ಚಾರ್ಮಾಡಿ ಘಾಟಿಯಲ್ಲಿ ಮತ್ತೆ 12 ಚಕ್ರದ ಲಾರಿ ಲಾಕ್

KannadaprabhaNewsNetwork |  
Published : Apr 05, 2024, 01:02 AM IST
ಚಾರ್ಮಾಡಿ ಘಾಟ್‌ನ 2ನೇ ತಿರುವಿನಲ್ಲಿ 12 ಚಕ್ರದ ಲಾರಿ ಲಾಕ್‌ ಆಗಿರುವುದು. | Kannada Prabha

ಸಾರಾಂಶ

ಕಳೆದ ಮಾರ್ಚ್ 18ರಂದು ಹುಬ್ಬಳ್ಳಿಯಿಂದ ಮಂಗಳೂರಿಗೆ ಹೋಗುತ್ತಿದ್ದ 16 ಚಕ್ರದ ಸಿಮೆಂಟ್ ಲಾರಿ ಚಾರ್ಮಾಡಿ ಘಾಟಿಯ ಹತ್ತನೇ ತಿರುವಿನಲ್ಲಿ ಲಾಕ್ ಆಗಿ ಮಂಗಳೂರು ಹಾಗೂ ಚಿಕ್ಕಮಗಳೂರು ಎರಡೂ ಮಾರ್ಗದಲ್ಲೂ ಮೂರ್ನಾಲ್ಕು ಕಿ.ಮೀ.ನಷ್ಟು ದೂರ ಟ್ರಾಫಿಕ್ ಜಾಮ್ ಆಗಿತ್ತು.

ಅಪಾಯಕಾರಿ ತಿರುವಿನ ಚಾರ್ಮಾಡಿ ಘಾಟಿಯಲ್ಲಿ ಅಷ್ಟು ದೊಡ್ಡ ವಾಹನ ಹೋಗಿದ್ದೆ ಯಕ್ಷಪ್ರಶ್ನೆ

ಕನ್ನಡಪ್ರಭ ವಾರ್ತೆ, ಕೊಟ್ಟಿಗೆಹಾರ

ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಇದ್ದಾರೋ... ಇಲ್ಲವೋ.?

ಈ ರೀತಿಯ ಪ್ರಶ್ನೆಯೊಂದು ಸಾರ್ವಜನಿಕರಿಗೆ ಕಾಡುತ್ತಿದೆ.

ಕಳೆದ ಮಾರ್ಚ್ 18ರಂದು ಹುಬ್ಬಳ್ಳಿಯಿಂದ ಮಂಗಳೂರಿಗೆ ಹೋಗುತ್ತಿದ್ದ 16 ಚಕ್ರದ ಸಿಮೆಂಟ್ ಲಾರಿ ಚಾರ್ಮಾಡಿ ಘಾಟಿಯ ಹತ್ತನೇ ತಿರುವಿನಲ್ಲಿ ಲಾಕ್ ಆಗಿ ಮಂಗಳೂರು ಹಾಗೂ ಚಿಕ್ಕಮಗಳೂರು ಎರಡೂ ಮಾರ್ಗದಲ್ಲೂ ಮೂರ್ನಾಲ್ಕು ಕಿ.ಮೀ.ನಷ್ಟು ದೂರ ಟ್ರಾಫಿಕ್ ಜಾಮ್ ಆಗಿತ್ತು.

ಗುರುವಾರ ಮತ್ತೆ ಚಾರ್ಮಾಡಿ ಘಾಟಿಯ ಎರಡನೇ ತಿರುವಿನಲ್ಲಿ 12 ಚಕ್ರದ ಲಾರಿ ಲಾಕ್ ಆಗಿದೆ. ರಸ್ತೆಯ ತಿರುವಿನಲ್ಲಿ ಲಾರಿ ಟರ್ನ್ ಆಗದೆ ನಿಂತಲ್ಲಿ ನಿಂತಿದೆ. ಬೆಳಗ್ಗೆಯಿಂದಲೂ ಕೂಡ ಚಾರ್ಮಾಡಿ ಘಾಟಿಯಲ್ಲಿ ವಾಹನಗಳು ನಿಂತಲ್ಲೇ ನಿಂತು ಮುಂದೆ ಹೋಗಲಾಗದೆ ಹಿಂದೆಯೂ ಬರಲಾಗದೆ ಪರದಾಡುವಂತೆ ಆಗಿತ್ತು.

