ಮೇ 10, 11ರಂದು ಬಂಟೆರೆನ ವಾರ್ಷಿಕ ಸಮ್ಮಿಲನ ಕಾರ್ಯಕ್ರಮ: ವಿವಿಧ ಕ್ರೀಡಾಕೂಟ

KannadaprabhaNewsNetwork |  
Published : Apr 09, 2025, 12:31 AM ISTUpdated : Apr 09, 2025, 12:32 AM IST
 ಯುವ ಬಂಟ್ಸ್ ಅಸೋಸಿಯೇಷನ್ | Kannada Prabha

ಸಾರಾಂಶ

ಮೇ 10 ಮತ್ತು 11ರಂದು ಮಡಿಕೇರಿಯಲ್ಲಿ ಬಂಟೆರೆನ ವಾರ್ಷಿಕ ಸಮ್ಮಿಲನ ನಡೆಯಲಿದೆ. ವಿವಿಧ ಕ್ರೀಡಾಕೂಟಗಳಿಗೆ ಚಾಲನೆ ದೊರೆಯಲಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೊಡಗು ಜಿಲ್ಲಾ ಬಂಟರ ಸಂಘ ಹಾಗೂ ಯುವ ಬಂಟ್ಸ್ ಅಸೋಸಿಯೇಷನ್ ವತಿಯಿಂದ ಮೇ 10 ಮತ್ತು 11ರಂದು ಮಡಿಕೇರಿಯಲ್ಲಿ ‘ಬಂಟೆರೆನ ವಾರ್ಷಿಕ ಸಮ್ಮಿಲನ-2025’ ನಡೆಯಲಿದ್ದು, ಸಮಾಜ ಬಾಂಧವರಿಗೆ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಲಾಗಿದೆ ಎಂದು ಯುವ ಬಂಟ್ಸ್ ಅಸೋಸಿಯೇಷನ್ ನಿರ್ದೇಶಕ ಕೆ.ಶರತ್ ಕುಮಾ‌ರ್ ಶೆಟ್ಟಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ (ಮ್ಯಾನ್ ಕಾಂಪೌಂಡ್)ದಲ್ಲಿ ಬೆಳಗ್ಗೆ 9 ಗಂಟೆಗೆ ಸಭಾ ಕಾರ್ಯಕ್ರಮ ಹಾಗೂ ವಿವಿಧ ಕ್ರೀಡಾಕೂಟಗಳಿಗೆ ಚಾಲನೆ ದೊರೆಯಲಿದೆ ಎಂದರು.

ಕಾರ್ಯಕ್ರಮದ ಅಂಗವಾಗಿ ಪುರುಷರಿಗೆ ಕ್ರಿಕೆಟ್, ವಾಲಿಬಾಲ್, ಹಗ್ಗಜಗ್ಗಾಟ ಸ್ಪರ್ಧೆ ನಡೆಯಲಿದ್ದು, ಕ್ರಿಕೆಟ್ ಮತ್ತು ವಾಲಿಬಾಲ್ ತಂಡಗಳು ಏ.20ರ ಒಳಗಾಗಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಹೇಳಿದರು.

ಮಹಿಳೆಯರಿಗೆ ಥ್ರೋಬಾಲ್, ಹಗ್ಗಜಗ್ಗಾಟ, ನಿಂಬೆ ಚಮಚ ಹಾಗೂ ಇತರೆ ಆಕರ್ಷಕ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ಮಕ್ಕಳಿಗೆ 100 ಮೀ. ಓಟ ಹಾಗೂ ಮನೋರಂಜನಾ ಸ್ಪರ್ಧೆ ನಡೆಯಲಿದೆ. ಇದೇ ಸಂದರ್ಭ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಲಿದ್ದು, ಕೊಡಗಿನ ಎಲ್ಲ ಸ್ವಜಾತಿ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಹೆಚ್ಚಿನ ಮಾಹಿತಿಗಾಗಿ ಹಾಗೂ ನೋಂದಣಿಗಾಗಿ ನಿಖಿಲ್ ಆಳ್ವ 9972477982, ಸುಜಿತ್ ಶೆಟ್ಟಿ 9663721707 ಸಂಪರ್ಕಿಸಬಹುದಾಗಿದೆ ಎಂದು ಶರತ್ ಕುಮಾರ್ ತಿಳಿಸಿದರು.

ಯುವ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಬಿ.ಕೆ. ಸದಾನಂದ ರೈ, ನಿರ್ದೇಶಕರಾದ ಬಿ.ಬಿ.ಬಾಲಕೃಷ್ಣ ರೈ, ಬಿ.ಎಸ್.ಕಿಶೋರ್ ರೈ, ಎನ್. ರವಿಕಿರಣ್ ಶೆಟ್ಟಿ ಸುದ್ದಿಗೋಷ್ಠಿಯಲ್ಲಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿಯ ಅಕ್ರಮ ಬಂಧನದಲ್ಲಿಟ್ಟಿದ್ದಕ್ಕೆ ಸರ್ಕಾರಕ್ಕೆ ದಂಡ!
ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