- ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಶಾಸಕ ಶಿವಗಂಗಾ
ಕನ್ನಡಪ್ರಭ ವಾರ್ತೆ ಚನ್ನಗಿರಿ
ರಾಜ್ಯದಲ್ಲಿ ಆಡಳಿತದಲ್ಲಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೇಸ್ ಸರ್ಕಾರ ಅಭಿವೃದ್ಧಿ ಪರವಾದ ಸರ್ಕಾರವಾಗಿದೆ. ಬಡಜನತೆಗೆ ಗ್ಯಾರಂಟಿ ಯೋಜನೆಗಳನ್ನು ಕೊಡುವ ಜೊತೆಗೆ ಅಭಿವೃದ್ಧಿ ಮಾಡುತ್ತ ಮುನ್ನಡೆಯುತ್ತಿದೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಹೇಳಿದರು.ಮಂಗಳವಾರ ತಾಲೂಕಿನ ಮಾದೇನಹಳ್ಳಿ ಗ್ರಾಮದಲ್ಲಿ ₹1 ಕೋಟಿ ವೆಚ್ಚದ ಮಾದೇನಹಳ್ಳಿ ಗ್ರಾಮದಿಂದ ಶ್ರೀನಿವಾಸ ಪುರಕ್ಕೆ ಹೋಗುವ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ, ₹25 ಲಕ್ಷ ವೆಚ್ಚದಲ್ಲಿ ಚರಂಡಿ ನಿರ್ಮಾಣ, ₹20 ಲಕ್ಷ ವೆಚ್ಚದಲ್ಲಿ ಸೇವಾಲಾಲ್ ಭವನ ಕಾಮಗಾರಿ, ₹14.50 ಲಕ್ಷ ವೆಚ್ಚದಲ್ಲಿ ಹೊಸೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಗಳ ನಿರ್ಮಾಣ, ಕೆ.ಗಾಣದಕಟ್ಟೆ ಗ್ರಾಮದಲ್ಲಿ ₹43.50 ಲಕ್ಷ ವೆಚ್ಚದಲ್ಲಿ ಸರ್ಕಾರಿ ಶಾಲೆಯ ಕೊಠಡಿಗಳ ನಿರ್ಮಾಣ, ಜೋಳದಾಳ್ ಗ್ರಾಮದಲ್ಲಿ ₹72 ಲಕ್ಷ ವೆಚ್ಚದಲ್ಲಿ ಸರ್ಕಾರಿ ಶಾಲೆಯ 4 ಕೊಠಡಿಗಳ ನಿಮಾಣ, ₹5 ಲಕ್ಷ ವೆಚ್ಚದಲ್ಲಿ ಕುಕ್ಕುವಾಡೇಶ್ವರಿ ದೇವಾಲಯದ ಮಹಾದ್ವಾರ ನಿರ್ಮಾಣ ಒಟ್ಟು ₹2.80 ಕೋಟಿ ವೆಚ್ಚದ ವಿವಿಧ ಕಾಮಗಾರಿ ಕೆಲಸಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಕ್ಷೇತ್ರದಲ್ಲಿ ಆಗುತ್ತಿರುವ ಅಭಿವೃದ್ಧಿ ಕೆಲಸಗಳನ್ನು ಸಹಿಸದ ಕೆಲವರು ವಿನಾಕಾರಣ ಅರೋಪಗಳನ್ನು ಮಾಡುತ್ತ ಹೋಗುತ್ತಿದ್ದಾರೆ. ಅವರಿಗೆ ಉತ್ತರ ಕೊಡುತ್ತ ಕಾಲಹರಣ ಮಾಡುವ ಬದಲು ಅಭಿವೃದ್ಧಿ ಕೆಲಸಗಳಿಗೆ ಒತ್ತು ನೀಡಿ, ನನ್ನ ಅಭಿವೃದ್ಧಿ ಕೆಲಸಗಳೇ ಅವರಿಗೆ ಉತ್ತರವಾಗಬೇಕು. ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇನೆ. ಕ್ಷೇತ್ರದ ಪ್ರತಿ ಗ್ರಾಮದಲ್ಲಿಯೋ ಒಂದಿಲ್ಲೊಂದು ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ರಾಜ್ಯದ ಸಿಎಂ ಸಹಾ ನನಗೆ ಹೆಚ್ಚಿನ ಸಹಕಾರ ನೀಡುತ್ತಿದ್ದಾರೆ ಎಂದರು.
- - -
₹2.80 ಕೋಟಿ ವೆಚ್ಚದ ವಿವಿಧ ಕಾಮಗಾರಿ ಕೆಲಸಗಳಿಗೆ ಶಾಸಕ ಬಸವರಾಜು ವಿ.ಶಿವಗಂಗಾ ಗುದ್ದಲಿ ಪೂಜೆ ನೆರವೇರಿಸಿದರು.