ಕನ್ನಡಪ್ರಭವಾರ್ತೆ ಸೋಮವಾರಪೇಟೆ
ಸಂಘದ ಅಧ್ಯಕ್ಷ ವಿಜಯ್ ಹಾನಗಲ್ ಅವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾ ರೈ, ವೀಕ್ಷಕರಾಗಿ ಜಿಲ್ಲಾ ಸಂಘದ ನಿರ್ದೇಶಕ ಮಲ್ಲಿಕಾರ್ಜುನ್ ಆಗಮಿಸಿದ್ದರು. ಸಂಘದ ಖಜಾಂಚಿ ಬಿ.ಎ. ಭಾಸ್ಕರ್ ಲೆಕ್ಕಪತ್ರ ಮಂಡಿಸಿದರು. ಪ್ರಧಾನ ಕಾರ್ಯದರ್ಶಿ ದಿನೇಶ್ ಮಾಲಂಬಿ ಕಾರ್ಯಕ್ರಮ ನಿರ್ವಹಿಸಿದರು.
ಇದೇ ಸಂದರ್ಭ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಪ್ರಶಸ್ತಿ ಪುರಸ್ಕೃತರಾದ ಸಂಘದ ಉಪಾಧ್ಯಕ್ಷ ವಿಶ್ವ ಕುಂಬೂರು, ಜಿಲ್ಲಾ ಪ್ರಶಸ್ತಿ ವಿಜೇತ ಹಿರಿಕರ ರವಿ ಅವರನ್ನು ಸನ್ಮಾನಿಸಲಾಯಿತು. ಜಂಟಿ ಕಾರ್ಯದರ್ಶಿ ಲಕ್ಷ್ಮಿಕಾಂತ್ ಕೊಮಾರಪ್ಪ, ನಿರ್ದೇಶಕರಾದ ಎಸ್.ಡಿ. ವಿಜೇತ್, ಭಾಸ್ಕರ್ ಮುಳ್ಳೂರು, ಚೆರಿಯಮನೆ ಸುರೇಶ್ ಅವರು ಉಪಸ್ಥಿತರಿದ್ದರು.