ನೆಬ್ಬೂರು ಗೌಡ ಸಂಘದ ವಾರ್ಷಿಕ ಮಹಾಸಭೆ

KannadaprabhaNewsNetwork |  
Published : Dec 13, 2025, 03:00 AM IST
ಬಲಮುರಿ ಗ್ರಾಮದ ನೆಬ್ಬೂರು ಗೌಡ ಸಂಘದ ವಾರ್ಷಿಕ ಮಹಾಸಭೆಯಲ್ಲಿ, ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ನಿವೃತ್ತ ಮುಖ್ಯ ಶಿಕ್ಷಕರು ಕೊಟ್ಟಕೇರಿಯನ ದಮೇಂದ್ರ  ಅವರಿಗೆ ಸನ್ಮಾನಿಸಿದ ಗೌರವಿಸಲಾಯಿತು  . | Kannada Prabha

ಸಾರಾಂಶ

ನೆಬ್ಬೂರು ಗೌಡ ಸಂಘದ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದ ನೆಬ್ಬೂರು ಗೌಡ ಸಂಘದ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮ ಕಟ್ರತನ ಲೋಕನಾಥ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯ ಮುಖ್ಯ ಅತಿಥಿಯಾಗಿ ಮಡಿಕೇರಿ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್ ಭಾಗವಹಿಸಿ ತಮ್ಮ ಅನಿಸಿಕೆ ವ್ಯಕ್ತಪಡಿಸಿ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯ ಶಿಕ್ಷಕರು, ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಕೊಟ್ಟಕೇರಿಯನ ದಮೇಂದ್ರ, ಕ್ರೀಡಾ ಕ್ಷೇತ್ರದಲ್ಲಿ ರಾಜ್ಯಮಟ್ಟದಲ್ಲಿ ಮೂರನೇ ಸ್ಥಾನ ಪಡೆದ ಪೂನ್ನಚನ ವ್ರಂಧಾ ಹಾಗು ಎಂ.ಬಿ.ಎ.ಸ್ನಾತಕೋತ್ತರ ಪದವಿಯಲ್ಲಿ ಅತ್ಯುತ್ತಮ ಇಂಟರ್ನಶಿಫ್ ಪ್ರಶಸ್ತಿ ಪಡೆದ ಕೊಟ್ಟಕೇರಿಯನ ಮೋನಿಕಾ ಅವರನ್ನು ಸನ್ಮಾನಿಸಲಾಯಿತು.

ಸಭೆಯಲ್ಲಿ ಹಿರಿಯ ವಕೀಲ ರಾದ ಕೊಟ್ಟಕೇರಿಯನ ದಯಾನಂದ ಅವರು ಸಂಘದ ಸಮಗ್ರ ಅಭಿವೃದ್ಧಿ ಬಗ್ಗೆ ಸಲಹೆ ಸೂಚನೆಯನ್ನು ನೀಡಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಹಗ್ಗ ಜಗ್ಗಾಟ, ತೆಂಗಿನ ಕಾಯಿಗೆ ಕಲ್ಲು ಹೊಡೆಯುವುದು, ಕಣ್ಣಿಗೆ ಬಟ್ಟೆ ಕಟ್ಟಿ ಮಡಕೆ ಒಡೆಯುವುದು ಹೀಗೆ ವಿವಿಧ ಕ್ರೀಡೆಗಳನ್ನು ಆಯೋಜಿಸಿ ವಿಜೇತರಾದವರಿಗೆ ಗಣ್ಯರು ಬಹುಮಾನ ವಿತರಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಸಂಘದ ಕಾರ್ಯದರ್ಶಿಯಾದ ಪೊನ್ನಚನ ರೊಹಿತ್ ವರದಿ ವಾಚಿಸಿದ ಸಭೆಯಲ್ಲಿ ಪೊನ್ನಚನ ಹರೀಶ್ ಸ್ವಾಗತಿಸಿದರು. ಪೊನ್ನಚ್ಚನ ಡಯನ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ ತೆಬಿಯಾ ರೋಸಿಯಾ ಹೂ ವೈಭವ!
ನಿವೇಶನ ರಹಿತರಿಗೆ ಸರ್ಕಾರದಿಂದ ಸೈಟ್‌