ಇಂಡಿಯಾ ಬುಕ್ ಆಫ್ ರೆಕಾಡ್ಸ್‌ಗೆ ಅಣ್ಣೂರು ಗ್ರಾಮ ಪಂಚಾಯಿತಿ

KannadaprabhaNewsNetwork |  
Published : Jun 12, 2025, 01:33 AM IST
೧೧ಕೆಎಂಎನ್‌ಡಿ-೨ | Kannada Prabha

ಸಾರಾಂಶ

ಈವೊಂದು ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಣ್ಣೂರು, ಆಲಭುಜನಹಳ್ಳಿ ಕಾರ್ಕಳ್ಳಿ ಗ್ರಾಮಗಳಿಂದ ಒಟ್ಟು ೧,೫೪೪ ಮಂದಿ ಭಾಗವಹಿಸಿದ್ದರು. ಅಕ್ಕಿ ಹಿಟ್ಟು, ಅರಿಶಿನ ಪುಡಿ ಮತ್ತು ಬಣ್ಣದ ಮರಳಿನಂತಹ ನೈಸರ್ಗಿಕ ವಸ್ತುಗಳನ್ನು ಬಳಸಿಕೊಂಡು ಒಟ್ಟಾರೆ ೧,೪೧೮ ರಂಗೋಲಿಗಳನ್ನು ರಚಿಸಿ ಗಮನ ಸೆಳೆದಿದ್ದರು.

ಕನ್ನಡಪ್ರಭ ವಾರ್ತೆ ಮಂಡ್ಯ

ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಅಂಗವಾಗಿ ಏಕಕಾಲದಲ್ಲಿ ಗರಿಷ್ಠ ಸಂಖ್ಯೆಯ ರಂಗೋಲಿಗಳನ್ನು ಬಿಡಿಸಿ ದಾಖಲೆ ನಿರ್ಮಿಸಿದ ಮದ್ದೂರು ತಾಲೂಕು ಅಣ್ಣೂರು ಗ್ರಾಮ ಪಂಚಾಯಿತಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಸೇರ್ಪಡೆ ಆಗಿದೆ.

ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಿಸುತ್ತಾ ಗಮನ ಸೆಳೆದಿರುವ ಅಣ್ಣೂರು ಗ್ರಾಮ ಪಂಚಾಯಿತಿ ಮುಕುಟಕ್ಕೆ ಈ ಮೂಲಕ ಮತ್ತೊಂದು ಗರಿ ಸೇರ್ಪಡೆ ಆಗಿದೆ. ಮಹಿಳಾ ಸಶಕ್ತೀಕರಣ ಹಾಗೂ ಸ್ಥಳೀಯ ಆಡಳಿತದಲ್ಲಿ ಮಹಿಳೆಯರ ಸಕ್ರಿಯ ಭಾಗವಹಿಸುವಿಕೆಯನ್ನು ಉತ್ತೇಜಿಸುವ ಸಲುವಾಗಿ ೨೦೨೫ರ ಏಪ್ರಿಲ್ ೨೭ರಂದು ರಂಗೋಲಿ ರಚಿಸುವ ಚಟುವಟಿಕೆಯನ್ನು ಅಣ್ಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ೦೩ ಗ್ರಾಮಗಳಲ್ಲಿ ಏಕಕಾಲದಲ್ಲಿ ಆಯೋಜಿಸಲಾಗಿತ್ತು.

ಈವೊಂದು ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಣ್ಣೂರು, ಆಲಭುಜನಹಳ್ಳಿ ಕಾರ್ಕಳ್ಳಿ ಗ್ರಾಮಗಳಿಂದ ಒಟ್ಟು ೧,೫೪೪ ಮಂದಿ ಭಾಗವಹಿಸಿದ್ದರು. ಅಕ್ಕಿ ಹಿಟ್ಟು, ಅರಿಶಿನ ಪುಡಿ ಮತ್ತು ಬಣ್ಣದ ಮರಳಿನಂತಹ ನೈಸರ್ಗಿಕ ವಸ್ತುಗಳನ್ನು ಬಳಸಿಕೊಂಡು ಒಟ್ಟಾರೆ ೧,೪೧೮ ರಂಗೋಲಿಗಳನ್ನು ರಚಿಸಿ ಗಮನ ಸೆಳೆದಿದ್ದರು. ಇದರಲ್ಲಿ ಅಣ್ಣೂರು ಗ್ರಾಪಂನ ೮೧೮ ಮಂದಿ ೭೨೮ ರಂಗೋಲಿ, ಆಲಭೂಜನಹಳ್ಳಿಯ ೩೭೩ ಮಂದಿ ೩೭೩ ಹಾಗೂ ಕಾರ್ಕಹಳ್ಳಿಯ ೩೫೩ ಮಂದಿ ೩೧೭ ರಂಗೋಲಿಗಳನ್ನು ರಚಿಸಿದ್ದರು.

ಇದುವರೆಗೆ ಅಣ್ಣೂರು ಗ್ರಾಪಂ ಹಲವು ರಾಷ್ಟ್ರೀಯ, ರಾಜ್ಯ ಮತ್ತು ಸಂಘ- ಸಂಸ್ಥೆಗಳು ನೀಡಿದ ಪ್ರಶಸ್ತಿಗಳನ್ನು ಪಡೆದುಕೊಂಡು ಗಮನಸೆಳೆದಿದೆ.

ಮಹಿಳೆಯರ ಸಕ್ರಿಯ ಭಾಗವಹಿಸುವಿಕೆಯಿಂದ ಈ ಸಾಧನೆ ಆಗಿರುವುದಕ್ಕೆ ಹೆಚ್ಚು ಖುಷಿಯಾಗಿದೆ. ಇದಕ್ಕೆ ಹಿರಿಯ ಅಧಿಕಾರಿಗಳು, ಗ್ರಾಮ ಪಂಚಾಯತಿಯ ಚುನಾಯಿತ ಸದಸ್ಯರು ಮತ್ತು ಆಡಳಿತ ಮಂಡಳಿ ಸಹಕಾರವೇ ಕಾರಣ.

- ಎಂ.ಆರ್.ಅಶ್ವಿನಿ, ಪಿಡಿಒ, ಅಣ್ಣೂರು ಗ್ರಾ.ಪಂ.

------

ಗ್ರಾಮ ಪಂಚಾಯಿತಿ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ, ಸ್ಥಳೀಯ ಆಡಳಿತದಲ್ಲಿ ಮಹಿಳೆಯರ ಭಾಗವಹಿಸುವಿಕೆ ನಿರೀಕ್ಷಿತ ಮಟ್ಟದಲ್ಲಿ ಇರುವುದಿಲ್ಲ. ಆದರೆ, ಮಹಿಳೆಯರ ಭಾಗವಹಿಸುವಿಕೆಯಿಂದಲೇ ಈ ಸಾಧನೆ ಸಾಧ್ಯವಾಗಿದೆ.

-ಶಿವಮ್ಮ, ಅಧ್ಯಕ್ಷರು, ಅಣ್ಣೂರು ಗ್ರಾ.ಪಂ.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