ಆಂಥೆಮ್ ಬಯೋಸೈನ್ಸಸ್ ಲಿಮಿಟೆಡ್ ಸಂಸ್ಥೆಯಿಂದ 500ಕ್ಕೂ ಹೆಚ್ಚು ಗಿಡ ನೆಡುವ ಕಾರ್ಯ

KannadaprabhaNewsNetwork |  
Published : Sep 02, 2026, 02:15 AM IST
1ಕೆಆರ್ ಎಂಎನ್ 5.ಜೆಪಿಜಿಹಾರೋಹಳ್ಳಿ ಕೈಗಾರಿಕಾ ಕ್ಷೇತ್ರದ ಆಂಥೆಮ್ ಬಯೋಸೈನ್ಸಸ್ ಲಿಮಿಟೆಡ್ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ರಸ್ತೆಯ ಇಕ್ಕೆಲಗಳಲ್ಲಿ 500ಕ್ಕೂ ಹೆಚ್ಚು ಗಿಡ ನೆಡುವ ಕಾರ್ಯಕ್ರಮ ನಡೆಯಿತು. | Kannada Prabha

ಸಾರಾಂಶ

ಈಗಾಗಲೇ ಎರಡು ವರ್ಷಗಳಲ್ಲಿ 15 ಸಾವಿರದಷ್ಟು ಗಿಡಗಳನ್ನು ನೆಟ್ಟು ಸ್ವತಃ ನಾವೇ ಪೋಷಿಸುವ ಜವಾಬ್ದಾರಿಯನ್ನು ಹೊಂದಿದ್ದೇವೆ. ಇದು ಪರಿಸರ ಸಂರಕ್ಷಣೆ ಕುರಿತು ಸಾಮಾನ್ಯ ಜನರಲ್ಲಿ ಅರಿವು ಮುಡಿಸುವುದು ನಮ್ಮ ಉದ್ದೇಶವಾಗಿದೆ ಎಂದರು.

ಕನ್ನಡಪ್ರಭ ವಾರ್ತೆ ಹಾರೋಹಳ್ಳಿ

ಗಿಡ, ಮರ, ಪ್ರಾಣಿ ಮತ್ತು ಪಕ್ಷಿಗಳು ಪ್ರಕೃತಿಯ ಅವಿಭಾಜ್ಯ ಅಂಗ, ಇದು ಪರಿಸರ ಸಮತೋಲನಕ್ಕೆ ಸಹಕಾರಿಯಾಗಿದೆ ಎಂದು ವಲಯ ಅರಣ್ಯಾಧಿಕಾರಿ ರಂಜಿತ ಹೇಳಿದರು.

ಹಾರೋಹಳ್ಳಿ ಕೈಗಾರಿಕಾ ಕ್ಷೇತ್ರದ ಆಂಥೆಮ್ ಬಯೋಸೈನ್ಸಸ್ ಲಿಮಿಟೆಡ್ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ರಸ್ತೆಯ ಇಕ್ಕೆಲಗಳಲ್ಲಿ 500ಕ್ಕೂ ಹೆಚ್ಚು ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಹಾರೋಹಳ್ಳಿ ಕೈಗಾರಿಕಾ ಕ್ಷೇತ್ರದಲ್ಲಿರುವ ಆಂಥೆಮ್ ಬಯೋಸೈನ್ಸಸ್ ಲಿಮಿಟೆಡ್ ಸಂಸ್ಥೆ 25 ಕಾರ್ಮಿಕರ ತಂಡದೊಂದಿಗೆ 500ಕ್ಕೂ ಹೆಚ್ಚು ಗಿಡಗಳನ್ನು ನೆಡುತ್ತಿರುವುದು ಪರಿಸರಕ್ಕೆ ಅನುಕೂಲವಾಗಲಿದೆ. ರಸ್ತೆಬದಿ ಗಿಡ ನೆಡುವ ಕಾರ್ಯಕ್ರಮವು ಮಾನವನ ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರಲಿದೆ. ಇಂದು ನೆಡುತ್ತಿರುವ ಗಿಡಗಳು ಮುಂದೆ ಪರಿಸರ ಉಳಿವಿಗೆ ಸಹಕಾರಿಯಾಗಲಿದೆ. ಜೊತೆಗೆ ಪರಿಸರ ಸಮತೋಲನವಾಗಲಿದೆ ಎಂದರು.

