ಮೂಡಲಕಟ್ಟೆಯಲ್ಲಿರುವ ವಿದ್ಯಾ ಅಕಾಡೆಮಿ ಶಾಲೆಯ ವಾರ್ಷಿಕ ಕ್ರೀಡಾಕೂಟವು ಇತ್ತೀಚೆಗೆ ಯಶಸ್ವಿಯಾಗಿ ನಡೆಯಿತು. ಎಳೆಯ ವಿದ್ಯಾರ್ಥಿಗಳ ಕ್ರೀಡಾ ಉತ್ಸವವು ಈ ದಿನದ ಮುಖ್ಯ ಆಕರ್ಷಣೆಯಾಗಿತ್ತು.
ಕನ್ನಡಪ್ರಭ ವಾರ್ತೆ ಕುಂದಾಪುರ
ಇಲ್ಲಿನ ಮೂಡಲಕಟ್ಟೆಯಲ್ಲಿರುವ ವಿದ್ಯಾ ಅಕಾಡೆಮಿ ಶಾಲೆಯ ವಾರ್ಷಿಕ ಕ್ರೀಡಾಕೂಟವು ಇತ್ತೀಚೆಗೆ ಯಶಸ್ವಿಯಾಗಿ ನಡೆಯಿತು. ಎಳೆಯ ವಿದ್ಯಾರ್ಥಿಗಳ ಕ್ರೀಡಾ ಉತ್ಸವವು ಈ ದಿನದ ಮುಖ್ಯ ಆಕರ್ಷಣೆಯಾಗಿತ್ತು.ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ದೈಹಿಕ ಶಿಕ್ಷಣ ಶಿಕ್ಷಕ ಅಜಾದ್ ಮೊಹಮ್ಮದ್, ವಿದ್ಯಾರ್ಥಿಗಳ ಆಕರ್ಷಕ ಪಥ ಸಂಚಲನವನ್ನು ವೀಕ್ಷಿಸಿ ವಿದ್ಯಾರ್ಥಿಗಳ ಶಿಸ್ತು ಮತ್ತು ಸಮರ್ಪಣೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ದೈಹಿಕ ಶಿಕ್ಷಣವು ವಿದ್ಯಾರ್ಥಿಗಳಲ್ಲಿ ನಾಯಕರ ಗುಣಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರವಹಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.ಗೌರವ ಅತಿಥಿಯಾಗಿ ಉಪಸ್ಥಿತರಿದ್ದ ಕೋಣಿ ಕ್ಲಸ್ಟರ್‌ನ ಸಿ.ಆರ್.ಪಿ. ಸುಮನಾ ಎನ್., ಶಾಲಾ ಶಿಕ್ಷಕರ ಕಾರ್ಯನಿಷ್ಠೆಯನ್ನು ಶ್ಲಾಘನೆ ಮಾಡಿದರು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿರುವ ಪ್ರತಿಭೆ ಯನ್ನು ಹೊರತರುವ ಶಿಕ್ಷಕರ ಪರಿಶ್ರಮವನ್ನು ಅವರು ಪ್ರಶಂಸಿಸಿದರು.ಕಾರ್ಯಕ್ರಮವನ್ನು ರೇಷ್ಮಾ ಶೆಟ್ಟಿ ನಿರೂಪಿಸಿದರು. ಸೋಫಿಯಾ ಕಾರ್ವಾಲೋ ಅತಿಥಿಗಳನ್ನು ಸ್ವಾಗತಿಸಿದರು ಮತ್ತು ಸುನಿತಾ ರೆಬೆಲ್ಲೋ ಅತಿಥಿಗಳನ್ನು ಪರಿಚಯಿಸಿದರು. ಸ್ವಾತಿ ವಂದಿಸಿದರು.ಕ್ರೀಡಾ ಸ್ಪರ್ಧೆಗಳನ್ನು ವಿದ್ಯಾ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ಶಾಲಾ ನಿರ್ವಹಣಾಧಿಕಾರಿ ಪಾವನ ಮಹೇಶ್, ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರವೀಣ್ ಖಾರ್ವಿ, ಎಲ್ಲ ಶಿಕ್ಷಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.