ಕನ್ನಡಪ್ರಭ ವಾರ್ತೆ ಬೆಂಗಳೂರು
ಭಾನುವಾರ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ನಗರದಲ್ಲಿ ನೆಲೆಸಿರುವ ‘ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಂಧುಗಳೊಂದಿಗೆ ಸಮ್ಮಿಲನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಅಂಬೇಡ್ಕರ್ ಜಯಂತಿ ದಿನಾಚರಣೆಯಂದೇ ನಮ್ಮ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದ್ದೇವೆ. ರಾಮ ಮಂದಿರ ನಿರ್ಮಿಸಬೇಕು ಎಂಬ 400 ವರ್ಷದ ಕನಸನ್ನು ನನಸು ಮಾಡಿದ್ದು ಮೋದಿಯವರು ಎಂದು ಹೇಳಿದರು.
ಈಶ್ವರಪ್ಪ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯವಾಗಿ ಸ್ಪರ್ಧೆ ಮಾಡುತ್ತಿದ್ದಾರೆ. ಅವರು ಏನೇ ಹೇಳಲಿ ನಾನು ಅದು ಅವರ ಆಶೀರ್ವಾದ ಎಂದು ತೆಗೆದುಕೊಳ್ಳುತ್ತೇನೆ. ಅವರು ಹಿರಿಯರಿದ್ದಾರೆ. ಆದರೆ ಯಡಿಯೂರಪ್ಪನವರ ಕುಟುಂಬದ ಬಗ್ಗೆ ಪ್ರಸ್ತಾಪಿಸಿದ್ದಾರೆ. ಈ ಬಗ್ಗೆ ನಾನೂ ಪತ್ರಿಕಾಗೋಷ್ಠಿ ನಡೆಸಬಹುದು, ಒಂದು ಗಂಟೆ ಮಾತನಾಡಬಹುದು. ಆದರೆ ಇದನ್ನು ನಾನು ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.ಹಿಂದುತ್ವದ ಬಗ್ಗೆ ಈಶ್ವರಪ್ಪ ಮಾತನಾಡಿದ್ದಾರೆ. ಯಡಿಯೂರಪ್ಪ ಅವರಿಗಿಂತ ಹಿಂದುತ್ವದ ನಾಯಕ ಬೇಕಾ? ಹುಬ್ಬಳ್ಳಿ ಈದ್ಗಾ ಮೈದಾನದ ಹೋರಾಟದಲ್ಲಿ ಯಡಿಯೂರಪ್ಪ ಭಾಗಿಯಾಗಿರಲಿಲ್ಲವೇ? ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ಹಾಕಿಕೊಂಡು ಪ್ರಚಾರ ನಡೆಸುವ ಈಶ್ವರಪ್ಪ ಅವರ ರಾಜಕೀಯ ಕೈಗೂಡುವುದಿಲ್ಲ. ನನ್ನ ಮತ್ತು ಕುಟುಂಬದ ಬಗ್ಗೆ ವೈಯಕ್ತಿಕ ಟೀಕೆ ಮಾಡಿ ಅಪಪ್ರಚಾರ ಮಾಡುತ್ತಿದ್ದಾರೆ. ಶಿವಮೊಗ್ಗದ ಅಭಿವೃದ್ಧಿ ಬಗ್ಗೆ ಮಾತನಾಡುತ್ತಿಲ್ಲ ಎಂದು ಟೀಕಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಶೂನ್ಯವಾಗಿದೆ. ನಾವು ಸಾಧನೆಯ ಆಧಾರದ ಮೇಲೆ ಮತ ಕೇಳುತ್ತಿದ್ದೇವೆ. ಶಿವಮೊಗ್ಗದಲ್ಲಿ ರಾಘವೇಂದ್ರ ಅವರು ತಂದೆ ಯಡಿಯೂರಪ್ಪ ಅವರಿಗಿಂತ ಹತ್ತು ಪಟ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಆದ್ದರಿಂದ ಅವರನ್ನು ಬೆಂಬಲಿಸಬೇಕು ಎಂದು ಕೋರಿದರು.