- ಮಹಾರಾಷ್ಟ್ರ-ಕರ್ನಾಟಕ ಗಡಿಯಲ್ಲಿ ನರರೋಗ ಆತಂಕ
- ಮಹಾರಾಷ್ಟ್ರದ ಪಂಢರಪುರ, ಪುಣೆ, ಕೊಲ್ಹಾಪುರ, ಸಾಂಗ್ಲಿ, ಅಕ್ಕಲಕೋಟೆಯಲ್ಲಿ ಜಿಬಿಎಸ್ ವ್ಯಾಧಿ ವ್ಯಾಪಕ
- ಮಹಾರಾಷ್ಟ್ರ ಗಡಿಯಲ್ಲಿನ ನಿಪ್ಪಾಣಿ, ಚಿಕ್ಕೋಡಿ, ಅಥಣಿ, ಕಾಗವಾಡ, ಸಂಕೇಶ್ವರ ಜನರಲ್ಲಿ ತೀವ್ರ ಆತಂಕ- ನಿಪ್ಪಾಣಿ ವೃದ್ಧನಿಗಿಂತ ಮೊದಲೇ ಹುಕ್ಕೇರಿಯ 14 ವರ್ಷದ ಬಾಲಕ ಜಿಬಿಎಸ್‌ನಿಂದ ಮೃತಪಟ್ಟಿರುವ ಶಂಕೆ
- ಜಿಬಿಎಸ್ ಸೋಂಕಿತರು ಕಂಡು ಬಂದಲ್ಲಿ ಅವರಿಗೆ ಸೂಕ್ತ ಚಿಕಿತ್ಸೆ, ಯಾರಿಗೂ ಆತಂಕ ಬೇಡ: ವೈದ್ಯರು
ಕನ್ನಡಪ್ರಭ ವಾರ್ತೆ ಬೆಳಗಾವಿ
ಇದು ರಾಜ್ಯದೊಂದಿಗೆ ಗಡಿ ಹಂಚಿಕೊಂಡಿರುವ ನಿಪ್ಪಾಣಿ, ಚಿಕ್ಕೋಡಿ, ಅಥಣಿ, ಕಾಗವಾಡ, ಸಂಕೇಶ್ವರ ಭಾಗದ ಜನರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.ಮಹಾರಾಷ್ಟ್ರದಲ್ಲಿ ವ್ಯಾಪಕ ಸೋಂಕು:
ಈ ಮಧ್ಯೆ, ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ದೋನೆವಾಡಿ ಗ್ರಾಮದ ಯೆತಿಲ್ ಬಾಳಗೌಡ ಪಾಟೀಲ (64) ಸೋಮವಾರ ಜಿಬಿಎಸ್ ಸೋಂಕಿಗೆ ಬಲಿಯಾಗಿರುವುದನ್ನು ಕೊಲ್ಲಾಪುರದ ಆಸ್ಪತ್ರೆ ದೃಢಪಡಿಸಿದೆ. ಈ ಮಧ್ಯೆ, ಮೂರ್ನಾಲ್ಕು ದಿನಗಳ ಹಿಂದೆ ಹುಕ್ಕೇರಿ ತಾಲೂಕಿನ 14 ವರ್ಷದ ಬಾಲಕ ಕೂಡ ಇದೇ ಸೋಂಕಿನಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಒಂದು ವೇಳೆ ಬಾಲಕನ ಸಾವು ಈ ಸೋಂಕಿನಿಂದಲೇ ಎಂಬುದು ವೈದ್ಯಕೀಯ ವರದಿಯಲ್ಲಿ ಖಚಿತವಾದಲ್ಲಿ ಜಿಲ್ಲೆಯಲ್ಲಿ ಜಿಬಿಎಸ್ ಸೋಂಕಿಗೆ ರಾಜ್ಯದ ಇಬ್ಬರು ಬಲಿಯಾದಂತಾಗುತ್ತದೆ.
ಬ್ಯಾಕ್ಟೀರಿಯಾ ಮತ್ತು ವೈರಲ್ ಸೋಂಕಿನಿಂದ ಜಿಬಿಎಸ್ ಸೋಂಕು ಬರುತ್ತದೆ. ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಜನರಲ್ಲಿ ಜಿಬಿಎಸ್ ವೇಗವಾಗಿ ಆಕ್ರಮಣ ಮಾಡುತ್ತದೆ. ಈ ವೈರಸ್, ನರಗಳ ಮೇಲೆಯೇ ಹೆಚ್ಚು ಪರಿಣಾಮ ಬೀರುತ್ತದೆ. ಇದು ಸಾಂಕ್ರಾಮಿಕ ರೋಗವಲ್ಲವಾದರೂ ಮುಂಜಾಗ್ರತಾ ಕ್ರಮ ಅಗತ್ಯ ಎಂದು ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್.ಎಸ್.ಗಡಾದ ‘ಕನ್ನಡಪ್ರಭ’ಕ್ಕೆ ತಿಳಿಸಿದ್ದಾರೆ.
---
ಬೆಳಗಾವಿ ಜಿಲ್ಲೆಯಲ್ಲಿ ಜಿಬಿಎಸ್ ಸೋಂಕಿನಿಂದ ವೃದ್ಧರೊಬ್ಬರು ಮೃತಪಟ್ಟಿರುವುದನ್ನು ಕೊಲ್ಹಾಪುರ ಸಿಪಿಆರ್ ಆಸ್ಪತ್ರೆ ದೃಢಪಡಿಸಿದೆ. ಶಂಕಿತ ಜಿಬಿಎಸ್ ಸೋಂಕಿತರು ಕಂಡು ಬಂದಲ್ಲಿ ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುವುದು. ಈ ಬಗ್ಗೆ ಯಾರೂ ಆತಂಕ ಪಡುವ ಅಗತ್ಯಇಲ್ಲ.- ಡಾ.ಎಸ್.ಎಸ್.ಗಡಾದ, ಜಿಲ್ಲಾ ಆರೋಗ್ಯಾಧಿಕಾರಿ