ಭಾರತ್ ಸ್ಕೌಟ್ ಎಂಡ್ ಗೈಡ್ಸ್‌ ಮೂಲ್ಕಿ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಧಿವೇಶನ

KannadaprabhaNewsNetwork |  
Published : Sep 01, 2025, 01:04 AM IST
ಭಾರತ್ ಸ್ಕೌಟ್ ಎಂಡ್ ಗೈಡ್ಸ್‌ ಮೂಲ್ಕಿ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಧಿವೇಶನ | Kannada Prabha

ಸಾರಾಂಶ

ಮೂಲ್ಕಿಯಲ್ಲಿ ಭಾರತ್ ಸ್ಕೌಟ್ ಎಂಡ್ ಗೈಡ್ಸ್‌ ಮೂಲ್ಕಿ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಧಿವೇಶನ ನಡೆಯಿತು. ರಾಜ್ಯ ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಆಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಉದ್ಘಾಟಿಸಿದರು.

ಕನ್ನಡಪ್ರಭವಾರ್ತೆ ಮೂಲ್ಕಿ

ವಿಶ್ವದ ಎಲ್ಲೆಡೆ ಶೈಕ್ಷಣಿಕ ವಿಚಾರಗಳ ಜೊತೆಗೆ ವಿದ್ಯಾರ್ಥಿಗಳ ಬದುಕಿಗೆ ಅಗತ್ಯ ವಿಷಯಗಳನ್ನು ಸಾಮರಸ್ಯದ ಚಿಂತನೆಯ ಮೂಲಕ ಸಮಾಜ ಸೇವೆಯ ಮನಸ್ಸು ಮತ್ತು ಶ್ರಮದಿಂದ ಕೂಡಿದ ಬದುಕು ರೂಪಿಸುವಲ್ಲಿ ಭಾರತ್ ಸ್ಕೌಟ್ ಎಂಡ್ ಗೈಡ್ಸ್ ಅಂದೋಲನ ಪರಿಣಾಮಕಾರಿಯಾಗಿದೆ ಎಂದು ರಾಜ್ಯ ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಆಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಹೇಳಿದರು.

ಮೂಲ್ಕಿಯಲ್ಲಿ ಜರುಗಿದ ಭಾರತ್ ಸ್ಕೌಟ್ ಎಂಡ್ ಗೈಡ್ಸ್‌ ಮೂಲ್ಕಿ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಧಿವೇಶನವನ್ನು ಉದ್ಘಾಟಿಸಿ ಮಾತನಾಡಿದ ಅವರು ರಾಜ್ಯ ಆಯುಕ್ತರಾಗಿರುವ ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾರವರ ನಾಯಕತ್ವದಡಿ ರಾಜ್ಯದೆಲ್ಲೆಡೆ ಹೊಸ ಚಿಂತನೆಗಳಿಂದ ವಿದ್ಯಾರ್ಥಿಗಳ ಬದುಕು ರೂಪಿಸುವ ಮೂಲಕ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಮಾದರಿಯಾಗಿ ಬೆಳೆದು ನಿಂತಿದೆಯೆಂದು ಹೇಳಿದರು.

ಕಾರ್ಯಕ್ರಮದ ಆಧ್ಯಕ್ಷತೆಯನ್ನು ಮೂಲ್ಕಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಎಂ. ಸರ್ವೋತ್ತಮ ಅಂಚನ್ ವಹಿಸಿದ್ದು ರಾಜ್ಯ ಸಹಾಯಕ ಸಂಘಟಕ ಭರತ್ ರಾಜ್ ಮಾತನಾಡಿ ಮೂಲ್ಕಿ ಸ್ಥಳೀಯ ಸಂಸ್ಥೆಯ ಮೂಲಕ ನಡೆಸಲಾದ ಹಲವು ಕಾರ್ಯಕ್ರಮಗಳು ಅದರಲ್ಲೂ ರಾಷ್ಟ್ರ ಮಟ್ಟದ ಸಮುದ್ರ ಸಾಹಸ ಶಿಬಿರ (ವಾಟರ್ ರಿಗೇಟಾ )ರಾಷ್ಟ್ರ ಮಟ್ಟದ ದಾಖಲೆಯನ್ನು ಸ್ಥಾಪಿಸಿದೆ. ಮೂಲ್ಕಿ ಘಟಕದ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಸೇವೆ ಅತ್ಯಂತ ಮಹತ್ವದ್ದು ಹಾಗು ಈ ಘಟಕ ರಾಜ್ಯ ಸಂಸ್ಥೆಯ ಗೌರವಕ್ಕೆ ಪಾತ್ರವಾಗಿದೆ ಎಂದು ಹೇಳಿದರು.

ಉಪಾಧ್ಯಕ್ಷೆ ಸರೋಜಿನಿ ಸುವರ್ಣ ಮತ್ತಿತರರಿದ್ದರು.ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಹರಿಶ್ಷಂದ್ರ ಕಾರ್ಯಕ್ರಮ ನಿರೂಪಿಸಿದರು. ಕಿಲ್ಪಾಡಿ ಶ್ರೀ ವ್ಯಾಸ ಮಹರ್ಷಿ ಆಂಗ್ಲ ಮಾದ್ಯಮ ಶಾಲೆಯ ಪ್ರಾಂಶುಪಾಲೆ ಕಾಮಾಕ್ಷಿ ಆರ್. ನಾಯಕ್ ಸ್ವಾಗತಿಸಿದರು. ಮೂಲ್ಕಿ ಶ್ರೀನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಗೀತಾ ಶೆಟ್ಟಿ ವಂದಿಸಿದರು.

PREV

Recommended Stories

.ಜಮಖಂಡಿಯಲ್ಲಿ ವಿನಾಕನಿಗೆ ಅದ್ಧೂರಿ ವಿದಾಯ
ರೈತರ ಹಿತ ಕಾಪಾಡುವುದು ಮುಖ್ಯ: ಹನಮಂತ ನಿರಾಣಿ