ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ಸಭೆಯಲ್ಲಿ ಅಧ್ಯಕ್ಷ ಸಂತೋಷ್ ಮಾತನಾಡಿ, ಸಮಾಜ ಸೇವೆ ಮಾಡುತ್ತಿರುವ ರಕ್ಷಣಾ ವೇದಿಕೆ, ಇನ್ನಷ್ಟು ಸೇವೆಯೊಂದಿಗೆ ಸಂಘಟನೆಯನ್ನು ಬಲಪಡಿಸಬೇಕೆಂದು ಮನವಿ ಮಾಡಿದರು.
ಕಿಕ್ ಬಾಕ್ಸಿಂಗ್‌ನಲ್ಲಿ ಬೆಳ್ಳಿ ಪದಕ ಪಡೆದ ಸೋಮವಾರಪೇಟೆ ಜಿಎಂಪಿ ಶಾಲಾ ವಿದ್ಯಾರ್ಥಿಗಳಾದ ಮಿತೇಶ್ ಹಾಗೂ ರಿತನ್ ಅವರನ್ನು ಸನ್ಮಾನಿಸಲಾಯಿತು.ವೇದಿಕೆಯ ಜಿಲ್ಲಾಧ್ಯಕ್ಷ ಕೆ.ಪಿ. ರಾಜು, ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿ ಕುದುಪಜೆ, ಸಂಚಾಲಕ ಗೋವಿಂದ, ಕುಶಾಲನಗರ ತಾಲೂಕು ಘಟಕದ ಅಧ್ಯಕ್ಷ ಅಣ್ಣಯ್ಯ, ಸೋಮವಾರಪೇಟೆ ಮಹಿಳಾ ಘಟಕದ ಅಧ್ಯಕ್ಷೆ ಆಶಾ ಇದ್ದರು.