ಆಂಥೆಮ್ ಬಯೋಸೈನ್ಸಸ್ ಲಿಮಿಟೆಡ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಸಿ.ರವೀಂದ್ರ ಮಾತನಾಡಿ, ಪ್ರತಿಯೊಬ್ಬರೂ ನೆಮ್ಮದಿಯ ಬದುಕು ನಡೆಸಬೇಕಾದರೆ ಪರಿಸರ ಸಮತೋಲನದಿಂದ ಕೂಡಿರಬೇಕು, ನಮ್ಮ ಸಂಸ್ಥೆ ಪ್ರಕೃತಿಯೇ ನಮ್ಮ ಜೀವ ನಾಡಿ, ಹಸಿರು ಪರಿಸರವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ ಎನ್ನುವ ನಿಟ್ಟಿನಲ್ಲಿ ಹಾರೋಹಳ್ಳಿ ಕೈಗರಿಕಾ ಕ್ಷೇತ್ರದಲ್ಲಿ ಪ್ರಪ್ರಥಮವಾಗಿ ಸಾವಿರಾರು ಗಿಡಮರಗಳನ್ನು ನೆಟ್ಟು ಎರಡು ವರ್ಷದಿಂದಲೂ ಪೋಷಿಸುತ್ತಾ ಬಂದಿದೆ ಎಂದು ಹೇಳಿದರು.

ಭೂಮಿಯ ಮೇಲೆ ಗಿಡಮರಗಳು ಎಷ್ಟು ದಿನ ಉಸಿರಾಡುತ್ತವೆಯೋ ಅಷ್ಟು ದಿನ ಮಾತ್ರ ಮಾನವ ಬದುಕಲು ಸಾಧ್ಯ ಎನ್ನುವ ಮಂತ್ರದಡಿ ಹಾರೋಹಳ್ಳಿ 3ನೇ ಹಂತದ ಕೈಗಾರಿಕಾ ಪ್ರದೇಶದಲ್ಲಿ 500 ಗಿಡಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಈಗಾಗಲೇ ಎಡ ಮತ್ತು ಬಲ ಭಾಗದಲ್ಲಿ ತಲಾ ಮೂರು ಕಿ.ಮೀ ನಂತೆ 6 ಕಿ.ಮೀ ನಷ್ಟು ಗಿಡಗಳನ್ನು ನೆಟ್ಟು ಸಂರಕ್ಷಣೆ ಮಾಡಲಾಗುತ್ತಿದೆ. ಈ ಅಭಿಯಾನವು ಆಂಥೆಮ್ ಸರ್ಕಲ್ನಲ್ಲಿ ವಿವಿಧ ಬಗೆಯ 3 ಸಾವಿರ ಗಿಡಗಳನ್ನು ನೆಡುವ ಗುರಿ ನಮ್ಮ ಮುಂದಿದೆ ಎಂದು ತಿಳಿಸಿದರು.

ಈಗಾಗಲೇ ಎರಡು ವರ್ಷಗಳಲ್ಲಿ 15 ಸಾವಿರದಷ್ಟು ಗಿಡಗಳನ್ನು ನೆಟ್ಟು ಸ್ವತಃ ನಾವೇ ಪೋಷಿಸುವ ಜವಾಬ್ದಾರಿಯನ್ನು ಹೊಂದಿದ್ದೇವೆ. ಇದು ಪರಿಸರ ಸಂರಕ್ಷಣೆ ಕುರಿತು ಸಾಮಾನ್ಯ ಜನರಲ್ಲಿ ಅರಿವು ಮುಡಿಸುವುದು ನಮ್ಮ ಉದ್ದೇಶವಾಗಿದೆ ಎಂದರು.

ಸಂಸ್ಥೆಯ ಎಂಜಿನಿಯರ್ ಮುಖ್ಯಸ್ಥ ಶಿವಣ್ಣ, ಕಾರ್ಯ ಮುಖ್ಯಸ್ಥ ಕರುಣಾನಿಧಿ, ಎಚ್.ಆರ್. ಡಿಪಾರ್ಟ್ಮೆಂಟರ್ ಸುನಿಲ್ಕುಮಾರ್, ಅರಣ್ಯ ಇಲಾಖೆಯ ವನಪಾಲಕ ಲೋಕೇಶ್, ಸಂಸ್ಥೆಯ ನೌಕರರು, ಸಿಬ್ಬಂದಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈತರಿಗೆ ₹18 ಕೋಟಿ ಪರಿಹಾರ ಶೀಘ್ರದಲ್ಲೇ ಮಂಜೂರು: ಸಚಿವ ಪ್ರಿಯಾಂಕ್ ಖರ್ಗೆ
ಅಧ್ಯಯನ, ಅನುಭವದಿಂದ ಉತ್ತಮ ಸಾಹಿತ್ಯ ಸೃಷ್ಟಿ ಸಾಧ್ಯ