ವಿಶೇಷ ಪೂಜೆ ನಡೆಯಿತು. ಮಧ್ಯಾಹ್ನ ಭಕ್ತರಿಂದ ತುಲಾಭಾರ ಸೇವೆ ನಡೆಯಿತು. ಪೂಜೆಯ ಬಳಿಕ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. ಮಧ್ಯಾಹ್ನ ದೇವಾಲಯದ ಆವರಣದಲ್ಲಿ ಗ್ರಾಮಸ್ಥರಿಂದ ಬೊಳಕಾಟ್ ಪ್ರದರ್ಶನ ಏರ್ಪಡಿಸಲಾಯಿತು. ಬಳಿಕ ಇಗ್ಗುತ್ತಪ್ಪ ದೇವರ ಉತ್ಸವ ಅಂಗವಾಗಿ ನೃತ್ಯಬಲಿ ಜರುಗಿತು.
ಅಪಾರ ಸಂಖ್ಯೆಯಲ್ಲಿ ಸೇರಿದ್ದ ಭಕ್ತರು ಉತ್ಸವದಲ್ಲಿ ಪಾಲ್ಗೊಂಡು ದೇವರ ನೃತ್ಯಬಲಿ ವೀಕ್ಷಿಸಿದರು. ದೇವಾಲಯದ ಅರ್ಚಕ ಗಿರೀಶ್ ನೇತೃತ್ವದಲ್ಲಿ ರುದ್ರಾಭಿಷೇಕ, ವಿಶೇಷ ಪೂಜೆ ಸೇರಿದಂತೆ ಪೂಜಾ ವಿಧಿ ವಿಧಾನ ಜರುಗಿದವು. ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷರು, ಮಚ್ಚೂರ ರವೀಂದ್ರ, ಕಾರ್ಯದರ್ಶಿ ಅಪ್ಪಚ್ಚಿರ ಪೊನ್ನಪ್ಪ ತಕ್ಕ ಮುಖ್ಯಸ್ಥರು, ದೇವಾಲಯ ಅಭಿವೃದ್ದಿ ಸಮಿತಿ ಸದಸ್ಯರು, ಭಕ್ತರು ಪಾಲ್ಗೊಂಡಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.