ಕನ್ನಡಪ್ರಭ ವಾರ್ತೆ ಮಡಿಕೇರಿ
ದೇವಾಲಯದಲ್ಲಿ ಧ್ವಜಾರೋಹಣದ ಮೂಲಕ ಪೂಜಾ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಗಣಪತಿ ಹೋಮ, ದೇವಿಗೆ ಅಭಿಷೇಕ, ಹೂವಿನ ಅಲಂಕಾರ ನಂತರ ತೀರ್ಥ ಸ್ನಾನ, ಕಳಶ ಪೂಜೆ, ನೈವೇದ್ಯ ಪ್ರಸಾದ ಹಾಗೂ ಮಹಾಮಂಗಳಾರತಿ ನಡೆಯಿತು.
ದೇವಿಯ ರಥೋತ್ಸವ ದೇವಾಲಯದ ಆವರಣದ ಸುತ್ತ ಸಾಗಿತು. ನಂತರ ತುಲಾಭಾರ, ತಲೆಮುಡಿ ತೆಗೆಯುವುದು, ತೀರ್ಥಸ್ನಾನ, ಉರುಳು ಸೇವೆ, ಕುಂಕುಮ ಅರ್ಚನೆ, ಮಂಗಳಾರತಿ, ಅನ್ನದಾನ, ತಾಯಿಯ ದರ್ಶನ ಜರುಗಿತು.ಸಂಜೆ ದೇವಾಲಯದ ಆವರಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ದೀಪಾಲಂಕಾರ ನಡೆಯಿತು. ರಾತ್ರಿ ಅನ್ನದಾನ ಸೇವೆ, ದೇವಿಯ ದರ್ಶನ ಹಾಗೂ ವಿವಿಧ ಪೂಜಾ ಕಾರ್ಯಕ್ರಮಗಳು ನಡೆದವು.
ಕೊಡಗು ಸೇರಿದಂತೆ ಹೊರ ಜಿಲ್ಲೆಯ 5 ಸಾವಿರಕ್ಕೂ ಅಧಿಕ ಭಕ್ತರು ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡಿದ್ದರು.