ಕನ್ನಡಪ್ರಭ ವಾರ್ತೆ ವಿಜಯಪುರ
ಈ ವೇಳೆ ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಮಾತನಾಡಿ, ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಎಸ್‌ಸಿಪಿ-ಟಿಎಸ್‌ಪಿ ಅನುದಾನಕ್ಕೂ ಕೈ ಹಾಕಿ ದಲಿತ ವರ್ಗದ ಜನರಿಗೆ ಬಹುದೊಡ್ಡ ಅನ್ಯಾಯ ಮಾಡುತ್ತಿದೆ. ೨೦೨೩ರಲ್ಲಿ ಎಸ್‌ಸಿಪಿ ಅಡಿಯಲ್ಲಿ ₹೭೭೧೩.೧೫ ಕೋಟಿ ಹಾಗೂ ಟಿಎಸ್‌ಪಿ ಅಡಿ ₹ ೩೪೩೦.೮೫ ಕೋಟಿ ಸೇರಿ ಒಟ್ಟು ₹ ೧೧೧೪೪ ಕೋಟಿ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿದ್ದಾರೆ. ಇದಕ್ಕೆ ಪ್ರಬಲ ವಿರೋಧ ವ್ಯಕ್ತವಾದರೂ ಸರ್ಕಾರ ತನ್ನ ಚಾಳಿ ಮುಂದುವರೆಸಿ ೨೦೨೪ರಲ್ಲಿಯೂ ಎಸ್‌ಸಿಪಿ ಅಡಿಯಲ್ಲಿ ₹ ೯೯೮೦.೬೬ ಕೋಟಿ ಹಾಗೂ ಟಿಎಸ್‌ಪಿ ಅಡಿಯಲ್ಲಿ ₹ ೪೩೦೨ ಕೋಟಿ ಸೇರಿದಂತೆ ಒಟ್ಟು ೧೪,೨೮೨.೬೮ ಕೋಟಿ ಬಳಕೆ ಮಾಡಿಕೊಂಡು ಮತ್ತೊಮ್ಮೆ ಘೋರ ಅನ್ಯಾಯವೆಸಗಿದೆ. ಉಳಿದ ವರ್ಗದವರಿಗೆ ಸರ್ಕಾರದ ಖಜಾನೆಯಿಂದ ಅನುದಾನ ಬಿಡುಗಡೆಯಾಗುತ್ತಿದೆ. ಆದರೆ ದಲಿತ ಬಾಂಧವರಿಗೆ ಈ ಯೋಜನೆಯ ಹಣವನ್ನೇ ಗ್ಯಾರಂಟಿ ಯೋಜನೆಗೂ ನೀಡಿದರೆ ಹೇಗೆ?. ಇದು ಅವೈಜ್ಞಾನಿಕ ಅಷ್ಟೇ ಅಲ್ಲ ಅನ್ಯಾಯವೂ ಸಹ ಹೌದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ರಾಜ್ಯ ಸರ್ಕಾರ ದಲಿತ ಬಾಂಧವರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದೆ, ಕೇವಲ ಮಾತಿನಲ್ಲಿ ದಲಿತಪರ ಎಂದು ಹೇಳುತ್ತಿದೆ ಹೊರತು ದಲಿತ ಸಮುದಾಯಗಳ ಅಭಿವೃದ್ಧಿ ಯೋಜನೆಯ ಹಣವನ್ನು ದುರಪಯೋಗಮಾಡಿಕೊಂಡು ದಲಿತ ವಿರೋಧಿ ಎಂಬುದನ್ನು ಕಾಂಗ್ರೆಸ್ ಸಾಬೀತುಪಡಿಸಿದೆ. ಅಲ್ಪಸಂಖ್ಯಾತರಿಗೆ ಪ್ರತ್ಯೇಕ ಅನುದಾನ ಕಾಯ್ದಿರಿಸಿದೆ. ಪಂಚ ಗ್ಯಾರಂಟಿ ಯೋಜನೆಗಳಿಗೆ ಈ ಅನುದಾನ ಬಳಕೆ ಮಾಡುತ್ತಿಲ್ಲ, ಆದರೆ ದಲಿತ ಬಾಂಧವರಿಗೆ ಗ್ಯಾರಂಟಿ ಯೋಜನೆಗಳಿಗೆ ನೀಡುವಾಗ ದಲಿತರ ಶ್ರೇಯೋಭಿವೃದ್ಧಿಗಾಗಿ ಇರಿಸಿದ ಅನುದಾನ ಬಳಕೆ ಮಾಡುತ್ತಿದೆ, ಇದು ಯಾವ ಸೀಮೆಯ ನ್ಯಾಯ? ಎಂದು ಪ್ರಶ್ನಿಸಿದರು.ಬಿಜೆಪಿ ಯುವ ಮುಖಂಡ ಮಹೇಂದ್ರಕುಮಾರ ನಾಯಕ ಮಾತನಾಡಿ, ಕಾಂಗ್ರೆಸ್ ದಲಿತ ವಿರೋಧಿತಬ ನಿನ್ನೆಯದಲ್ಲ, ಕೇವಲ ಬಾಯಿಮಾತಿನಲ್ಲಿ ದಲಿತಪರ ಎಂದು ಹೇಳುವ ಕಾಂಗ್ರೆಸ್‌ಗೆ ದಲಿತರ ಮೇಲೆ ಎಳ್ಳಷ್ಟೂ ಕಾಳಜಿ ಇಲ್ಲ ಎಂದರು.