- ಸ್ಮಾರ್ಟ್ ಸಿಟಿ, ಕನ್ನಡ ಸಂಸ್ಕೃತಿ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ - - - ಕನ್ನಡಪ್ರಭ ವಾರ್ತೆ, ದಾವಣಗೆರೆ
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಸೋಮವಾರ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾ ರಂಗ ಮಂದಿರ ನಿರ್ಮಾಣಕ್ಕೆ ₹4.34 ಕೋಟಿ ಅನುದಾನದಲ್ಲಿ ಕಾಮಗಾರಿ ಕೈಗೆತ್ತಿಕೊಂಡಿದೆ. ಅನುದಾನದ ಕೊರತೆಯಿಂದಾಗಿ ಅದು ಪೂರ್ಣವಾಗಿಲ್ಲ. ಹೆಚ್ಚುವರಿಯಾಗಿ ₹4 ಕೋಟಿ ಅನುದಾನ ಅವಶ್ಯಕತೆ ಇದೆ. ರಂಗ ಮಂದಿರ ಪೂರ್ಣಗೊಂಡರೆ ಇಲ್ಲಿನ ಜನರಿಗೂ ಅನುಕೂಲ ಆಗಲಿದೆ ಎಂದರು.
ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಮಾತನಾಡಿ, ಸ್ಮಾರ್ಟ್‍ಸಿಟಿಯಲ್ಲಿ ಉಳಿತಾಯವಾದ ಅನುದಾನ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಉಳಿದ ಅನುದಾನ ಬಳಸಿ, ಅಪೂರ್ಣವಾಗಿರುವ ರಂಗಮಂದಿರ ನಿರ್ಮಾಣ ಮಾಡಬಹುದು. ಇದಕ್ಕೆ ಸರ್ಕಾರದ ಅನುಮತಿ ಬೇಕೆಂದು ಪ್ರಸ್ತಾಪಿಸಿದರು. ಇದಕ್ಕೆ ಉಸ್ತುವಾರಿ ಕಾರ್ಯದರ್ಶಿಗಳು, ಈ ಬಗ್ಗೆ ವಿವರವಾದ ಪ್ರಸ್ತಾವನೆ ವರದಿಯೊಂದಿಗೆ ನೀಡಲು ಸೂಚನೆ ನೀಡಿದರು.ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಮಾತನಾಡಿ, ಜಿಲ್ಲೆಯಲ್ಲಿ ಗೃಹಲಕ್ಷ್ಮಿಯಡಿ 366536 ಮಹಿಳೆಯರು ನೋಂದಾಯಿಸಿದ್ದು, ಜೂನ್‍ನಲ್ಲಿ 358289 ಮಹಿಳೆಯರಿಗೆ ಸಹಾಯಧನ ಪಾವತಿಸಲಾಗಿದೆ. ಜಿಎಸ್‍ಟಿ ಹಾಗೂ ಇತರೆ ತಾಂತ್ರಿಕ ಸಮಸ್ಯೆಯಿಂದ ಗೃಹಲಕ್ಷ್ಮಿ ಹಣ ಪಾವತಿ ಆಗದಿದ್ದಲ್ಲಿ ಸರಿಪಡಿಸಬೇಕು ಎಂದು ಹೇಳಿದರು.
ಕೃಷಿ ಇಲಾಖೆ ಅಧಿಕಾರಿಗಳು ಮಾತನಾಡಿ, ಜಿಲ್ಲೆಯಲ್ಲಿ ಜನವರಿಯಿಂದ ಆ.21ರವರೆಗೆ 363 ಮಿಮೀ ವಾಡಿಕೆಗೆ 566 ಮಿ.ಮೀ. ಮಳೆಯಾಗಿದೆ. ಕೃಷಿ ಚಟುವಟಿಕೆಗಳು ಉತ್ತಮವಾಗಿವೆ. ಈ ಮುಂಗಾರು ಹಂಗಾಮಿನಲ್ಲಿ 2.46 ಲಕ್ಷ ಹೆಕ್ಟೇರ್ ಬಿತ್ತನೆ ಗುರಿಯಲ್ಲಿ ಈವರೆಗೆ 2.42 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆ ಮಾಡಲಾಗಿದೆ. ವಾರದಲ್ಲಿ ಭತ್ತ ನಾಟಿ ಮುಕ್ತಾಯವಾಗಲಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ವಿವರಿಸಿದರು. ಜಿಲ್ಲಾಧಿಕಾರಿ ಮಾತನಾಡಿ, ಅಧಿಕ ಮಳೆಯಿಂದ 730 ಹೆಕ್ಟೇರ್ ಕೃಷಿ ಬೆಳೆಗಳ ಹಾಗೂ 68 ಎಕರೆ ತೋಟಗಾರಿಕೆ ಬೆಳೆಗೆ ನಷ್ಟವಾಗಿದ್ದು, ಪರಿಹಾರ ನೀಡಲು ಸರ್ಕಾರಕ್ಕೆ ಜಂಟಿ ವರದಿ ನೀಡಲಾಗಿದೆ ಎಂದು ಹೇಳಿದರು.
ಜಿಪಂ ಸಿಇಒ ಸುರೇಶ ಬಿ. ಇಟ್ನಾಳ್ ಮಾತನಾಡಿ, ಮಕ್ಕಳ ಸ್ಕೋರಿಂಗ್ ಮತ್ತು ಪಾಸಿಂಗ್ ಪ್ಯಾಕೇಜ್ ಅನ್ವಯ ಪ್ರಶ್ನೋತ್ತರ ಸಿದ್ಧಪಡಿಸಿ ಮಕ್ಕಳಿಗೆ ಕಲಿಸಲಾಗುತ್ತದೆ. ಶಾಲೆ ಕೊಠಡಿಗಳ ಸಮಸ್ಯೆ ನಿವಾರಿಸಲು ವಿವೇಕ ಯೋಜನೆ, ವಿಶೇಷ ಅನುದಾನ, ದುರಸ್ತಿ, ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಕೊಠಡಿಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು. ಗ್ರಾಮೀಣ ನೀರು ಜೆಜೆಎಂ ಪ್ರಗತಿ, ರಸ್ತೆಗಳ ನಿರ್ಮಾಣ, ವಸತಿ ಯೋಜನೆ, ಪಡಿತರ ಕಾರ್ಡ್ ನೀಡಿಕೆಯ ಪ್ರಗತಿ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆಯನ್ನು ಉಸ್ತುವಾರಿ ಕಾರ್ಯದರ್ಶಿಗಳು ನಡೆಸಿದರು.
ಕೋಟ್ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಹಾಸ್ಟೆಲ್‍ಗಳನ್ನು ನಡೆಸಲಾಗುತ್ತಿದ್ದು, ನಿರ್ವಹಣೆ ಉತ್ತಮವಾಗಿದೆ. ಇನ್ನೂ ಹೆಚ್ಚಿನ ಮೂಲಭೂತ ಸೌಕರ್ಯದ ಅಗತ್ಯವಿದೆ. ಹಂತ ಹಂತವಾಗಿ ನಿವೇಶನ ಪಡೆದು ಕಟ್ಟಡ ನಿರ್ಮಾಣ ಮಾಡಲು ತಿಳಿಸಿ, ಸರ್ಕಾರದ ಮಟ್ಟದಲ್ಲಿ ಆಗಬೇಕಿರುವ ಪ್ರಸ್ತಾವನೆಗಳಿದ್ದಲ್ಲಿ ವಿವರ ನೀಡಬೇಕು
- - - -26ಕೆಡಿವಿಜಿ4, 5: