ಕನ್ನಡಪ್ರಭ ವಾರ್ತೆ ಹುಕ್ಕೇರಿ
ಬೆಳಗಾವಿ ನಗರದ ಅನಗೋಳದಲ್ಲಿ ಶನಿವಾರ ಗ್ರೀನ್ ಲಾನ್ಸ್ ಎಜ್ಯುಕೇಶನ್ ಮತ್ತು ಸೋಶಿಯಲ್ ವೆಲ್ಫೇರ್ ಸೊಸೈಟಿಯ ರಾಯಲ್ ಆಂಗ್ಲ ಮಾಧ್ಯಮ ನರ್ಸರಿ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಮಾನವೀಯ ಮೌಲ್ಯಗಳು ಕುಸಿಯುತ್ತಿರುವ ಇಂದಿನ ದಿನಗಳಲ್ಲಿ ಮಕ್ಕಳಿಗೆ ನೈತಿಕ ಹಾಗೂ ಮೌಲ್ಯಾಧಾರಿತ ಶಿಕ್ಷಣ ನೀಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ರಾಯಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಆದ್ಯತೆ ನೀಡಲಾಗಿದೆ. ಇದು ಇತರೆ ಶಾಲೆಗಳಿಗೆ ಮಾದರಿಯಾಗಿದೆ ಎಂದು ಹೇಳಿದರು.
ಸಂಸ್ಥೆ ಅಧ್ಯಕ್ಷ ಸದಾಶಿವ ಮೇತ್ರಿ ಅಧ್ಯಕ್ಷತೆ ವಹಿಸಿದ್ದರು. ಪ್ರೊ.ರಾಜು ಕೋಲಕಾರ ಮಾತನಾಡಿದರು. ಎಸ್.ಸಿ, ಎಸ್.ಟಿ ದೌರ್ಜನ್ಯ ನಿಯಂತ್ರಣ ಜಿಲ್ಲಾ ಸಮಿತಿ ಸದಸ್ಯ ಸಿದ್ದರಾಯಿ ಮೇತ್ರಿ, ಮುಖಂಡ ಶಂಕರ ಕಾಂಬಳೆ, ವಿನಾಯಕ ಕೋಲಕಾರ, ಅಕ್ಷಯ ವೀರಮುಖ, ಪವನ ಪೂಜೇರಿ, ಗಣಪತಿ ಕಾಂಬಳೆ, ಅಶೋಕ ತಳವಾರ, ಸಂತೋಷ ಹೊಳೆಪ್ಪಗೋಳ, ಬಸವರಾಜ ಜಾಂಬೋಟಿ ಇತರರು ಇದ್ದರು.