ಬಳ್ಳಾರಿಯಿಂದ ಸರಕನ್ನ ತುಂಬಿಕೊಂಡು ಮಂಗಳೂರಿಗೆ ಹೋಗುತ್ತಿದ್ದ ಲಾರಿ ಚಾರ್ಮಾಡಿ ಘಾಟಿಯಲ್ಲಿ ಲಾಕ್ ಆಗಿರೋದ್ರಿಂದ ವಾಹನ ಸವಾರರು ಪರದಾಡುತ್ತಿದ್ದಾರೆ. ಚಾರ್ಮಾಡಿ ಘಾಟಿಯಲ್ಲಿ ಹತ್ತು ಚಕ್ರದ ಲಾರಿ ಸೇರಿದಂತೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧವಿದೆ. ಸರ್ಕಾರದ ಅಧಿಕೃತ ಆದೇಶವಿದ್ದರೂ ಕೂಡ ಅಪಾಯಕಾರಿ ತಿರುವಿನ ಚಾರ್ಮಾಡಿ ಘಾಟಿಯಲ್ಲಿ ಅಷ್ಟು ದೊಡ್ಡ ವಾಹನಗಳು ಹೇಗೆ ಹೋಗಿದ್ದಾವೆ ಅನ್ನೋದು ಯಕ್ಷಪ್ರಶ್ನೆಯಾಗಿದೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರು ಹಾಗೂ ಚಿಕ್ಕಮಗಳೂರು ಗಡಿಯಾಗಿರುವ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಹಾಗೂ ಇತರೆ ಅಧಿಕಾರಿಗಳು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರುಗಳ ಕಣ್ಣುಗಳನ್ನು ತಪ್ಪಿಸಿ 12 ಚಕ್ರದ ಲಾರಿ ಹೇಗೆ ಹೋಯಿತು ಅನ್ನೋದು ಸ್ಥಳೀಯರ ಅನುಮಾನಕ್ಕೂ ಕಾರಣವಾಗಿದೆ.

ಹೀಗೆ ಭಾರಿ ವಾಹನದಿಂದ ಟ್ರಾಫಿಕ್ ಜಾಮ್ ಉಂಟಾದರೆ ಆಂಬುಲೆನ್ಸ್ ಕೂಡ ಹೇಗೆ ಹೋಗೋದು ಅನ್ನೋದು ಸ್ಥಳೀಯರ ಪ್ರಶ್ನೆಯಾಗಿದೆ. ಹಾಗಾಗಿ ಸರ್ಕಾರ ಹಾಗೂ ಪೊಲೀಸರ ವಿರುದ್ಧ ಅಸಮಾಧಾನ ಹೊರ ಹಾಕಿರುವ ಸ್ಥಳೀಯರು ಹಾಗೂ ವಾಹನ ಸವಾರರು ಕೂಡಲೇ ಚಾರ್ಮಾಡಿ ಘಾಟಿಯಲ್ಲಿ ಭಾರಿ ವಾಹನಗಳ ಓಡಾಟಕ್ಕೆ ಕಟ್ಟುನಿಟ್ಟಿನ ಬ್ರೇಕ್ ಹಾಕಬೇಕೆಂದು ಆಗ್ರಹಿಸಿದ್ದಾರೆ.

ಪೋಟೋ ಪೈಲ್‌ ನೇಮ್‌ 4 ಕೆಸಿಕೆಎಂ 4ಚಾರ್ಮಾಡಿ ಘಾಟ್‌ನ 2ನೇ ತಿರುವಿನಲ್ಲಿ 12 ಚಕ್ರದ ಲಾರಿ ಲಾಕ್‌ ಆಗಿರುವುದು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

163 ವೈದ್ಯ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
ಅನೈತಿಕ ಸಂಬಂಧ ಮುಚ್ಚಿಕೊಳ್ಳಲುಸುಳ್ಳು ವಂಚನೆಯ ಕಥೆ ಕಟ್ಟಿದ ಪತಿ